Published : Jun 03, 2020, 11:57 AM ISTUpdated : Jun 03, 2020, 12:02 PM IST
ಬೆಂಗಳೂರು(ಜೂ.03): ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಶಾಸಕ ಮಹೇಶ್ ಕುಮಟಳ್ಳಿ ಅವರು ಇಂದು(ಬುಧವಾರ) ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಬಿಜೆಪಿಯಲ್ಲಿ ಅಸಮಾಧಾನ ಹೊಗೆಯಾಡುತ್ತಿದ್ದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಹೇಶ್ ಕುಮಟಳ್ಳಿ ಅವರನ್ನ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದರು.