ಕೆಎಸ್‌ಡಿಎಲ್‌ ವತಿಯಿಂದ 10 ಸಾವಿರ ಅರಣ್ಯ ರಕ್ಷಕರಿಗೆ ಸುರಕ್ಷಾ ಕಿಟ್ ವಿತರಣೆ!

Published : Jun 02, 2025, 07:19 PM IST

ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತದ (ಕೆಎಸ್ ಡಿಎಲ್) ವತಿಯಿಂದ ರಾಜ್ಯದ 10 ಸಾವಿರ ಅರಣ್ಯ ರಕ್ಷಕರು/ವೀಕ್ಷಕರು, ಕಾವಾಡಿಗಳು, ಮಾವುತರು ಮತ್ತು ಚಾಲಕರಿಗೆ ಸುರಕ್ಷಾ ಕಿಟ್ ವಿತರಿಸಲಾಗುವುದು.

PREV
15

ಅರಣ್ಯ ರಕ್ಷಣೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ ರಾಜ್ಯದ 10 ಸಾವಿರ ಅರಣ್ಯ ರಕ್ಷಕರು/ವೀಕ್ಷಕರು, ಕಾವಾಡಿಗಳು, ಮಾವುತರು ಮತ್ತು ಚಾಲಕರಿಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತದ (ಕೆಎಸ್ ಡಿಎಲ್) ವತಿಯಿಂದ ಗುಣಮಟ್ಟದ ಬ್ಯಾಗ್, ಜರ್ಕೀನ್, ಶೂ ಮತ್ತು ನೀರಿನ ಬಾಟಲಿ ಇರುವ ಕಿಟ್ ವಿತರಿಸಲಾಗುವುದು.

25

ಕೆಎಸ್‌ಡಿಎಲ್ ಸಿಎಸ್ಆರ್ ಉಪಕ್ರಮದ ಮೊದಲ ಕಾರ್ಯಕ್ರಮ ಬುಧವಾರ (ಜೂನ್ 4) ಮಧ್ಯಾಹ್ನ 2 ಗಂಟೆಗೆ ಮೈಸೂರಿನ ಮುಕ್ತ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ. ಈ ವೇಳೆ ಅರಣ್ಯ ರಕ್ಷಕರಿಗೆ ಸುರಕ್ಷಾ ಕಿಟ್ ವಿತರಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.

35

ಈ ಬಗ್ಗೆ ಮಾಹಿತಿ ನೀಡಿರುವ ಅವರು, ಕೆಎಸ್ಡಿಎಲ್ ಸಂಸ್ಥೆಯ 2024-25ನೇ ಸಾಲಿನ ಎರಡು ಕೋಟಿ ರುಪಾಯಿ ಸಿಎಸ್ಆರ್ ನಿಧಿಯನ್ನು ಈ ಕಿಟ್ ಖರೀದಿಗೆ ಬಳಸಲಾಗಿದೆ. ಕೆಎಸ್ಡಿಎಲ್ ನ ಹೆಮ್ಮೆಯ ಉತ್ಪನ್ನ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆಗೆ ಗಂಧದ ಎಣ್ಣೆ ಮುಖ್ಯವಾಗಿದೆ. ಈ ಸಂಪತ್ತನ್ನು ಕಾಪಾಡುವವರೇ ವನರಕ್ಷಕರು. ಅಂಥವರನ್ನು ಕುರಿತ ಕಳಕಳಿ ಈ ಹೆಜ್ಜೆಯಾಗಿದೆ ಎಂದಿದ್ದಾರೆ.

45

ಜೂ.4ರಂದು ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಅರಣ್ಯ ವೃತ್ತಗಳ 2,168 ಸಿಬ್ಬಂದಿಗೆ ಈ‌ ಕಿಟ್ ವಿತರಿಸಲಾಗುವುದು. ಅರಣ್ಯ ಸಚಿವ ಈಶ್ವರ ಖಂಡ್ರೆ, ಕೆಎಸ್ ಡಿಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ, ವನ್ಯಜೀವಿ ಮಂಡಳಿ ಸದಸ್ಯ ಧ್ರುವ ಪಾಟೀಲ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಇದಕ್ಕೆ ಸಾಕ್ಷಿಯಾಗಲಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದ ಉಳಿದೆಡೆಗಳ ಅರಣ್ಯಗಳಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೂ ಕಿಟ್ ವಿತರಣೆ ಮಾಡಲಾಗುವುದು ಎಂದು ಪಾಟೀಲ ಹೇಳಿದ್ದಾರೆ.

55

ಕಿಟ್ ಸ್ವೀಕರಿಸುವ ಪ್ರತಿಯೊಬ್ಬರಿಂದ ಮೊದಲೇ ಅಳತೆ ತೆಗೆದುಕೊಂಡು, ಜರ್ಕಿನ್, ಶೂ ಖರೀದಿಸಲಾಗಿದೆ. ಇದರಲ್ಲಿ 5 ಸಾವಿರ ಮಂದಿ ಖಾಯಂ ಸಿಬ್ಬಂದಿ ಯಾಗಿದ್ದು, ಮಿಕ್ಕವರು ತಾತ್ಕಾಲಿಕ ನೆಲೆಯಲ್ಲಿದ್ದಾರೆ. ಇವರೆಲ್ಲರ ಯೋಗಕ್ಷೇಮ ನಮ್ಮ ಹೊಣೆಯಾಗಿದೆ. 

ವನ್ಯಜೀವಿ ಮಂಡಳಿ ಸದಸ್ಯರೂ ಆದ ಸೊಸೈಟಿ ಫಾರ್ ಪ್ರೊಟೆಕ್ಷನ್ ಆಫ್ ಪ್ಲಾಂಟ್ಸ್ ಅಂಡ್ ಅನಿಮಲ್ಸ್ (ಎಸ್ ಪಿಪಿಎ) ಸಂಸ್ಥಾಪಕ ಧ್ರುವ ಪಾಟೀಲ ಅವರು ಹವ್ಯಾಸಿ ವನ್ಯಜೀವಿ ಛಾಯಾಗ್ರಾಹಕರಾಗಿದ್ದು, ಪ್ರತಿಕೂಲ ಸಂದರ್ಭಗಳಲ್ಲಿ ವನರಕ್ಷಕರು ಎದುರಿಸುತ್ತಿದ್ದ ಸಮಸ್ಯೆಗಳಿಗೆ ಕಿವಿಯಾಗಿ ಈ ಯೋಜನೆ ರೂಪಿಸಲು ನೆರವಾಗಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ ತಿಳಿಸಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories