ಸಿರಿಗೆರೆ ತರಳಬಾಳು ಮಠಕ್ಕೆ ಎಸ್.ಎಸ್.ಮಲ್ಲಿಕಾರ್ಜುನ ಭೇಟಿ: ಶ್ರೀಗಳ ಆಶೀರ್ವಾದ ಪಡೆದ ಸಚಿವ

Published : Jun 03, 2023, 08:44 PM IST

ಸಚಿವರಾಗಿ  ಮೊದಲ ಬಾರಿಗೆ ದಾವಣಗೆರೆಗೆ ಆಗಮಿಸುತ್ತಿರುವ ಮಲ್ಲಿಕಾರ್ಜುನ್ ಅವರನ್ನು ಭರ್ಜರಿಯಾಗಿ ಸ್ವಾಗತಿಸಲು ಬೆಂಬಲಿಗರು, ಮುಖಂಡರು, ಕಾರ್ಯಕರ್ತರು ಸಜ್ಜಾಗಿದ್ದಾರೆ. ವಿಶೇಷವಾಗಿ ಮಲ್ಲಿಕಾರ್ಜುನ ಶಾಸಕರಾಗಿ ಬೆಂಗಳೂರಿಗೆ ತೆರಳಿದ ನಂತರ ಇದೇ ಮೊದಲ ಸಲ ಸಚಿವರಾಗಿ ಬರುತ್ತಿದ್ದಾರೆ.

PREV
16
ಸಿರಿಗೆರೆ ತರಳಬಾಳು ಮಠಕ್ಕೆ ಎಸ್.ಎಸ್.ಮಲ್ಲಿಕಾರ್ಜುನ ಭೇಟಿ: ಶ್ರೀಗಳ ಆಶೀರ್ವಾದ ಪಡೆದ ಸಚಿವ

ಚಿತ್ರದುರ್ಗ (ಜೂ.03): ಚಿತ್ರದುರ್ಗ ತಾಲೂಕಿನ ಸಿರಿಗೆರೆ ಗ್ರಾಮದಲ್ಲಿನ ಸಿರಿಗೆರೆ ತರಳಬಾಳು ಮಠಕ್ಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಭೇಟಿ ನೀಡಿ ಡಾ.ಶಿವಮೂರ್ತಿ ಶಿವಾಚಾರ್ಯ ಶ್ರೀಗಳ ಆಶೀರ್ವಾದ ಪಡೆದರು. ಈ ವೇಳೆ ಮಲ್ಲಿಕಾರ್ಜುನ್‌ಗೆ ಶಾಸಕ ಕೆ.ಸಿ.ವಿರೇಂದ್ರ ಸಾಥ್ ನೀಡಿದರು.

26

ಇನ್ನು ಸಚಿವರಾಗಿ  ಮೊದಲ ಬಾರಿಗೆ ದಾವಣಗೆರೆಗೆ ಆಗಮಿಸುತ್ತಿರುವ ಮಲ್ಲಿಕಾರ್ಜುನ್ ಅವರನ್ನು ಭರ್ಜರಿಯಾಗಿ ಸ್ವಾಗತಿಸಲು ಬೆಂಬಲಿಗರು, ಮುಖಂಡರು, ಕಾರ್ಯಕರ್ತರು ಸಜ್ಜಾಗಿದ್ದಾರೆ. ವಿಶೇಷವಾಗಿ ಮಲ್ಲಿಕಾರ್ಜುನ ಶಾಸಕರಾಗಿ ಬೆಂಗಳೂರಿಗೆ ತೆರಳಿದ ನಂತರ ಇದೇ ಮೊದಲ ಸಲ ಸಚಿವರಾಗಿ ಬಂದಿದ್ದಾರೆ.

36

ನಗರದೆಲ್ಲೆಡೆ ನೂತನ ಸಚಿವರಿಗೆ ಶುಭಕೋರುವ ಫ್ಲೆಕ್ಸ್ ಹಾಗೂ‌ ಬ್ಯಾನರ್‌ಗಳು ರಾರಾಜಿಸುತ್ತಿದ್ದವು. ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ಎಸ್. ಮಲ್ಲಿಕಾರ್ಜುನ್ ಅವರು 3ನೇ ಬಾರಿಗೆ ಸಚಿವರಾಗಿ ಸ್ವೀಕರಿಸಿ ಅಧಿಕಾರ ಸ್ವೀಕರಿಸಿದ್ದಾರೆ. 

46

ಅವರನ್ನು ದಾವಣಗೆರೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ‍್ಯಕರ್ತರು ಮತ್ತು ಅಭಿಮಾನಿಗಳು ಇಂದು ಮಧ್ಯಾಹ್ನ ಜಿಲ್ಲಾ ಪಂಚಾಯತ್ ಮುಂಭಾಗದಲ್ಲಿ ಸ್ವಾಗತಿಸಿ ಬೈಕ್ ರ‍್ಯಾಲಿ ಮೂಲಕ ದಾವಣಗೆರೆ ನಗರದ ವಿವಿಧ ಕಡೆಗಳಲ್ಲಿ ಮೆರವಣಿಗೆ ನಡೆಸಿದರು. ಅದಕ್ಕೂ ಮುನ್ನ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರು ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ಆಗಮಿಸಿದರು.

56

ಇದೇ ವೇಳೆ ಸಿರಿಗೆರೆ ಮಠಕ್ಕೆ ತೆರಳಿ ಶ್ರೀ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರನ್ನು ಭೇಟಿ ಮಾಡಿ‌ ಆಶೀರ್ವಾದ ಪಡೆದರು. ನಂತರ  ದಾವಣಗೆರೆ ಜಿಲ್ಲಾ ಪಂಚಾಯತ್ ಮುಂಭಾಗದಿಂದ ಮೆರವಣಿಗೆ  ಪ್ರಾರಂಭವಾಗಿ ಗಣೇಶ ದೇವಸ್ಥಾನ ಹದಡಿ ರಸ್ತೆ, ಐ.ಟಿ.ಐ. ಕಾಲೇಜ್ ಮುಂಭಾಗದಿಂದ 60 ಅಡಿ ರಸ್ತೆಯ ಮೂಲಕ ನಿಟುವಳ್ಳಿ ದುರ್ಗಾಂಬಿಕ ಸರ್ಕಲ್, ನಿಟುವಳ್ಳಿ, ಆರ್.ಎಸ್. ಶೇಖರಪ್ಪನವರ ಮನೆ ಮುಂಭಾಗ, ಕೊಂಡಜ್ಜಿ ಬಸಪ್ಪ ಸರ್ಕಲ್ ಹದಡಿ ರಸ್ತೆ.

66

ವಿದ್ಯಾರ್ಥಿ ಭವನ ಸರ್ಕಲ್, ಹದಡಿ ರಸ್ತೆ, ಕೆ.ಇ.ಬಿ. ಸರ್ಕಲ್, (ಅಂಬೇಡ್ಕರ್ ಸರ್ಕಲ್) ಹದಡಿ ರಸ್ತೆ, ಜಯದೇವ ಸರ್ಕಲ್, ಮಹಾನಗರ ಪಾಲಿಕೆ ಕಛೇರಿ ಮುಂಭಾಗದಿಂದ ಅರುಣ್ ಸರ್ಕಲ್ ಮುಖಾಂತರ ರೈಲ್ವೆಗೇಟ್ ಮುಖಾಂತರ ಹೊಂಡದ ಸರ್ಕಲ್, ದುರ್ಗಾಂಬಿಕ ದೇವಸ್ಥಾನ ಶಿವಾಜಿ ವೃತ್ತ, ಹಗೇದಿಬ್ಬ ಸರ್ಕಲ್, ಅಜಾದ್‌ನಗರ ಮುಖ್ಯರಸ್ತೆ, ಅರಳಿಮರ ಸರ್ಕಲ್, ವೆಂಕಟೇಶ್ವರ ಸರ್ಕಲ್‌ ನಲ್ಲಿ ಅದ್ದೂರಿ ಮೆರವಣಿಗೆ ಹಾಗೂ ಅಭಿಮಾನಿಗಳಿಂದ ಸಚಿವರಿಗೆ ಸನ್ಮಾನ ನಡೆಯಿತು.

Read more Photos on
click me!

Recommended Stories