ಸೇನಾ ವಾಹನ ಪ್ರಪಾತಕ್ಕೆ ಬಿದ್ದು ಗಾಯಗೊಂಡಿದ್ದ ಕೊಡಗಿನ ಯೋಧ ಹುತಾತ್ಮ!

First Published | Dec 29, 2024, 11:10 PM IST

ಜಮ್ಮು ಕಾಶ್ಮೀರದ ಪೂಂಚ್ ಬಳಿ ಬೆಳಗ್ಗಿನ ಜಾವ ಭಾರತೀಯ ಸೇನೆಯ ವಾಹನ ಪ್ರಪಾತಕ್ಕೆ ಉರುಳಿಬಿದ್ದು ತೀವ್ರ ಗಾಯಗೊಂಡಿದ್ದ ಕೊಡಗಿನ ವೀರ ಯೋಧ ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆ.
 

ಕೊಡಗಿನ ಯೋಧ ಹುತಾತ್ಮ

ಜಮ್ಮು ಕಾಶ್ಮೀರದ ಪೂಂಚ್ ಬಳಿ ಬೆಳಗ್ಗಿನ ಜಾವ ಭಾರತೀಯ ಸೇನೆಯ ವಾಹನ ಪ್ರಪಾತಕ್ಕೆ ಉರುಳಿಬಿದ್ದು ತೀವ್ರ ಗಾಯಗೊಂಡಿದ್ದ ಕೊಡಗಿನ ವೀರ ಯೋಧ ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆ.

ಕೊಡಗಿನ ಯೋಧ ಹುತಾತ್ಮ

ಯೋಧ ಪಿ.ಪಿ.ದಿವಿನ್ (28) ಹುತಾತ್ಮರಾಗಿರುವ ಯೋಧ. ಸೋಮವಾರಪೇಟೆ ತಾಲೂಕಿನ ಆಲೂರುಸಿದ್ದಾಪುರ ಬಳಿಯ ಮಾಲಂಬಿ ಗ್ರಾಮದವರಾದ ಯೋಧ.  ಜಮ್ಮು ಕಾಶ್ಮೀರದಲ್ಲಿ ಕರ್ತವ್ಯದಲ್ಲಿದ್ದರು. ಈ ವೇಳೆ ವಾಹನದಲ್ಲಿ ತೆರಳುತ್ತಿದ್ದ ಸೇನಾ ಪ್ರಪಾತಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಶ್ರೀನಗರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಯೋಧ ದಿವಿನ್ ಹುತಾತ್ಮರಾಗಿದ್ದಾರೆ. ದಿವಿನ್ ತಾಯಿ ಜಯಾ ಮೊನ್ನೆಯಷ್ಟೇ ಸೇನಾ ಆಸ್ಪತ್ರೆಗೆ ತಲುಪಿದ್ದರು. ಈ ವೇಳೆ ಅಮ್ಮನ ಕರೆಗೆ ದಿವಿನ್ ಕಣ್ಣು ಬಿಡುವ ಪ್ರಯತ್ನ ಮಾಡಿದ್ದರು. ಆದರೆ ಶ್ವಾಸಕೋಶಕ್ಕೆ ತೀವ್ರ ಹಾನಿಯಾಗಿದ್ದ ಹಿನ್ನೆಲೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
 

Tap to resize

ಕೊಡಗಿನ ಯೋಧ ಹುತಾತ್ಮ

ಶ್ರೀನಗರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಯೋಧ ದಿವಿನ್ ಹುತಾತ್ಮರಾಗಿದ್ದಾರೆ. ದಿವಿನ್ ತಾಯಿ ಜಯಾ ಮೊನ್ನೆಯಷ್ಟೇ ಸೇನಾ ಆಸ್ಪತ್ರೆಗೆ ತಲುಪಿದ್ದರು. ಈ ವೇಳೆ ಅಮ್ಮನ ಕರೆಗೆ ದಿವಿನ್ ಕಣ್ಣು ಬಿಡುವ ಪ್ರಯತ್ನ ಮಾಡಿದ್ದರು. ಆದರೆ ಶ್ವಾಸಕೋಶಕ್ಕೆ ತೀವ್ರ ಹಾನಿಯಾಗಿದ್ದ ಹಿನ್ನೆಲೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಕೊಡಗಿನ ಯೋಧ ಹುತಾತ್ಮ

ಮಾಲಂಬಿ ಗ್ರಾಮದ ಪಳಂಗೋಟು ಪ್ರಕಾಶ್ ಮತ್ತು ಜಯ ದಂಪತಿಯ ಏಕೈಕ ಪುತ್ರನಾದ ದಿವಿನ್, 10 ವರ್ಷಗಳ ಹಿಂದೆ ಭಾರತೀಯ ಭೂ ಸೇನೆಗೆ ಸೇರಿದ್ದರು. ಇತ್ತೀಚೆಗೆ ನಿಶ್ಚಿತಾರ್ಥ ಕೂಡ ನೆರವೇರಿತು. 2025 ರ ಫೆಬ್ರವರಿಯಲ್ಲಿ ದಿವಿನ್ ವಿವಾಹ ನಿಶ್ಚಯವಾಗಿತ್ತು. ಆದರೆ ಸೇನಾ ವಾಹನ ಪ್ರಪಾತಕ್ಕೆ ಬಿದ್ದು ಕೊನೆಯುಸಿರೆಳೆದಿದ್ದಾರೆ.

ದಿವಿನ್ ಮರಾಠ ರೆಜಿಮೆಂಟ್‍ನಲ್ಲಿ ಕರ್ತವ್ಯನಿರ್ವಹಿಸುತ್ತಿದ್ದರು. ಬುಧವಾರ ಬೆಳಗ್ಗಿನ ಜಾವ ಸೇನೆಯ ಮರಾಠ ರೆಜಿಮೆಂಟಿಗೆ ಸೇರಿದ ವಾಹನದಲ್ಲಿ ಯೋಧ ದಿವಿನ್ ಸೇರಿದಂತೆ 10 ಮಂದಿ ಯೋಧರು ಎಂದಿನಂತೆ ಪೆಟ್ರೊಲಿಂಗ್‍ಗೆ ತೆರಳುತ್ತಿದ್ದಾಗ ವಾಹನ ಜಮ್ಮು ಕಾಶ್ಮೀರದ ಪೂಂಚ್‍ ಬಳಿ ಪ್ರಪಾತಕ್ಕೆ ಉರುಳಿತ್ತು. ಈ ದುರಂತದಲ್ಲಿ ಕರ್ನಾಟಕದ ಮೂವರು ಯೋಧರು ಸೇರಿದಂತೆ ಐವರು ಮೃತಪಟ್ಟಿದ್ದರು. ದಿವಿನ್ ಸೇರಿದಂತೆ 5 ಮಂದಿ ಯೋಧರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಉದಮಪುರದ ಮಿಲಿಟರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು.

Latest Videos

click me!