ಮಗುವಿಗೆ ಜನ್ಮ ನೀಡಿ ಬಾಣಂತಿ ಸಾವು: ಐಸಿಯುಗೆ ದಾಖಲಿಸುವುದಾಗಿ ಶವಗಾರಕ್ಕೆ ಶಿಫ್ಟ್ ಮಾಡಿದ ಆರೋಪ

Published : Mar 10, 2026, 10:41 AM IST

ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ 28 ವರ್ಷದ ಶಿಲ್ಪಾ ಎಂಬ ಬಾಣಂತಿ ಸಾವನ್ನಪ್ಪಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಆಸ್ಪತ್ರೆಯಲ್ಲಿ ಗಲಾಟೆ ಮಾಡಿದ್ದಾರೆ.

PREV
15
ಬಾಣಂತಿ ಸಾವು

ಚಿತ್ರದುರ್ಗ: ಹೆಣ್ಣು ಮಗುವಿಗೆ ಜನ್ಮ ನೀಡಿ 28 ವರ್ಷದ ಬಾಣಂತಿಯೊಬ್ಬರು ಸಾವನ್ನಪ್ಪಿದ್ದು, ವೈದ್ಯರ ವಿರುದ್ಧ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಶಿಲ್ಪಾ ಹೆಣ್ಣು ಮಗುವಿಗೆ ಜನ್ಮ ನೀಡಿದ ಬಳಿಕ ಸಾವನ್ನಪ್ಪಿದ್ದಾರೆ.

25
ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಘಟನೆ

ಜಿಲ್ಲಾಸ್ಪತ್ರೆಯ ವೈದ್ಯರ ವಿರುದ್ಧ ಶಿಲ್ಪಾ ಸಂಬಂಧಿಕರು ನಿರ್ಲಕ್ಷ್ಯದ ಆರೋಪ ಮಾಡಿದ್ದು, ವೈದ್ಯರ ನಿರ್ಲಕ್ಷ್ಯದಿಂದಲೇ ಬಾಣಂತಿ ಶಿಲ್ಪಾ ಸಾವನ್ನಪ್ಪಿದ್ದಾಳೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

35
ಶಿಲ್ಪಾ ಸಂಬಂಧಿಕರಿಂದ ನಿರ್ಲಕ್ಷ್ಯದ ಆರೋಪ

ಜಿಲ್ಲಾಸ್ಪತ್ರೆಯ ವೈದ್ಯರ ವಿರುದ್ಧ ಶಿಲ್ಪಾ ಸಂಬಂಧಿಕರು ನಿರ್ಲಕ್ಷ್ಯದ ಆರೋಪ ಮಾಡಿದ್ದು, ವೈದ್ಯರ ನಿರ್ಲಕ್ಷ್ಯದಿಂದಲೇ ಬಾಣಂತಿ ಶಿಲ್ಪಾ ಸಾವನ್ನಪ್ಪಿದ್ದಾಳೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

45
ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿ ಹೇಳಿದ್ದೇನು?

ಘಟನೆಗೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಡಿಎಸ್ ಡಾ.ರವೀಂದ್ರ ಪ್ರತಿಕ್ರಿಯೆ ನೀಡಿದ್ದು, ಶಿಲ್ಪಾ ಅವರನ್ನು ತಡವಾಗಿ ಹೆರಿಗೆಗೆ ಕರೆ‌ ತಂದಿದ್ದು, ಹೆರಿಗೆ ವೇಳೆ‌ ಉಸಿರಾಟ ತೊಂದರೆಯಿಂದ ಶಿಲ್ಪಾ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಒಂದೇ ಕೇಸಲ್ಲಿ 4 MLC ಕೊಟ್ಟು ವಿಮಾ ಕಂಪನಿಗೆ ವಂಚಿಸಲು ಯತ್ನ: ವೈದ್ಯರ ವಿರುದ್ಧ ತನಿಖೆಗೆ ತಡೆಕೋರಲು ನಿರಾಕರಿಸಿದ ಹೈಕೋರ್ಟ್‌

55
ಐಸಿಯುನಲ್ಲಿರುವ ನವಜಾತ ಶಿಶು

ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಬಗ್ಗೆ ಪರಿಶೀಲಿಬೇಕಿದೆ. ಶಿಲ್ಪಾಗೆ ಹೆಣ್ಣು ಮಗು ಜನಿಸಿದ್ದು ಐಸಿಯುನಲ್ಲಿದೆ. ವೈದ್ಯರ ವಿರುದ್ಧ ಶಿಲ್ಪಾ ಸಂಬಂಧಿಕರು ನಿರ್ಲಕ್ಷ್ಯದ ಆರೋಪ ಮಾಡಿದ್ದು, ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಡಾ ರವೀಂದ್ರ ಹೇಳಿದ್ದಾರೆ.

ಇದನ್ನೂ ಓದಿ:  ಎತ್ತಿನಹೊಳೆ, ಮೇಕೆದಾಟು ವಿಳಂಬಕ್ಕೆ ರಾಜ್ಯ ಸರ್ಕಾರ ಕಾರಣ: ದೇವೇಗೌಡ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories