ಚಾಮರಾಜನಗರ: ಬಿ‌ಆರ್‌ಟಿಯ ಹಲವು ಕಡೆಗಳಲ್ಲಿ ಭಾರಿ ಬೆಂಕಿ: ಧಗಧಗನೇ ಹೊತ್ತಿ ಉರಿಯುತ್ತಿರುವ ಹುಲಿ ಸಂರಕ್ಷಿತ ಪ್ರದೇಶ

Published : Mar 26, 2026, 07:37 PM IST

ಚಾಮರಾಜನಗರ ಜಿಲ್ಲೆಯ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಭಾರಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ನೂರಾರು ಎಕರೆ ಅರಣ್ಯ ನಾಶವಾಗಿದೆ. ಇದು ಕಿಡಿಗೇಡಿಗಳ ಕೃತ್ಯವಿರಬಹುದೆಂದು ಶಂಕಿಸಲಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳದವರು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

PREV
15

ಕೆಲ ದಿನಗಳ ಹಿಂದಷ್ಟೇ ಚಿಕ್ಕಮಗಳೂರಿನ ಕುದುರೆಮುಖದಲ್ಲಿ ಅರಣ್ಯಕ್ಕೆ ಬೆಂಕಿ ಬಿದ್ದು ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿರುವ ದೃಶ್ಯಗಳು ಸೆರೆಯಾಗಿದ್ದವು. ಈ ಘಟನೆ ಮಾಸುವ ಮೊದಲೇ ಈಗ ಚಾಮರಾಜನಗರ ಜಿಲ್ಲೆಯಲ್ಲಿ ಬರುವ ಪ್ರಸಿದ್ಧ ಹುಲಿರಕ್ಷಿತಾರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

25

ಬೆಂಕಿ ಕೆನ್ನಾಲಿಗೆ ಆಕಾಶಕ್ಕೆ ಏರಿದ್ದು, ಬಿಸಿಲಿನ ಧಗೆಗೆ ಬೆಂಕಿಇನ್ನಷ್ಟು ತೀವ್ರಗೊಂಡು ಉರಿಯುತ್ತಿದ್ದು, ದಟ್ಟವಾದ ಕಪ್ಪು ಹೊಗೆ ಹಾಗೂ ಬೆಂಕಿಯ ಕೆನ್ನಾಲಿಗೆ ಆಕಾಶದೆತ್ತರಕ್ಕೆ ಬೆಂಕಿ ಹೊತ್ತಿ ಉರಿಯುತ್ತಿರುವ ದೃಶ್ಯ ಘಟನಾ ಸ್ಥಳದಿಂದ ಬಂದ ವೀಡಿಯೋ ಫೋಟೋಗಳಲ್ಲಿ ಕಾಣಿಸುತ್ತಿದ್ದು ಭೀತಿ ಹುಟ್ಟಿಸಿದೆ.

35

ಚಾಮರಾಜನಗರ ಜಿಲ್ಲೆಯ ಬಿ‌ಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ(ಬಿಳಿಗಿರಿರಂಗನಾಥ ಟೆಂಪಲ್ ಟೈಗರ್ ರಿಸರ್ವರ್) ಬೆಂಕಿ ಕಾಣಿಸಿಕೊಂಡಿದ್ದು, ನೂರಾರು ಎಕರೆ ಅರಣ್ಯ ಹೊತ್ತಿ ಉರಿಯುತ್ತಿದೆ. ಬೈಲೂರು ವಲಯ ಹಾಗು ಕೊಳ್ಳೇಗಾಲ ವನ್ಯಜೀವಿ ವಲಯದ ಹತ್ತಕ್ಕೂ ಹೆಚ್ಚು ಕಡೆ ಬೆಂಕಿ ಕಾಣಿಸಿಕೊಂಡಿರುವ ಹಿನ್ನೆಲೆ ಇದು ಕಿಡಿಗೇಡಿಗಳ ಕೃತ್ಯವಿರಬಹುದೇ ಎಂಬ ಅನುಮಾನ ಮೂಡಿದೆ.

45

ಬೆಂಕಿ ನಂದಿಸಲು ಅರಣ್ಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದು, ಕಾಡು ಧಗಧಗನೇ ಹೊತ್ತಿ ಉರಿಯುತ್ತಿದೆ. ಘಟನೆಯಲ್ಲಿ 200ಕ್ಕೂ ಹೆಚ್ಚು ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದ್ದು, ದೃಶ್ಯಾವಳಿಗಳನ್ನು ಗಮನಿಸಿದರೆ ಕೇವಲ ಅರಣ್ಯ ಸಿಬ್ಬಂದಿಯಿಂದ ಈ ಬೆಂಕಿಯನ್ನು ನಂದಿಸುವುದಕ್ಕೆ ಸಾಧ್ಯವಿಲ್ಲದಂತೆ ಕಾಣುತ್ತಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

55

ಬಿಳಿಗಿರಿರಂಗನಾಥ ಟೆಂಪಲ್ ಟೈಗರ್ ರಿಸರ್ವರ್ ಆಗಿದ್ದು, ಇದು ಹುಲಿಗಳು, ಆನೆಗಳು, ಗೌರ್‌ಗಳು, ಕರಡಿಗಳು ಮತ್ತು 250 ಕ್ಕೂ ಹೆಚ್ಚು ಜಾತಿಯ ಪಕ್ಷಿಗಳ ಆವಾಸ ಸ್ಥಾನವಾಗಿದೆ. ಅಲ್ಲದೇ ಇಲ್ಲಿ ಸೋಲಿಗ ಬುಡಕಟ್ಟು ಜನಾಂಗದವರು ಸೇರಿದಂತೆ ಹಲವು ಸಮುದಾಯಗಳ ಜನ ವಾಸ ಮಾಡುತ್ತಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories