ಇಂದಿನಿಂದ ಮುಂದಿನ 6 ದಿನ ಈ ಜಿಲ್ಲೆಗಳಲ್ಲಿ ಮಳೆ; ಗಂಟೆಗೆ 30-40 km ವೇಗದಲ್ಲಿ ಗಾಳಿ

Published : Sep 03, 2026, 10:51 AM IST

ರಾಜ್ಯದಲ್ಲಿ ಮುಂಗಾರು ಮಳೆ ಕ್ಷೀಣಿಸುತ್ತಿದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಸೆಪ್ಟೆಂಬರ್ 9ರವರೆಗೆ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

PREV
15
ಮುಂಗಾರು ಮಳೆ

ರಾಜ್ಯದಲ್ಲಿ ಮುಂಗಾರು ಮಳೆ ಪ್ರಮಾಣ ಹಂತ ಹಂತವಾಗಿ ಕ್ಷೀಣಿಸುತ್ತಿದೆ. ಈ ನಡುವೆ ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಭಾಗದಲ್ಲಿ ಸೆಪ್ಟೆಂಬರ್ 9ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಯಾವೆಲ್ಲಾ ಭಾಗಗಳಲ್ಲಿ ಮಳೆಯಾಗಲಿದೆ ಎಂಬುದರ ಮಾಹಿತಿಯನ್ನು ಈ ಲೇಖನ ಒಳಗೊಂಡಿದೆ.

25
ಕರಾವಳಿ ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರವಾಗಿ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿಯಲ್ಲಿ ಸದ್ಯಕ್ಕೆ ಜೋರು ಪ್ರಮಾಣದ ಮಳೆ ತುಂಬಾ ಕ್ಷೀಣ ಎಂದು ವರದಿಯಲ್ಲಿ ತಿಳಿಸಲಾಗಿದೆ.

35
ಮಲೆನಾಡು ಭಾಗದಲ್ಲಿ ಮಳೆ

ಇನ್ನು ಮಲೆನಾಡು ಭಾಗದಲ್ಲಿಯೂ ಸಣ್ಣ ಪ್ರಮಾಣದ ಮಳೆಯಾಗುತ್ತಿದೆ. ಇದೇ ರೀತಿಯ ಸಣ್ಣ ಮಳೆಯೂ ಮುಂದಿನ ದಿನಗಳಲ್ಲಿ ಮುಂದುವರಿಯುವ ಸಾಧ್ಯತೆಗಳಿವೆ. ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಇನ್ನುಳಿದಂತೆ ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಭಾಗದಲ್ಲಿ ಚದುರಿದ ಮಳೆಯ ಸಾಧ್ಯತೆಗಳಿವೆ.

45
ಉತ್ತರ ಒಳನಾಡು ಭಾಗದಲ್ಲಿ ಮಳೆ

ಇನ್ನು ಉತ್ತರ ಒಳನಾಡು ಭಾಗದಲ್ಲಿ ನಿನ್ನೆಯಿಂದಲೇ ಮಳೆ ಶುರುವಾಗಿದೆ. ಬಾಗಲಕೋಟೆ, ವಿಜಯಪುರ, ಯಾದಗಿರಿ, ಹುಬ್ಬಳ್ಳಿ-ಧಾರಾವಾಡ ಭಾಗದಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ. ಈ ಮಳೆ ಜೊತೆಯಲ್ಲಿ ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಚಳಿ ಪ್ರಮಾಣ ಏರಿಕೆಯಾಗಲಿದೆ.

55
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಸಿಲು

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬುಧವಾರ ಹಗಲು ಬಿಸಿಲು ಪ್ರಮಾಣ ಹೆಚ್ಚಳವಾಗಿದ್ದು, ಸಂಜೆ ಸಾಧಾರಣ ಮಳೆಯಾಗಿದೆ. ಗ್ರಾಮೀಣ ಭಾಗಗಳಲ್ಲಿ ಬೆಳಗ್ಗೆ ಹಾಗೂ ಸಂಜೆ ಮೋಡ ಕವಿದ ವಾತಾವರಣ ಕಂಡುಬಂದಿತ್ತು. ಭಾರತೀಯ ಹವಾಮಾನ ಇಲಾಖೆ ಪ್ರಕಾರ ಮುಂಬರುವ ದಿನಗಳಲ್ಲಿ ಮಳೆಯ ತೀವ್ರತೆ ಕೊಂಚ ತಗ್ಗುವ ಸಾಧ್ಯತೆ ಹೇಳಲಾಗಿದೆ. ಮುಂದಿನ ಎರಡು ದಿನಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ನಂತರ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಗುರುವಾರ ಬೆಳಗಿನವರೆಗೆ ಜಿಲ್ಲೆಯಲ್ಲಿ ಸರಾಸರಿ 3.7 ಮಿಲಿಮೀಟರ್‌ ಮಳೆ ದಾಖಲಾಗಿದ್ದು, ಮೂಡುಬಿದಿರೆಯಲ್ಲಿ ಗರಿಷ್ಠ 5.7 ಮಿ.ಮೀ ಮಳೆಯಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories