ರಾಮಲಿಂಗಾ ರೆಡ್ಡಿ ಬೆನ್ನಲ್ಲೇ ಮತ್ತೊಂದು ಶಾಕ್, ಸಾಮೂಹಿಕ ರಾಜೀನಾಮೆಗೆ ಮುಂದಾದ ಕಾಂಗ್ರೆಸ್ ಕಾರ್ಯಕರ್ತರು

Published : Jun 05, 2026, 10:34 AM IST

ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಸರ್ಕಾರಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ಸಾಮೂಹಿಕ ರಾಜೀನಾಮೆಗೆ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿದ್ದಾರೆ. ಸರ್ಕಾರ ರಚನೆಯಾದ ಕೆಲವೇ ದಿನಕ್ಕೆ ಕೋಲಾಹಲ ತೀವ್ರಗೊಂಡಿದೆ.

PREV
16
ರಾಮಲಿಂಗಾ ರೆಡ್ಡಿ ಬೆನ್ನಲ್ಲೇ ಮತ್ತೊಂದು ಆತಂಕ

ಮುಖ್ಯಮಂತ್ರಿ ಡಿಕೆ ಶಿವುಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಆರಂಭದಲ್ಲೇ ಹಿನ್ನಡೆ ಎದುರಿಸುತ್ತಿದೆ. ಸಿದ್ದರಾಮಯ್ಯ ರಾಜೀನಾಮೆ ಬಳಿಕ ರಚನೆಗೊಂಡ ಡಿಕೆ ಶಿವಕುಮಾರ್ ಸರ್ಕಾರ ಆಡಳಿತ ನಡೆಸುವ ಮೊದಲೇ ಸಚಿವ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಮಲಿಂಗಾ ರೆಡ್ಡಿ ಯಾವುದೇ ಮನವೋಲಿಕೆಗೆ ಜಗ್ಗದೆ ತಮ್ಮ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಸಮರ್ಥ ನಾಯಕನಾಗಿ ತಕ್ಕ ಜವಾಬ್ದಾರಿ ನೀಡುವಲ್ಲಿ ಕಾಂಗ್ರೆಸ್ ವಿಫಲಗೊಂಡಿದೆ ಎಂದು ರಾಮಲಿಂಗಾ ರೆಡ್ಡಿ ಬೆಂಬಲಿಗರು ಆಕ್ರೋಶ ಹೊರಹಾಕಿದ್ದಾರೆ. ಇದೇ ವೇಳೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಕಾಂಗ್ರೆಸ್ ಕಾರ್ಯಕರ್ತರು ಘೋಷಿಸಿದ್ದಾರೆ.

26
ರಾಮಲಿಂಗ ರೆಡ್ಡಿಗೆ ಅನ್ಯಾಯ, ಸಾಮೂಹಿಕ ರಾಜೀನಾಮೆ ಘೋಷಿಸಿದ ಕಾರ್ಯಕರ್ತರು

ರಾಮಲಿಂಗಾ ರೆಡ್ಡಿಗೆ ಅನ್ಯಾಯ ಮಾಡಿದ್ದಾರೆ. ಇದು ನಮಗೆ ತೀವ್ರ ನೋವಾಗಿ. ಬೆಂಗಳೂರಿನ ಇಂಚಿಂಚೂ ಗೊತ್ತಿರುವ ನಾಯಕ ರಾಮಲಿಂಗಾ ರೆಡ್ಡಿ. ಬೆಂಗಳೂರು ನಗರದ ಅಭಿವೃದ್ಧಿಯಲ್ಲಿ ರಾಮಲಿಂಗಾ ರೆಡ್ಡಿ ಕೊಡುಗೆ ಮಹತ್ವವಾಗಿದೆ. ಇದೀಗ ರಾಮಲಿಂಗಾ ರೆಡ್ಡಿಗೆ ಅನ್ಯಾಯವಾಗಿದೆ. ಇದರಿಂದ ಕಾಂಗ್ರೆಸ್ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

36
ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ರಾಮಲಿಂಗಾ ರೆಡ್ಡಿ ಕಚೇರಿಗೆ ಇದೀಗ ಕಾಂಗ್ರೆಸ್ ಕಾರ್ಯಕರ್ತರು, ಬೆಂಬಲಿಗರು ಆಗಮಿಸುತ್ತಿದ್ದಾರೆ. ರಾಮಲಿಂಗಾ ರೆಡ್ಡಿಗೆ ಅನ್ಯಾಯವಾಗಿದೆ ಎಂದು ಭಾರಿ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಮಲಿಂಗಾ ರೆಡ್ಡಿಗೆ ಸರಿಯಾದ ಖಾತೆ ನೀಡಬೇಕು ಎಂದು ಕಾರ್ಯಕರ್ತರು ಪಟ್ಟು ಹಿಡಿದ್ದಾರೆ.

46
ಮಾತುಕತೆಗೆ ತಯಾರಿಲ್ಲ

ರಾಮಲಿಂಗಾರೆಡ್ಡಿ ಇಲ್ಲದೆ ಜಿಬಿಎ ಚುನಾವಣೆ ಗೆಲುವು ಅಸಾಧ್ಯ ಎಂದು ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ. ರಾಮಲಿಂಗಾ ರೆಡ್ಡಿ ಹಿರಿತನಕ್ಕೆ ಅಪಮಾನ ಮಾಡಿದ್ದಾರೆ. ಇದೀಗ ಎಲ್ಲೆಡೆಗಳಿಂದ ಮನವೊಲಿಕೆ ಪ್ರಯತ್ನಗಳು ನಡೆಯುತ್ತಿದೆ. ಹೈಕಮಾಂಡ್ ಮಟ್ಟದಿಂದ , ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಸೇರಿದಂತೆ ಪ್ರಮುಖ ನಾಯಕರು ರಾಮಲಿಂಗಾ ರೆಡ್ಡಿ ಮನವೊಲಿಕೆಯಲ್ಲಿ ತೊಡಗಿದ್ದಾರೆ. ಆದರೆ ಸುದ್ದಿಗೋಷ್ಠಿಯಲ್ಲಿ ತಾನು ಯಾವುದೇ ಮಾತುಕತೆಗೆ ತಯಾರಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

56
ಮಾತುಕತೆ ನಡೆಸಿ ಸರಿಮಾಡುತ್ತೇವೆ

ರಾಮಲಿಂಗಾ ರೆಡ್ಡಿ ರಾಜೀನಾಮೆ ಕುರಿತು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಪ್ರತಿಕ್ರಿಯಿಸಿದ್ದಾರೆ. ನಾವು ಮಾತನಾಡಿ ಸಮಸ್ಯೆ ಬಗೆ ಹರಿಸುತ್ತೇವೆ. ಇಂದು ನಾಮಪತ್ರ ಸಲ್ಲಿಕೆ ಇರುವ ಕಾರಣ ಮೊದಲು ಕೆಲಸ ಮುಗಿಸಿ ಅವರ ಜೊತೆ ಮಾತನಾಡುತ್ತೇನೆ ಎಂದಿದ್ದಾರೆ. ರಾಮಲಿಂಗಾ ರೆಡ್ಡಿ ಹಿರಿಯ ನಾಯಕರು, ಅವರ ಜೊತೆ ಮಾತನಾಡಿ ಸಮಸ್ಯೆ ಕ್ಲೀಯರ್ ಮಾಡುತ್ತೇವೆ ಎಂದಿದ್ದಾರೆ.

66
ರಾಮಲಿಂಗರೆಡ್ಡಿ ರಾಜೀನಾಮೆ ಬಗ್ಗೆ ಸಿಎಂ ಡಿಕೆಶಿ ಪ್ರತಿಕ್ರಿಯೆ

ರಾಮಲಿಂಗಾ ರೆಡ್ಡಿ ರಾಜೀನಾಮೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ರಾಮಲಿಂಗಾ ರೆಡ್ಡಿ ನನ್ನ ಬೆಸ್ಟ್ ಫ್ರೆಂಡ್. ಅವರ ಜೊತೆ ಮಾತನಾಡುತ್ತೇನೆ. ಎಲ್ಲಾ ಸಮಸ್ಯೆ ಬಗೆಹರಿಯಲಿದೆ ಎಂದು ಡಿಕೆ ಶಿವುಕಮಾರ್ ಹೇಳಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories