ರಾಜ್ಯದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮಗಳು ಬೆಳಕಿಗೆ ಬಂದು ಕೋಲಾಹಲ ಸೃಷ್ಟಿಸಿದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ)ಕನ್ನಡ ಭಾಷೆ ಲಿಖಿತ ಪರೀಕ್ಷೆ ತುಂಬ ಕಟ್ಟುನಿಟ್ಟು ನಡೆಯಿತು.. ಇದೇ ಮೊದಲ ಬಾರಿಗೆ ಇದೇ ಮೊದಲ ಬಾರಿಗೆ ಪರೀಕ್ಷಾ ಕೇಂದ್ರಗಳ ಪರಿವೀಕ್ಷಕರಿಗೆ ಬಾಡಿ ಕ್ಯಾಮೆರಾಗಳನ್ನು ಅಳವಡಿಸಿದೆ.
ಕಲಬುರಗಿಯ 10 ಕೇಂದ್ರಗಳಲ್ಲಿ ನಡೆದ ಕೆಪಿಎಸ್‌ಸಿ ಕನ್ನಡ ಭಾಷೆ ಪರೀಕ್ಷೆ ಪರೀಕ್ಷೆ ಬರೆಯುವ ಅಭ್ಯರ್ಥಿಗಳ ತೀವ್ರ ತಪಾಸಣೆ ನಡೆಸಲಾಗಿದೆ. ಪ್ರಖರ ಬ್ಯಾಟರಿ ಹಾಕಿ ಎಲ್ಲಾ ಕೇಂದ್ರಗಳಲ್ಲಿ ಅಭ್ಯರ್ಥಿಗಳ ಕಿವಿ ಪರೀಕ್ಷೆ ನಡೆಸಲಾಗಿದೆ. ಪರೀಕ್ಷಾ ಕೊಠಡಿಯೊಳಗೆ ಚಪ್ಪಲಿ ಕೂಡಾ ಬಿಡಲಿಲ್ಲ, ಬರಿಗಾಲಲ್ಲೇ ಹೋಗಿ ಪರೀಕ್ಷೆ ಬರೆದ ಅಭ್ಯರ್ಥಿಗಳು.
ಪರೀಕ್ಷೆಗೆ ಹಾಜರಾದ ಪ್ರತಿ ಅಭ್ಯರ್ಥಿಗಳನ್ನು ತೀವ್ರ ತಪಾಸಣೆಗೊಳಪಡಿಸಿದ ಭದ್ರತಾ ಸಿಬ್ಬಂದಿ. ಬ್ಲೂಟೂತ್ ಬಳಸಿ ಪರೀಕ್ಷೆ ಬರೆದ ಹಿನ್ನೆಲೆ ಕಿವಿಯೊಳಗೆ ಪ್ರಖರ ಬ್ಯಾಟರಿ ಹಾಕಿ ಪರೀಕ್ಷೆ ನಡೆಸಿದ ಸಿಬ್ಬಂದಿ ಇದೇ ಮೊದಲ ಬಾರಿಗೆ ಈ ರೀತಿ ತಪಾಸಣೆಗೆ ಕಕ್ಕಾಬಿಕ್ಕಿಯಾದ ಕೆಲ ಅಭ್ಯರ್ಥಿಗಳು.
ರಾಜ್ಯದ 23 ಜಿಲ್ಲಾ ಕೇಂದ್ರಗಳ 207 ಪರೀಕ್ಷಾ ಉಪಕೇಂದ್ರಗಳಲ್ಲಿ ನಡೆಸಲಾಗುವ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ತಡೆಯಲು ಈ ಬಾರಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು ಕಲಬುರಗಿಯಲ್ಪಲೂ ರೀಕ್ಷಾ ಕೇಂದ್ರಗಳ ಪರಿವೀಕ್ಷಕರಿಗೆ ಬಾಡಿ ಕ್ಯಾಮೆರಾ ಅಳವಡಿಸಿ ಅಕ್ರಮಕ್ಕೆ ಅವಕಾಶವಿಲ್ಲದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಾಯಿತು.
ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಯಾವುದೇ ಆಧುನಿಕ ಉಪಕರಣಗಳು, ಮೊಬೈಲ್, ಬ್ಲೂಟೂತ್, ಕ್ಯಾಲ್ಕ್ಯೂಲೇಟರ್, ವೈರ್‌ಲೆಸ್ ಸೆಟ್, ಪೇಪರ್, ಬುಕ್ಗಳನ್ನು ತರದಂತೆ. ತಪಾಸಣೆ ನಡೆಸಿದರರಲ್ಲದೆ ಎಲ್ಲವನ್ನೂ ವಿಡಿಯೋ ಚಿತ್ರೀಕರಣ ಮಾಡಲು ಮಾಡಲಾಯಿತು.