ಸಾರ್ವಜನಿಕರ ಗಮನಕ್ಕೆ, 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್; ಆಗುಂಬೆ ಘಾಟಿ ಬಂದ್!

Published : Jun 15, 2025, 11:56 AM IST

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗಲಿದ್ದು, ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.

PREV
15

ರಾಜ್ಯದಲ್ಲಿ ಮುಂದಿನ ಮೂರು ದಿನಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ.

25

ರೆಡ್‌ ಅಲರ್ಟ್

ಇಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಭಾರೀ ಮಳೆಯಾಗಲಿದೆ. ಹಾಗಾಗಿ ಈ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಗತ್ಯ ಕೆಲಸಗಳಿದ್ರೆ ಮನೆಯಿಂದ ಹೊರಗೆ ಬರುವಂತೆ ಮನವಿ ಮಾಡಿಕೊಳ್ಳಲಾಗಿದೆ.

35

ಬೆಳಗಾವಿ, ಧಾರವಾಡ, ಗದಗ, ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ ಮೈಸೂರು, ತುಮಕೂರು ಸೇರಿದಂತೆ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

45

ಆಗುಂಬೆ ಘಾಟಿ ಬಂದ್!

ಆಗುಂಬೆ ಘಾಟಿಯಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು, ಜೂ.15ರಿಂದ ಸೆ.30ರವರೆಗೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರು ಆದೇಶ ಹೊರಡಿಸಿದ್ದಾರೆ.

55

ಕರ್ನಾಟಕ ವಾಹನಗಳ ನಿಯಮಾವಳಿಗಳು 1989 ಕಲಂ 221 (ಎ) 2 ಮತ್ತು 5 ರ ಅನ್ವಯ ನಿಷೇಧವನ್ನು ಹೇರಲಾಗಿದ್ದು, ಈ ಆದೇಶದ ಅನ್ವಯ ಜೂ.15ರಿಂದ ಸೆ.30ರವರೆಗೆ ಈ ಮಾರ್ಗದಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

Read more Photos on
click me!

Recommended Stories