Namma Metro: ಬೆಂಗಳೂರು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ನಿನ್ನೆ ಸಂಜೆ ತಾಂತ್ರಿಕ ದೋಷದಿಂದ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಇದೀಗ ತಾಂತ್ರಿಕ ದೋಷ ಸರಿಪಡಿಸಿದ್ದು ನೇರಳೆ ಮಾರ್ಗದ ಮೆಟ್ರೋ ಬೆಳಗ್ಗೆಯಿಂದ ಆರಂಭಿಸಲಾಗಿದೆ.
ಕಬ್ಬನ್ ಪಾರ್ಕ್‌ಗೆ ಆಗಮಿಸಿದ ಮೆಟ್ರೋ ಎಂದಿನಂತೆ ಸಂಚಾರ ಆರಂಭ
ನಿನ್ನೆ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ರೈಲಿನಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷದಿಂದ ಮೆಟ್ರೋ ಸಂಚಾರ ಸ್ಥಗಿತಗೊಳಿಸಿದ್ದ ಅಧಿಕಾರಿಗಳು. ಇದೀಗ ತಾಂತ್ರಿಕ ದೋಷ ಸರಿಪಡಿಸಿದ ಹಿನ್ನೆಲೆ ಇಂದು ಬೆಳಗ್ಗೆ 5 ಗಂಟೆಯಿಂದಲೇ ಎಂದಿನಂತೆ ಎಲ್ಲ ಮಾರ್ಗಗಳಲ್ಲೂ ಮೆಟ್ರೋ ಸಂಚಾರ ಆರಂಭಿಸಲಾಗಿದೆ.
23
ತಾಂತ್ರಿಕ ದೋಷ ಸರಿಪಡಿಸಿದ ನಂತರ ಯಥಾಸ್ಥಿತಿ ಮರಳಿದ ನೇರಳೆ ಮಾರ್ಗ
ತಾಂತ್ರಿಕ ದೋಷ ಸರಿಪಡಿಸಿದ ನಂತರ ಮುಂಜಾನೆ 5.21ಕ್ಕೆ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿತು. ಮುಂಜಾನೆ 5ಗಂಟೆಯಿಂದ ಕಾಡುಗೋಡಿಯಿಂದ ಹೊರಟು 5:21ಕ್ಕೆ ಕಬ್ಬನ್ ಪಾರ್ಕ್ ಗೆ ತಲುಪುವ ಮೂಲಕ ಕಾಡುಗೋಡಿ-ಚಲ್ಲಘಟ್ಟದವರೆಗಿನ ನೇರಳೆ ಮಾರ್ಗದ ಮೆಟ್ರೋ ಸಂಚಾರ ಯಥಾಸ್ಥಿತಿಗೆ ಮರಳಿದೆ
33
ಪ್ರಯಾಣಿಕರಿಗೆ ತೊಂದರೆಯಾಗದಂತೆ BMRCL ಕ್ರಮ
ನಿನ್ನೆ ಸಂಜೆ 6.30 ರಿಂದ ತಾಂತ್ರಿಕ ದೋಷದಿಂದ ರೈಲು ಕಬ್ಬನ್ ಪಾರ್ಕ್‌ನಲ್ಲಿ ನಿಂತು ಮೆಟ್ರೋ ಸೇವೆ ಬಂದ್ ಆಗಿತ್ತು. ಮೆಟ್ರೋ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುವಂತಾಯಿತು. ಇದೀಗ ತಾಂತ್ರಿಕ ದೋಷ ಸರಿಪಡಿಸಿ ಎಂದಿನಂತೆ, ಪ್ರಯಾಣಿಕರಿಗೆ ತೊಂದರೆ ಆಗದಂತೆ ಬಿಎಂಆರ್‌ಸಿಎಲ್ ಮೆಟ್ರೋ ಸೇವೆ ಆರಂಭಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ