ಕರ್ನಾಟಕದ ಕಾಮೇಗೌಡರನ್ನ ನೆನೆದ ಪ್ರಧಾನಿ ಮೋದಿ, ಅಷ್ಟಕ್ಕೂ ಯಾರೀ 82 ವರ್ಷದ ಅಜ್ಜ?

First Published Jun 28, 2020, 4:51 PM IST

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು (ಭಾನುವಾರ) ಕರ್ನಾಟಕದ ವ್ಯಕ್ತಿಯನ್ನ ಕೊಂಡಾಡಿದ್ದಾರೆ. ತಮ್ಮ 66ನೇ ಆವೃತ್ತಿಯ ಮನ್ ಕಿ ಬಾತ್‌ನಲ್ಲಿ 82 ವರ್ಷದ ಕಾಮೇಗೌಡರ ಸಾಧನೆಯನ್ನು ನೆನೆದು ಅವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ. ಅಷ್ಟಕ್ಕೂ ಮೋದಿ ಅವರ ಬಾಯಲ್ಲಿ ಬಂದ ಕಾಮೆಗೌಡ ಯಾರು? ಅವರು ಮಾಡಿದ ಸಾಧನೆ ಏನು..? ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಪ್ರಧಾನಿ ಮೋದಿ ಇಂದಿನ 'ಮನ್ ಕೀ ಬಾತ್' ಕಾರ್ಯಕ್ರಮದಲ್ಲಿ ಬಾಯಾರಿದ ಪಕ್ಷಿಗಳು ಮತ್ತು ಪ್ರಾಣಿಗಳಿಗಾಗಿ ತನ್ನದೇ ಹಣದಿಂದ 14 ಕೊಳಗಳನ್ನು ರಚಿಸಿ ಮಾದರಿಯಾಗಿರುವ ಮಂಡ್ಯದ 82 ವರ್ಷದ ಕಾಮೇಗೌಡರನ್ನು ನೆನಪು ಮಾಡಿಕೊಂಡರು
undefined
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ದಾಸರದೊಡ್ಡಿ ಗ್ರಾಮದವರು ಕಾಮೇಗೌಡ. ತಂಡೆ ನೀಲಿ ವೆಂಕಟಗೌಡ. ತಾಯಿ ರಾಜಮ್ಮ.
undefined
ಶಾಲೆಯ ಮೆಟ್ಟಿಲು ಹತ್ತಿ ಅಕ್ಷರ ಕಲಿಯದ ಕಾಮೇಗೌಡರು ತಮ್ಮ ಪರಿಸರ ಪ್ರೀತಿಯಿಂದಾಗಿಯೇ ಇತರರಿಗೆ ಮಾದರಿಯಾಗಿದ್ದಾರೆ.
undefined
ಚಿಕ್ಕಮನೆ, ತುಂಡು ಭೂಮಿ, ಒಂದಷ್ಟು ಕುರಿಗುಳು ಕಾಮೇಗೌಡರ ಆಸ್ತಿಯಾಗಿದೆ. ಮೂಲತಃ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ಕುರಿಗಾಹಿ 83 ವರ್ಷದ ಕಾಮೇಗೌಡ ಅವರದ್ದು ಕಾಡಿನಲ್ಲಿ ಕುರಿ ಮೇಯಿಸೋದೇ ಇವರ ಕಾಯಕ.
undefined
ಹುಟ್ಟಿದಾಗಿನಿಂದಲೂ ಪರಿಸರದೊಂದಿಗೆ ತುಂಬಾ ಒಡನಾಟವಿಟ್ಟುಕೊಂಡಿರುವ ಅವರು, ಪರಿಸರಕ್ಕಾಗಿ ಜೀವನವಿಡೀ ದುಡಿದ ಹಣವನ್ನೇ ಖರ್ಚು ಮಾಡಿದ್ದಾರೆ.
undefined
ಇದೂವರೆಗೂ 16 ಕೆರೆಗಳನ್ನು ನಿರ್ಮಿಸಿರುವ ಇವರು ವನ್ಯ ಜೀವಿಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳುತ್ತಿದ್ದಾರೆ. ಜೊತೆಗೆ ಜಲ ಸಂರಕ್ಷಣೆಯನ್ನೂ ಮಾಡುತ್ತಿದ್ದಾರೆ.
undefined
ತಾನು ಕುರಿ ಕಾಯುತ್ತಿದ್ದ ಕುಂದೂರು ಬೆಟ್ಟ ಸದಾ ಹಸಿರಾಗಿರ ಬೇಕೆಂದು ಬೆಟ್ಟ ಸುತ್ತ 2 ಸಾವಿರಕ್ಕೂ ಅಧಿಕ ಗಿಡ ನೆಟ್ಟು ಬೆಳೆಸಿದ್ದಾರೆ. ತಾನು ನೆಟ್ಟ ಆ ಸಸಿಗಳು ಇಂದು ಮರವಾಗಿರುವುದನ್ನು ಕಂಡು ಆನಂದದಿಂದ ಸದಾ ಕಾಡಲ್ಲಿ ಸುತ್ತಾಡುತ್ತಾರೆ.
undefined
ಜೊತೆಗೆ ತಿಳುವಳಿಕೆಗೆ ಬಂದ ಕೆಲವು ಉತ್ತಮ ಸಂದೇಶ ಮತ್ತು ಪರಿಸರ ಕಾಳಜಿ ಸಂದೇಶಗಳನ್ನು ಬೆಟ್ಟದ ಬಂಡೆಯ ಮೇಲೆ ಬಣ್ಣದಿಂದ ಬರೆಸೋ ಮೂಲಕ ಜನರಲ್ಲಿ ಪರಿಸರ ಕಳಕಳಿ ಮೂಡಿಸುತ್ತಿದ್ದಾರೆ.
undefined
ರಾಜ್ಯೋತ್ಸವ ಪ್ರಶಸ್ತಿ ಕೂಡ ಕಾಮೇಗೌಡ ಅವರನ್ನು ಹುಡುಕಿಕೊಂಡು ಹೋಗಿ ಸತ್ಕಾರಿಸಿದೆ.
undefined
ಮಂಡ್ಯದಲ್ಲಿ ಕೆರೆಗಳನ್ನು ನಿರ್ಮಿಸಿ ಹೆಸರಾಗಿರುವ ಕಾಮೇಗೌಡರ ಸಾಧನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ ಮನ್ ಕೀ ಬಾತ್‌ನಲ್ಲಿಕೊಂಡಾಡಿದ್ದಾರೆ. ಜತೆಗೆ ಕೇಂದ್ರ ಜಲಸಂಪನ್ಮೂಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಮ್ಮ ಟ್ವಿಟ್ಟರ್ ಮೂಲಕ ಅಭಿನಂದನೆ ತಿಳಿಸಿದ್ದಾರೆ.
undefined
click me!