ಕೊಪ್ಪಳ: ಕೌಟುಂಬಿಕ ಕಲಹ, ಇಬ್ಬರು ಮಕ್ಕಳ ಸಮೇತ ಕೆರೆಗೆ ಹಾರಿದ ಅಮ್ಮ

Published : Mar 12, 2026, 05:18 PM IST

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನಲ್ಲಿ ಕೌಟುಂಬಿಕ ಕಲಹದಿಂದ ಮನನೊಂದ ತಾಯಿಯೊಬ್ಬರು, ತನ್ನ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿಯ ಕಿರುಕುಳವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಲಾಗಿದೆ.

PREV
14
ಮಕ್ಕಳ ಸಮೇತ ಕೆರೆಗೆ ಹಾರಿವಾದ ತಾಯಿ

ಕೊಪ್ಪಳ: ಕೌಟುಂಬಿಕ ಕಲಹದಿಂದ ಮನನೊಂದ ತಾಯಿಯೊಬ್ಬಳು ಮಕ್ಕಳ ಸಮೇತ ಕೆರೆಗೆ ಹಾರಿ‌ ಸಾವಿಗೆ ಶರಣಾದ ಮನ ಕಲುಕುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.

ಇದನ್ನೂ ಓದಿ:  ಬಾಗಲಕೋಟೆ: ಧಗಧಗನೇ ಹೊತ್ತಿ ಉರಿದ ಪೀಠೋಪಕರಣ ಮಳಿಗೆ: ಲಕ್ಷಾಂತರ ಮೌಲ್ಯದ ಆಸ್ತಿ ಹಾನಿ

24
ಕೌಟುಂಬಿಕ ಕಲಹದಿಂದ ನೊಂದು ಸಾವಿಗೆ ಶರಣು

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮಾರನಾಳ ಗ್ರಾಮದಲ್ಲಿ ಇಬ್ಬರು ಮಕ್ಕಳ ಸಹಿತ ತಾಯಿ ಕೆರೆಗೆ ಹಾರಿದ್ದು, ಅಮ್ಮ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಯಾದಗಿರಿ: ಸುರಪುರ ಬಳಿ ಬೈಕ್‌ಗೆ ಕ್ರೂಸರ್ ಡಿಕ್ಕಿ: ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು

34
ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕೆರೆಗೆ ಹಾರಿದ ಬಾಳವ್ವ

ಮೃತರನ್ನು 35 ವರ್ಷದ ಬಾಳವ್ವ ಕುರಿ ಮಕ್ಕಳಾದ 9 ವರ್ಷದ ಹುಲಿಗೇಮ್ಮ 8 ವರ್ಷದ ವಿಜಯಮ್ಮ ಎಂದು ಗುರುತಿಸಲಾಗಿದೆ. ಬಾಳವ್ವನ ಪತಿ ಶರಣಪ್ಪನ ಕಿರುಕುಳದಿಂದ ಬೇಸತ್ತು ಸಾವಿಗೆ ಶರಣಾಗಿರುವ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ: ರಾಮನಗರ: ಅತ್ತೆ ಸೊಸೆ ಜಗಳ: 19 ವರ್ಷದ ಗರ್ಭಿಣಿ ಸೊಸೆ ಸಾವಿಗೆ ಶರಣು

44
ಶವ ಹೊರತೆಗೆದ ಅಗ್ನಿಶಾಮಕ ಸಿಬ್ಬಂದಿ

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ, ಕೆರೆಯಿಂದ ತಾಯಿ ಮಕ್ಕಳ ಶವವನ್ನು ಹೊರತೆಗೆಯಲಾಗಿದೆ. ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ವಿಶೇಷ ಮನವಿ:

ಆತ್ಮ8ತ್ಯೆ ಮಾಡಿಕೊಳ್ಳುವ ಮುನ್ನ ಒಮ್ಮೆ ಯೋಚಿಸಿ... ಆತ್ಮ8ತ್ಯೆ ಮಾಡಿಕೊಂಡ ನಂತ್ರ ಮುಂದೇನು? ಸಮಸ್ಯೆಗೆ ಪರಿಹಾರ ಸಿಗುತ್ತಾ? ಇಲ್ಲ, ಕಷ್ಟಗಳಿದ್ದರೆ ಆತ್ಮೀಯರಿಗೆ ಹೇಳಿಕೊಳ್ಳಿ, ಏನೇ ಕಷ್ಟಗಳಿದ್ದರೂ ಆ ಸಮಯ ಕಳೆದು ಹೋಗುತ್ತದೆ ಎಂಬುದು ನೆನಪಿರಲಿ. ನೀವು ಅಥವಾ ನಿಮಗೆ ಪರಿಚಿತರಾದ ಯಾರಾದರೂ 'ಆತ್ಮ8ತ್ಯೆ' ಯೋಚನೆಗಳನ್ನು ಹೊಂದಿದ್ದರೆ, ನಿಮಗಾಗಿ ನೆರವು ಲಭ್ಯವಿದೆ. ಜಗತ್ತಿನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿರುವವರು ನೀವು ಒಬ್ಬರು ಮಾತ್ರವಲ್ಲ ಎಂಬುದನ್ನು ದಯವಿಟ್ಟು ತಿಳಿದುಕೊಳ್ಳಿ. ಕೆಲವೊಮ್ಮೆ ಜೀವನ ಬಹಳ ಬೇಡವೆಂದೇ ಅನಿಸುತ್ತಿರಬಹುದು, ಆದರೆ ನೆರವು ಯಾವಾಗಲೂ ಲಭ್ಯವಿರುತ್ತದೆ. ಜಗತ್ತಿನಲ್ಲಿ ಪರಿಹಾರವಿಲ್ಲದ ಸಮಸ್ಯೆಗಳಿಲ್ಲ. ತಮ್ಮವರ ಅಥ್ವಾ ಯಾರಾದರ ಜೊತೆ ಮಾತನಾಡುವುದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ಖಂಡಿತಾ ಸಿಗುತ್ತೆ. ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರನ್ನು ಸಂಪರ್ಕಿಸಲು ಅಥವಾ ಸಹಾಯವಾಣಿಗೆ ಕರೆ ಮಾಡಿ:

Sahai Helpline - 080 2549 7777

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories