ಮಂಗಳವಾರ ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್ ಆರೈಕೆ ಕೇಂದ್ರಕ್ಕೆ ಚಾಲನೆ ನೀಡಿದ ಅವರು, ಕೊರೋನಾ ಸೋಂಕಿನಿಂದ ಜನರು ಹೆದರಿಕೊಂಡಿದ್ದು ಅವರಿಗೆ ಮಾನಸಿಕ ಸ್ಥೈರ್ಯ ತುಂಬಬೇಕಿದೆ ಎಂದು ಹೇಳಿದ ಸಚಿವ ವಿ.ಸೋಮಣ್ಣ
ಕೊರೋನಾ ಸೋಂಕು ಹರಡದಂತೆ ಪ್ರತಿಯೊಬ್ಬರು ಮುಂಜಾಗ್ರತೆ ವಹಿಸಬೇಕಿದ್ದು, ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಧೈರ್ಯಗೆಡದೆ ಸೋಂಕಿನ ವಿರುದ್ಧ ಹೋರಾಡುವುದರ ಜತೆಗೆ ಈ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವಂತ ಕೆಲಸವನ್ನು ಮಾಡಬೇಕು ಎಂದು ಹೇಳಿದ ಸಚಿವ ಸೋಮಣ್ಣ
ಈ ವೇಳೆ ಶಾಸಕ ಬೈರತಿ ಸುರೇಶ್, ಮಾಜಿ ಸಚಿವ ಕಟ್ಟಾಸುಬ್ರಮಣ್ಯ ನಾಯ್ಡು ಇತರರಿದ್ದರು.
ಹೆಬ್ಬಾಳ ಪಶುವೈದ್ಯಕೀಯ ಕಾಲೇಜಿನಲ್ಲಿ 60 ಹಾಸಿಗೆಗಳ ವ್ಯವಸ್ಥೆಯ ಕೋವಿಡ್ ಕೇರ್ ಕೇಂದ್ರ ತೆರೆಯಲಾಗಿದೆ. ಪುರುಷರಿಗಾಗಿ ಬಿ ಬ್ಲಾಕ್‌ನಲ್ಲಿ 30 ಹಾಸಿಗೆ ಮತ್ತು ಮಹಿಳೆಯರು, ವೈದ್ಯರಿಗಾಗಿ 30 ಹಾಸಿಗೆಗಳನ್ನು ಮೀಸಲು ಇಡಲಾಗಿದೆ. ಮಂಗಳವಾರದಿಂದಲೇ ಈ ಕೋವಿಡ್ ಕೇರ್ ಸೆಂಟರ್ ಸೇವೆಗೆ ಲಭ್ಯ