ಕರ್ನಾಟಕದಲ್ಲಿ ಮುಂದಿನ 3 ದಿನ ಮಳೆ ರೌದ್ರಾವತಾರ! ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ

Published : Sep 22, 2026, 08:15 AM IST

ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಸೆಪ್ಟೆಂಬರ್ 26ರಿಂದ ಮಳೆ ಪ್ರಮಾಣ ಇಳಿಕೆಯಾಗಲಿದೆ.

PREV
14

ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧೆಡೆ ಮಳೆಯ ತೀವ್ರತೆ ಹೆಚ್ಚಿರಲಿದೆ ಎಂದು ಎಚ್ಚರಿಸಲಾಗಿದೆ.

24

ಹವಾಮಾನ ಇಲಾಖೆಯ ವರದಿ ಪ್ರಕಾರ, ಸೆಪ್ಟೆಂಬರ್ 24ರಂದು ಕರಾವಳಿ ಕರ್ನಾಟಕದಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ರೆಡ್ ಅಲರ್ಟ್ ಅಥವಾ ಆರೆಂಜ್ ಅಲರ್ಟ್ ಘೋಷಿಸುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗಲಿದೆ. ಈ ವೇಳೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಂಭವವಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

34

ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಅಬ್ಬರ:

ಸೆಪ್ಟೆಂಬರ್ 23ರಂದು ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಈ ವೇಳೆ ಗಾಳಿಯ ವೇಗ ಗಂಟೆಗೆ 40–50 ಕಿ.ಮೀ ತಲುಪುವ ಸಾಧ್ಯತೆಯಿದೆ. ಇನ್ನು ಸೆಪ್ಟೆಂಬರ್ 23 ಮತ್ತು 24ರಂದು ದಕ್ಷಿಣ ಒಳನಾಡಿನಲ್ಲೂ ಮಳೆಯ ಆರ್ಭಟ ಮುಂದುವರಿಯಲಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಹಲವೆಡೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಬೀಳಲಿದೆ.

44

ಸೆಪ್ಟೆಂಬರ್ 26ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕ್ರಮೇಣ ಇಳಿಕೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಬೆಂಗಳೂರಿನಲ್ಲಿರೂ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಅಲ್ಲಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories