ಅಕ್ರಮ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ಪಲ್ಟಿ: ರಸ್ತೆಗೆ ಬಿದ್ದ ಟನ್‌ಗಟ್ಟಲೇ ಅಕ್ಕಿ

Published : Apr 17, 2026, 05:42 PM IST

ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಯೊಂದು ಬೀದರ್‌ನ ಝರಣಿ ನರಸಿಂಹ ದೇವಸ್ಥಾನದ ಬಳಿ ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಚಾಲಕ ಸೇರಿದಂತೆ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.

PREV
15
ಅಕ್ರಮ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ಪಲ್ಟಿ

ಬೀದರ್: ಅಕ್ರಮ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿದೆ. ತೆಲಂಗಾಣದಿಂದ ಬೀದರ್ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ಈ ಲಾರಿ ಹೋಗುತ್ತಿತ್ತು.

25
ಝರಣಿ ನರಸಿಂಹ ದೇವಸ್ಥಾನದ ಬಳಿ ಲಾರಿ ಪಲ್ಟಿ

ಬೀದರ್ ನಗರದ ಝರಣಿ ನರಸಿಂಹ ದೇವಸ್ಥಾನದ ಬಳಿ ಲಾರಿ ಪಲ್ಟಿಯಾಗಿದೆ. ಲಾರಿಯಲ್ಲಿ ನೂರು ಟನ್‌ಗೂ ಅಧಿಕ‌ ಪಡಿತರ ಅಕ್ಕಿ ಇರೋ ಬಗ್ಗೆ ಮಾಹಿತಿ ಇದೆ.

35
ಕಾರು ಹಾಗೂ ಟಾಟಾ ಮ್ಯಾಜಿಕ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಲಾರಿ

ಕಾರು ಹಾಗೂ ಟಾಟಾ ಮ್ಯಾಜಿಕ್‌ಗೆ ಡಿಕ್ಕಿ ಹೊಡೆದ ಬಳಿಕ ಲಾರಿ ಪಲ್ಟಿಯಾಗಿದೆ. ಅಕ್ಕಿ ತುಂಬಿದ ಈ ಟ್ರಕ್ ತೆಲಂಗಾಣದಿಂದ ಬೀದರ್ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ಹೋಗುತ್ತಿತ್ತು ಎಂದು ತಿಳಿದು ಬಂದಿದೆ.

45
ಲಾರಿ ಚಾಲಕ ಹಾಗೂ ಕಾರಿನಲ್ಲಿದ್ದ 6 ಜನರಿಗೆ ಗಾಯ

ಬೀದರ್‌ನ ರಿಂಗ್ ರೋಡ್‌ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕಾರಿನಲ್ಲಿದ್ದ 6 ಜನರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ.

55
ಅನ್ನಭಾಗ್ಯದ ಅಕ್ಕಿಯನ್ನ ಅಕ್ರಮವಾಗಿ ಸಾಗಿಸುತ್ತಿರುವ ಶಂಕೆ

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅನ್ನಭಾಗ್ಯದ ಅಕ್ಕಿಯನ್ನ ಅಕ್ರಮವಾಗಿ ಸಾಗಿಸುತ್ತಿದ್ದಿರಬಹುದು ಎಂಬ ಶಂಕೆ ಮೂಡಿದ್ದು, ಅಪಘಾತದ ನಂತರ ಲಾರಿ ಮಗುಚಿ ಬಿದ್ದಿದ್ದರಿಂದ ರಸ್ತೆ ತುಂಬಾ ಅಕ್ಕಿ ಚೆಲ್ಲಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories