ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬಳಿ ಕುಡಿದ ಮತ್ತಿನಲ್ಲಿದ್ದ ಕಂಟೈನರ್ ಚಾಲಕನೋರ್ವ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 8 ವರ್ಷದ ಬಾಲಕ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಉತ್ತರಕನ್ನಡ/ಕಾರವಾರ: ಕುಡಿದ ಮತ್ತಿನಲ್ಲಿ ವಾಹನ ಚಾಲನೆ ಮಾಡುತ್ತಿದ್ದ ಕಂಟೈನರ್ ಚಾಲಕನೋರ್ವ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 8 ವರ್ಷದ ಬಾಲಕನೋರ್ವ ಸಾವನ್ನಪ್ಪಿ ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿ ಅರಗಾ ಗ್ರಾಮದ ಬಳಿ ಘಟನೆ ನಡೆದಿದೆ.
24
ಕಾರಿನಲ್ಲಿದ್ದ 8 ವರ್ಷದ ಬಾಲಕ ಸಾವು
ಕುಡಿದ ಮತ್ತಿನಲ್ಲಿ ಕಾರಿಗೆ ಗುದ್ದಿದ ಕಂಟೈನರ್ ಕಾರಿನ ಮೇಲೆಯೇ ಬಿದ್ದ ಪರಿಣಾಮ ಕಾರಿನಲ್ಲಿದ್ದ ಓರ್ವ ಬಾಲಕ ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡ ಮೂವರನ್ನು ಕಾರವಾರ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
34
ಕುಡಿದ ಮತ್ತಿನಲ್ಲಿ ಜಗಳ ಬಳಿಕ ಅಪಘಾತ
ಕುಡಿದ ಮತ್ತಿನಲ್ಲಿದ್ದ ಕಂಟೈನರ್ ಚಾಲಕ ಅಲ್ಲಿದ್ದ ಎಲ್ಲರ ಜೊತೆಗೂ ಜಗಳ ಮಾಡುತ್ತಿದ್ದ. ರಸ್ತೆ ಮಧ್ಯೆ ವಾಹನ ಅಡ್ಡಗಟ್ಟಿ ಗಲಾಟೆ ಮಾಡಿದ್ದ. ನಂತರ ಸಿಟ್ಟಿನಿಂದ ಕಂಟೈನರ್ ಚಲಾಯಿಸಿ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ.
ಅಪಘಾತದ ನಂತರ ಮಹಾರಾಷ್ಟ್ರ ನೋಂದಣಿಯ ಕಾರಿನ ಮೇಲೆ ಕಂಟೈನರ್ ಬಿದ್ದಿದ್ದು, ಕಾರಿನಲ್ಲಿದ್ದ 8 ವರ್ಷದ ಬಾಲಕ ಸಾವನ್ನಪ್ಪಿದ್ದು, ಟ್ರಕ್ ಚಾಲಕನನ್ನು ಕಾರವಾರ ಗ್ರಾಮೀಣ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ