ಕರ್ನಾಟಕ ಹವಾಮಾನ ವರದಿ: ಅಕ್ಟೋಬರ್ 5, 6 ರಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ!

Published : Oct 02, 2026, 03:22 PM IST

ರಾಜ್ಯದಲ್ಲಿ ನೈಋತ್ಯ ಮುಂಗಾರು ಹಿಂಪಡೆಯುತ್ತಿದ್ದರೂ, ಮೇಲ್ಮೈ ಸುಳಿಗಾಳಿಯಿಂದಾಗಿ ಮಳೆ ಮುಂದುವರಿಯಲಿದೆ. ಅಕ್ಟೋಬರ್ 5 ಮತ್ತು 6 ರಂದು ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರು ಸೇರಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲೂ ಸಾಧಾರಣ ಮಳೆಯಾಗಲಿದೆ.

PREV
15

ಬೆಂಗಳೂರು (ಅ.02): ರಾಜ್ಯದಲ್ಲಿ ನೈಋತ್ಯ ಮುಂಗಾರು ಹಿಂಪಡೆಯುವ ಪ್ರಕ್ರಿಯೆ ಚುರುಕುಗೊಂಡಿದ್ದರೂ, ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಹಾಗೂ ಟ್ರಫ್‌ಗಳ ಪರಿಣಾಮವಾಗಿ ಕರ್ನಾಟಕದಲ್ಲಿ ಮಳೆ ಮುಂದುವರಿಯಲಿದೆ. ಪ್ರಮುಖವಾಗಿ ಅಕ್ಟೋಬರ್ 5 ಮತ್ತು 6 ರಂದು ದಕ್ಷಿಣ ಒಳನಾಡಿನ ಹಲವೆಡೆ ‘ಭಾರೀ ಮಳೆ’ಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

25

ಅಕ್ಟೋಬರ್ 5 ಮತ್ತು 6 ರಂದು ಎಲ್ಲೆಲ್ಲಿ ಭಾರೀ ಮಳೆ?

ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಅಕ್ಟೋಬರ್ 5 ಹಾಗೂ 6 ರಂದು ಗುಡುಗು ಸಹಿತ ಭರ್ಜರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉಳಿದಂತೆ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ವ್ಯಾಪಕ ಸಾಧಾರಣ ಮಳೆಯಾಗಲಿದೆ.

35

ಕರಾವಳಿ ಮತ್ತು ಉತ್ತರ ಒಳನಾಡಿನ ಸ್ಥಿತಿ:

ಕರಾವಳಿ: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಅಕ್ಟೋಬರ್ 7 ಮತ್ತು 8 ರಂದು ಮಳೆಯ ಪ್ರಮಾಣ ಕೊಂಚ ತಗ್ಗಲಿದೆ.

45

ಉತ್ತರ ಒಳನಾಡು: ಬೆಳಗಾವಿ, ಧಾರವಾಡ, ಹಾವೇರಿ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆಯಾಗಲಿದ್ದು, ಉಳಿದೆಡೆ ಒಣ ಹವೆ ಮುಂದುವರಿಯಲಿದೆ. ಆದರೆ, ಅಕ್ಟೋಬರ್ 5 ಮತ್ತು 6 ರಂದು ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

55

ಬೆಂಗಳೂರಿನ ಹವಾಮಾನ:

ರಾಜಧಾನಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಂಜೆ ಅಥವಾ ರಾತ್ರಿಯ ವೇಳೆ ಮೋಡ ಕವಿದ ವಾತಾವರಣ ಇರಲಿದ್ದು, ನಗರದ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ದಾಖಲಾಗಲಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories