Kerala Bus crash in bengaluru ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೇರಳಕ್ಕೆ ಸೇರಿದ ಸಾರಿಗೆ ಬಸ್ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಪ್ರಯಾಣಿಕ ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಅವರಗೆರೆ ಬ್ರಿಡ್ಜ್ ಬಳಿ ಸಂಭವಿಸಿದೆ. ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.
Kerala Bus crash in bengaluru ಬೆಂಗಳೂರು-ಮೈಸೂರು ಹೆದ್ದಾರಿ ಭೀಕರ ಅಪಘಾತ
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೇರಳಕ್ಕೆ ಸೇರಿದ ಸಾರಿಗೆ ಬಸ್ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಪ್ರಯಾಣಿಕ ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಅವರಗೆರೆ ಬ್ರಿಡ್ಜ್ ಬಳಿ ಸಂಭವಿಸಿದೆ.
24
Kerala Bus crash in bengaluru ಕೇರಳ ಬಸ್ ಭೀಕರ ಅಪಘಾತ
ಕೇರಳದಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕೇರಳ ರಾಜ್ಯದ ಬಸ್. ಅವರಗೆರೆ ಬ್ರಿಡ್ಜ್ ಬಳಿ ಬರುತ್ತಿದ್ದಂತೆ ಹೆದ್ದಾರಿಯಲ್ಲಿ ಹಾಕಲಾಗಿದ್ದ ಶೈನಿಂಗ್ ಬೋರ್ಡ್‌ಗೆ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಪಲ್ಟಿ ಹೊಡೆದು ರಸ್ತೆಗೆ ಬಿದ್ದಿದೆ. ಈ ವೇಳೆ ಸ್ಥಳದಲ್ಲೇ ಒರ್ವ ಪ್ರಯಾಣಿಕ ಮೃತನಾಗಿದ್ದರೆ ಹಲವು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ.
34
ಬೆಂಗಳೂರು-ಮೈಸೂರು ಹೆದ್ದಾರಿ ಭೀಕರ ಅಪಘಾತ
ಬಸ್‌ನಲ್ಲಿ ಎಷ್ಟು ಪ್ರಯಾಣಿಕರಿದ್ದರು ಎಂಬುದು ತಿಳಿದುಬಂದಿಲ್ಲ. ಆದರೆ ಬಸ್ ಪಲ್ಟಿ ಹೊಡೆದಿದ್ದರಿಂದ ನಿದ್ದೆಯಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಪೆಟ್ಟಾಗಿವೆ ಗಾಯಾಳು ಪ್ರಯಾಣಿಕರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಬಿಡದಿ ಪೊಲೀಸರು ಭೇಟಿ ನೀಡಿದ್ದು ಅಪಘಾತ ನಡೆದ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬಸ್ ಚಾಲಕ ನಿದ್ರೆಯ ಮಂಪರಿನಲ್ಲಿದ್ದ ಕಾರಣ ಡಿಕ್ಕಿ ಹೊಡೆದಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ