ಆರ್ ಆಶೋಕ್ ಮತ್ತು ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ್ ಹಾಗೂ ಸುರಪುರ ಶಾಸಕ ರಾಜೂಗೌಡ ಅವರು ಮಹಾಮಳೆ ಜಲಾವೃತವಾಗಿರುವ ಕಲಬುರಗಿ ತಾಲೂಕಿನ ಸೈಯದ್ ಚಿಂಚೋಳಿ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಇದಾದ ನಂತರ ಗ್ರಾಮದ ಗಂಜಿ ಕೇಂದ್ರಕ್ಕೂ ಭೇಟಿ ಕೊಟ್ಟಿದ್ದಾರೆ. ಈ ವೇಳೆ ನಮ್ಮನ್ನು ಬೇರೆ ಕಡೆ ಸ್ಥಳಾಂತರ ಮಾಡಿ ಎಂದು ಕೈ ಮುಗಿದು ಗ್ರಾಮದ ಮಹಿಳೆಯರು ಬೇಡಿಕೊಂಡಿದ್ದಾರೆ. ಆದರೆ ಇಂತಹ ಸಂದರ್ಭದಲ್ಲಿ ಅವರ ಜೊತೆಯಲ್ಲಿ ಇದ್ದು ಧೈರ್ಯ ಹೇಳಬೇಕಾದ ಜನಪ್ರತಿನಿಧಿಗಳು ಕೇವಲ 10 ನಿಮಿಷ ಸ್ಥಳದಲ್ಲಿದ್ದು, ಅಲ್ಲಿಂದ ಕಲ್ಕಿತ್ತಿದ್ದಾರೆ.