ಬೆಂಗಳೂರಿನಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಅಬಕಾರಿ ಇಲಾಖೆ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದೂರುದಾರ ಲಕ್ಷ್ಮೀ ನಾರಾಯಣ್ ಅವರು ಈ ಪ್ರಕರಣದಲ್ಲಿ ಅಬಕಾರಿ ಸಚಿವ ಬಿ. ತಿಮ್ಮಾಪುರ ಅವರ ಪಾತ್ರದ ಬಗ್ಗೆಯೂ ಗಂಭೀರ ಆರೋಪ ಮಾಡಿದ್ದಾರೆ, ಇದು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಬಯಲಾಗಿರುವ ಭಾರೀ ಲಂಚ ಪ್ರಕರಣಕ್ಕೆ ಸಂಬಂಧಿಸಿ ದೂರುದಾರ ಲಕ್ಷ್ಮೀ ನಾರಾಯಣ್ ಅವರು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ನೀಡಿರುವ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ಪ್ರಕರಣದಲ್ಲಿ ಅಬಕಾರಿ ಸಚಿವ ಬಿ. ತಿಮ್ಮಾಪುರ ಅವರ ಮೇಲೂ ಗಂಭೀರ ಆರೋಪಗಳನ್ನು ಅವರು ಮಾಡಿದ್ದಾರೆ.
28
ಹುಳಿಮಾವು ಪ್ರಾಜೆಕ್ಟ್, ಲೈಸೆನ್ಸ್‌ಗೆ ಅಡ್ಡಿ
ಲಕ್ಷ್ಮೀ ನಾರಾಯಣ್ ಅವರ ಹೇಳಿಕೆ ನೀಡಿ, “ನಮ್ಮದು ಬೆಂಗಳೂರಿನ ಹುಳಿಮಾವು ಪ್ರದೇಶದಲ್ಲಿ ದೊಡ್ಡ ಪ್ರಮಾಣದ ಪ್ರಾಪರ್ಟಿ ಅಭಿವೃದ್ಧಿ ಯೋಜನೆ. ‘ಉನಾಲಿ ಬ್ರೀವ್ ಪಾರ್ಕ್’ ಎಂಬ ಹೆಸರಿನ ಈ ಯೋಜನೆ ಬಹುತೇಕ ಅಂತಿಮ ಹಂತ ತಲುಪಿತ್ತು. ಇದರ ಭಾಗವಾಗಿ ಸಿಎಲ್–7 ಮತ್ತು ಮೈಕ್ರೋ ಬ್ರೇವರಿ ಲೈಸೆನ್ಸ್ ಪಡೆಯಲು ನಾವು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದೇವೆ. ಆದರೆ ಬಹಳ ದಿನಗಳಾದರೂ ಅಪ್ಲಿಕೇಶನ್ ಯಾವುದೇ ಹಂತಕ್ಕೂ ಸಾಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಯ ಕಚೇರಿಗೆ ತೆರಳಿದಾಗ ಅಲ್ಲಿ ಅಧಿಕಾರಿಗಳು ಲಂಚದ ಡೀಲ್ ಮುಂದಿಟ್ಟರು ಎಂದು ಅವರು ಆರೋಪಿಸಿದ್ದಾರೆ.
38
ಸಿಎಲ್–7ಗೆ ₹80 ಲಕ್ಷ, ಮೈಕ್ರೋ ಬ್ರೇವರಿಗೆ ₹1.5 ಕೋಟಿ ಲಂಚ ಬೇಡಿಕೆ!
“ಸಿಎಲ್–7 ಲೈಸೆನ್ಸ್‌ಗೆ ₹80 ಲಕ್ಷ, ಮೈಕ್ರೋ ಬ್ರೇವರಿ ಲೈಸೆನ್ಸ್‌ಗೆ ₹1.5 ಕೋಟಿ ಲಂಚ ಬೇಕು ಎಂದು ಅಧಿಕಾರಿಗಳು ಸ್ಪಷ್ಟವಾಗಿ ಹೇಳಿದರು. ಇದೊಂದು ‘ಪ್ಯಾಕೇಜ್ ಡೀಲ್’ ಎಂದು ಅವರೇ ಹೇಳಿದ್ದಾರೆ. ‘ಇವರಿಗೆ ಇಷ್ಟು, ನಮಗೆ ಇಷ್ಟು’ ಎಂದು ಪಾಲು ಹಂಚಿಕೆಯ ಬಗ್ಗೆ ಅಧಿಕಾರಿಗಳು ಮಾತನಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ನಡೆದ ಮಾತುಕತೆಯ ಆಡಿಯೋ ದಾಖಲೆಗಳು ತಮ್ಮ ಬಳಿ ಇವೆ ಎಂದು ಲಕ್ಷ್ಮೀ ನಾರಾಯಣ್ ಗಂಭೀರ ಆರೋಪ ಮಾಡಿದ್ದಾರೆ. ಈ ಲಂಚದ ಮೊತ್ತದಲ್ಲಿ ಅಬಕಾರಿ ಸಚಿವರಿಗೂ ಪಾಲು ಇದೆ ಎಂಬುದನ್ನು ಅಧಿಕಾರಿಗಳೇ ಹೇಳಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಲಂಚದ ಬೇಡಿಕೆಯಿಂದ ಬೇಸತ್ತ ಲಕ್ಷ್ಮೀ ನಾರಾಯಣ್ ಅವರು ನಿನ್ನೆ ಲೋಕಾಯುಕ್ತರಿಗೆ ಅಧಿಕೃತ ದೂರು ಸಲ್ಲಿಸಿದ್ದಾರೆ. ಲೋಕಾಯುಕ್ತರ ಸೂಚನೆಯಂತೆ ₹25 ಲಕ್ಷ ಹಣವನ್ನು ಸಿದ್ಧಪಡಿಸಿ, ಅದನ್ನು ಲಂಚವಾಗಿ ನೀಡುವ ವೇಳೆ ಟ್ರ್ಯಾಪ್ ಮಾಡಲು ಸಹಕರಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.
58
ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್ ದೇವರಾಜ್ ಸ್ಪಷ್ಟನೆ
ಈ ಪ್ರಕರಣಕ್ಕೆ ಸಂಬಂಧಿಸಿ ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್ ದೇವರಾಜ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಇಂದು ಮಧ್ಯಾಹ್ನ 12:30ರ ಸುಮಾರಿಗೆ ಟ್ರ್ಯಾಪ್ ಕೇಸ್ ನಡೆಸಲಾಗಿದೆ. ಭ್ರಷ್ಟಾಚಾರ ತಡೆ ಕಾಯ್ದೆ (PC Act) ಸೆಕ್ಷನ್ 7(a) ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದ್ದಾರೆ.
68
ಮೂವರ ವಿರುದ್ಧ ದೂರು, ಲಂಚ ಸ್ವೀಕಾರಿಸುವಾಗ ಟ್ರ್ಯಾಪ್
ಲಕ್ಷ್ಮೀ ನಾರಾಯಣ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಮೂವರು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಸಿಎಲ್–7 ಲೈಸೆನ್ಸ್‌ಗೆ ₹80 ಲಕ್ಷ ಲಂಚ ಬೇಡಿಕೆ ಇಟ್ಟಿದ್ದರು. ಅದರ ಭಾಗವಾಗಿ ₹25 ಲಕ್ಷ ಹಣ ಸ್ವೀಕರಿಸುವಾಗ ಟ್ರ್ಯಾಪ್ ಮಾಡಲಾಗಿದೆ. ಟ್ರ್ಯಾಪ್ ವೇಳೆ ಅಬಕಾರಿ ಕಾನ್ಸ್ಟೇಬಲ್ ಲಕ್ಕಪ್ಪ ಮತ್ತು ಸೂಪರಿಂಟೆಂಡೆಂಟ್ ತಮ್ಮಣ್ಣ ಇಬ್ಬರೂ ತಪ್ಪಿಸಿಕೊಳ್ಳಲು ಯತ್ನಿಸಿದ್ದರೂ, ನಂತರ ಅವರನ್ನು ಬಂಧಿಸಲಾಗಿದೆ ಎಂದು ಲೋಕಾಯುಕ್ತ ಎಸ್‌ಪಿ ತಿಳಿಸಿದರು.
78
ಸರ್ಕಾರಿ ಶುಲ್ಕ ಕಟ್ಟಿದರೂ ಸಹ ಲಂಚ ಬೇಡಿಕೆ
ದೂರುದಾರರು ಸರ್ಕಾರಕ್ಕೆ ಪಾವತಿಸಬೇಕಾದ ಎಲ್ಲಾ ಅಧಿಕೃತ ಶುಲ್ಕವನ್ನು ಈಗಾಗಲೇ ₹21 ಲಕ್ಷಕ್ಕೂ ಹೆಚ್ಚು ಮೊತ್ತವಾಗಿ ಕಟ್ಟಿದ್ದಾರೆ. ಇದಾದ ನಂತರವೂ ಫೈಲ್‌ಗೆ ಸಹಿ ಹಾಕಲು ಉಪ ಆಯುಕ್ತ ಮಟ್ಟದಿಂದ ಲಂಚಕ್ಕೆ ಬೇಡಿಕೆ ಇಟ್ಟಿರುವುದು ಅತ್ಯಂತ ಗಂಭೀರ ವಿಷಯ ಎಂದು ಶಿವಪ್ರಕಾಶ್ ದೇವರಾಜ್ ಹೇಳಿದರು.ಬ್ಯಾಟರಾಯನಪುರದಲ್ಲಿರುವ ಅಬಕಾರಿ ಕಚೇರಿಯಲ್ಲೇ ಹಣ ಸ್ವೀಕರಿಸುವಾಗ ಮೂವರು ಅಧಿಕಾರಿಗಳು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಅಧಿಕಾರಿಗಳ ಮನೆಗಳಲ್ಲೂ ಶೋಧ ಕಾರ್ಯ ನಡೆಯುತ್ತಿದೆ ಎಂದು ಲೋಕಾಯುಕ್ತರು ಮಾಹಿತಿ ನೀಡಿದ್ದಾರೆ.
88
ಭಾರೀ ಸಂಚಲನಕ್ಕೆ ಕಾರಣವಾದ ಪ್ರಕರಣ
ಈ ಪ್ರಕರಣದಲ್ಲಿ ಸಚಿವರ ಹೆಸರು ಪ್ರಸ್ತಾಪವಾಗಿರುವುದರಿಂದ, ಅಬಕಾರಿ ಇಲಾಖೆ ಮಾತ್ರವಲ್ಲದೆ ರಾಜ್ಯ ಸರ್ಕಾರದ ಮೇಲೆಯೂ ಭಾರೀ ಒತ್ತಡ ನಿರ್ಮಾಣವಾಗಿದೆ. ಮುಂದಿನ ತನಿಖೆಯಲ್ಲಿ ಇನ್ನಷ್ಟು ಅಧಿಕಾರಿಗಳು ಅಥವಾ ರಾಜಕೀಯ ನಾಯಕರ ಪಾತ್ರ ಬಯಲಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಲಂಚ ಪ್ರಕರಣ ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಲೋಕಾಯುಕ್ತ ತನಿಖೆಯ ಮುಂದಿನ ಹಂತದ ಮೇಲೆ ಎಲ್ಲರ ಕಣ್ಣೂ ನೆಟ್ಟಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ