ಬೆಂಗಳೂರು: ಕೋವಿಡ್‌ ಆರೈಕೆ ಕೇಂದ್ರ ಪರಿಶೀಲಿಸಿದ ಸಚಿವ ಸೋಮಣ್ಣ

ಬೆಂಗಳೂರು(ಜು.26): ಬಿಬಿಎಂಪಿ ಪೂರ್ವ ವಲಯದಲ್ಲಿ ಕೊರೋನಾ ಸೋಂಕಿತರ ಆರೈಕೆಗೆ ಸಿದ್ಧಪಡಿಸಲಾಗುತ್ತಿರುವ ಕೋವಿಡ್‌ ಆರೈಕೆ ಕೇಂದ್ರಗಳನ್ನು ಉಸ್ತುವಾರಿ ಸಚಿವ ವಿ.ಸೋಮಣ್ಣ ಹಾಗೂ ಮೇಯರ್‌ ಗೌತಮ್‌ ಕುಮಾರ್‌ ಶನಿವಾರ ಪರಿಶೀಲನೆ ನಡೆಸಿದ್ದಾರೆ. 
 

ಶಿವಾಜಿನಗರದ ಬ್ರಾಡ್‌ ವೇ ಆಸ್ಪತ್ರೆ, ಇಂದಿರಾನಗರದ ಇಎಸ್‌ಐ ಆಸ್ಪತ್ರೆ ಹಾಗೂ ಶಾಂತಿನಗರ ಪ್ರೈಮ್‌ ರೋಸ್‌ ರಸ್ತೆಯ ಸರ್ಕಾರಿ ಕಲಾ ಕಾಲೇಜು ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಸಿದ್ಧಪಡಿಸುತ್ತಿರುವ ಕೋವಿಡ್‌ ಆರೈಕೆ ಕೇಂದ್ರಗಳನ್ನು ಪರಿಶೀಲಿಸಿ, ತ್ವರಿತವಾಗಿ ಸಿದ್ಧತೆ ಕಾರ್ಯ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಚಿವ ವಿ.ಸೋಮಣ್ಣ
ಇಂದಿರಾನಗರ ಇಎಸ್‌ಐ ಆಸ್ಪತ್ರೆಯಲ್ಲಿ ಕೋವಿಡ್‌ ಸೋಂಕಿತರ ಆರೈಕೆಗೆ 75 ಹಾಸಿಗೆ ಮೀಸಲಿಡುತ್ತಿದ್ದು, ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.

ಬ್ರಾಡ್‌ ವೇ ಆಸ್ಪತ್ರೆಯಲ್ಲಿ 150 ಹಾಸಿಗೆಗಳ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಇದರೊಂದಿಗೆ ಆಕ್ಸಿಜನ್‌, ಐಸಿಯು, ವೆಂಟಿಲೇಟರ್‌ ಸೌಲಭ್ಯ, ನ್ಯೂರೋ ಸರ್ಜರಿ ಓಟಿ, ಕಾರ್ಡಿಯೋ ಓಟಿ, ಸಿಟಿ ಸ್ಕ್ಯಾನ್‌ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ.
ಸರ್ಕಾರಿ ಕಲಾ ಕಾಲೇಜು ಬಾಲಕರ ವಿದ್ಯಾರ್ಥಿ ನಿಲಯವನ್ನು ಕೋವಿಡ್‌ ಆರೈಕೆ ಕೇಂದ್ರವಾಗಿ ಪರಿವರ್ತಿಸುತ್ತಿದ್ದು, ಶೀಘ್ರದಲ್ಲೇ ಉದ್ಘಾಟಿಸುವುದಾಗಿ ಹೇಳಿದ ಸಚಿವ ವಿ. ಸೋಮಣ್ಣ
ಈ ವೇಳೆ ಸ್ಥಳೀಯ ಶಾಸಕರಾದ ರಿಜ್ವಾನ್‌ ಅರ್ಷದ್‌, ಎನ್‌.ಎ.ಹ್ಯಾರಿಸ್‌, ವೈದ್ಯರು ಹಾಗೂ ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.

Latest Videos

click me!