ಜುಲೈ 2ರವರೆಗೆ ಉತ್ತಮ ಮಳೆ ಸಾಧ್ಯತೆ; ಕರಾವಳಿ, ಮಲೆನಾಡಿನ ಕೆಲ ಪ್ರದೇಶಕ್ಕೆ ಆರೆಂಜ್ ಅಲರ್ಟ್

Published : Jun 29, 2026, 06:17 AM IST

ರಾಜ್ಯದ ಕರಾವಳಿ ಮತ್ತು ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಜು.2ರವರೆಗೆ ಉತ್ತಮ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ. ಮತ್ತೊಂದೆಡೆ ರಾಯಚೂರಿನಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಇಲಾಖೆ ತಿಳಿಸಿದೆ.

PREV
13
ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಜು.2ರವರೆಗೆ ಉತ್ತಮ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ.

ಜೂ.30ರಂದು ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಜು.1ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಜು.2ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

23
ರಾಜ್ಯದಲ್ಲಿ ಮುಂಗಾರು ದುರ್ಬಲ

ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿದ್ದು, ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮಾತ್ರ ಮಳೆಯಾಗಿದೆ.

33
ರಾಯಚೂರಿನಲ್ಲಿ ಗರಿಷ್ಠ ತಾಪಮಾನ ದಾಖಲು

ಗೋಕರ್ಣದಲ್ಲಿ 6 ಸೆಂ.ಮೀ., ಹೊನ್ನಾವರ, ಕಾರವಾರ ತಲಾ 5, ಕುಂದಾಪುರ 4, ಅಂಕೋಲ ಹಾಗೂ ತಿಪಟೂರಿನಲ್ಲಿ ತಲಾ 3 ಸೆಂ.ಮೀ. ಮಳೆಯಾಗಿದೆ. ಮತ್ತೊಂದೆಡೆ ರಾಯಚೂರಿನಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಇಲಾಖೆ ತಿಳಿಸಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories