Karnataka Rain : ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ತತ್ತರಿಸಿ ಕರ್ನಾಟಕ ಜನತೆ: ಮೂವರು ಸಾವು

First Published | May 21, 2023, 8:49 PM IST

ಬೆಂಗಳೂರು (ಮೇ 21): ರಾಜ್ಯಾದ್ಯಂತ ಭಾನುವಾರ ಸುರಿದ ಭಾರಿ ಮಳೆಗೆ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಸಿಡಿಲು ಬಡಿದು, ಮರ ಬಿದ್ದು ಹಾಗೂ ನೀರಿನಲ್ಲಿ ಮುಳುಗಿದ ಪ್ರತ್ಯೇಕ ಮೂರು ಘಟನೆಗಳಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಉಳಿದಂತೆ, ಮನೆ ಮೇಲ್ಛಾವಣಿ ಹಾರಿ ಹೋಗಿರುವುದು, ಆಲಿಕಲ್ಲು ಮಳೆ, ಬೆಳೆ ನಷ್ಟ, ಇತ್ಯಾದಿ ಪ್ರಕರಣ ವರದಿಯಾಗಿವೆ.

ಚಿಕ್ಕಮಗಳೂರಿನ ಮೂಡಿಗೆರೆ ಬಳಿಯ ಚಿಕ್ಕಹಳ್ಳ ಗ್ರಾಮದ ಬಳಿ ಬೈಕ್‌ ಸವಾರನ ಮೇಲೆ 5 ಮರಗಳು ಬಿದ್ದು, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಚಾಮರಾಜನಗರ ಜಿಲ್ಲೆಯ ವಿವಿದೆಡೆ ಬಿರುಗಾಳಿ ಸಹಿತ ಮಳೆಯಾಗಿದ್ದು, ಮನೆಗಳ ಮೇಲ್ಛಾವಣಿ ಹಾರಿಹೋಗಿವೆ. ಹನೂರು ತಾಲೂಕಿನಲ್ಲಿ ಬೆಳೆದುನಿಂತಿದ್ದ ಮೆಕ್ಕೆಜೋಳದ ಬೆಳೆ ನೆಲಕಚ್ಚಿದೆ.

Tap to resize

ಹಾವೇರಿ ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಹೊಸರಿತ್ತಿ ಗ್ರಾಮದಲ್ಲಿ 10ಕ್ಕೂ ಅಧಿಕ ಮನೆಗಳ  ಶೀಟ್‌ ಮೆಲ್ಚಾವಣಿ ಹಾರಿಹೋಗಿವೆ.

ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನಲ್ಲಿ ಸುರಿದ ಬಿರುಗಾಳಿ ಮಳೆಗೆ ರಾರಾವಿ ಗ್ರಾಮದಲ್ಲಿ 10ಕ್ಕೂ ಅಧಿಕ ಮರಗಳು ಹಾಗೂ ವಿದ್ಯುತ್‌ ಕಂಬಗಳು ಮುರಿದು ಬಿದ್ದಿವೆ. 

ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ ಬಳಿ ಮಳೆ ಬರುವಾಗ ಮಾವಿನ ಮರದಡಿಯಲ್ಲಿ ನಿಂತಿದ್ದ ಯುವಕನಿಗೆ ಸಿಡಿಲು ಬಡಿದು ಸಾವನ್ನಪ್ಪಿದ್ದಾನೆ.

ಹಾವೇರಿ ಜಿಲ್ಲೆಯಲ್ಲಿ ಮಳೆರಾಯನ ಆರ್ಭಟಕ್ಕೆ ಮನೆಯ ಹೆಂಚುಗಳು ಹಾರಿ ಹೋಗಿದ್ದು, ಮನೆಯೊಳಗೆ ಇದ್ದ ವಸ್ತುಗಳನ್ನು ಸಂರಕ್ಷಣೆ ಮಾಡಲು ನಿವಾಸಿಗಳು ಪರದಾಡಿದರು.

ಹಾಸನ ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆಯಾಗಿದ್ದು, ಅರಕಲಗೂಡು ತಾಲ್ಲೂಕಿನ ಕರ್ಕಿಕೊಪ್ಪಲು ಗ್ರಾಮದಲ್ಲಿ ಘಟನೆ ಆಲಿಕಲ್ಲು ಮಳೆಗೆ ನೂರಾರು ಎಕರೆ ಬೆಳೆಹಾನಿ ಆಗಿದೆ. 

ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಭಾರಿ ಗಾತ್ರದ ಆಲಿಕಲ್ಲಿ‌ನ ಮಳೆಯಾಗಿದ್ದು, ಮನೆಯ ಹಂಚುಗಳು ಒಡೆದಿವೆ.  ಆಲಿಕಲ್ಲಿನ ಮಳೆಗೆ ಕಲ್ಪತರು ನಾಡಿನ ಜನತೆ ತತ್ತರಿಸಿ ಹೋಗಿದ್ದಾರೆ. 

ಕೋಲಾರ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆಯಾಗಿದ್ದು, ವಿವಿಧೆಡೆ 10ಕ್ಕೂ ಅಧಿಕ ಮರಗಳು ಧರೆಗುರುಳಿದ ಘಟನೆ ನಡೆದಿವೆ. ಆದರೆ, ಯಾರಿಗೂ ಪ್ರಾಣಾಪಾಯ ಆಗಿಲ್ಲ.

Latest Videos

click me!