ದೆಹಲಿ ಕರ್ನಾಟಕ ಸಂಘಕ್ಕೆ ನೋಯ್ಡಾದಲ್ಲಿ ಜಾಗ; ಉಪ್ರ ಮುಖ್ಯಮಂತ್ರಿ ಜೊತೆ ಚರ್ಚೆ: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ

Published : Aug 02, 2024, 10:57 AM ISTUpdated : Aug 02, 2024, 11:43 AM IST

ನಾವು ಎಲ್ಲಿಯೇ ಇದ್ದರೂ ಕನ್ನಡಿಗರಿಗೆ ಉಳಿಯಬೇಕು. ನಮ್ಮ ಭಾಷೆ, ಸಂಸ್ಕೃತಿ, ನಾಡು ನುಡಿಯನ್ನು ಬಿಟ್ಟು ಬದುಕಬಾರದು ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.

PREV
16
ದೆಹಲಿ ಕರ್ನಾಟಕ ಸಂಘಕ್ಕೆ ನೋಯ್ಡಾದಲ್ಲಿ ಜಾಗ; ಉಪ್ರ ಮುಖ್ಯಮಂತ್ರಿ ಜೊತೆ ಚರ್ಚೆ: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ

ಉತ್ತರ ಪ್ರದೇಶದ ನೋಯ್ಡಾದಲ್ಲಿ ದೆಹಲಿ ಕರ್ನಾಟಕ ಸಂಘಕ್ಕೆ ಜಾಗ ಕೊಡಿಸುವ ಬಗ್ಗೆ ಆ ರಾಜ್ಯದ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್ ಅವರ ಜತೆ ಚರ್ಚೆ ಮಾಡಲಾಗುವುದು ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಭರವಸೆ ನೀಡಿದರು.
 

26

ರಾಜ್ಯದ ಕೇಂದ್ರ ಸಚಿವರು, ಸಂಸದರಿಗೆ ದೆಹಲಿ ಕರ್ನಾಟಕ ಸಂಘ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡು ಮಾತನಾಡಿದರು.
 

36

ಈಗಾಗಲೇ ನೋಯ್ಡಾದಲ್ಲಿ ಜಾಗ ಪಡೆಯುವ ಬಗ್ಗೆ ಸಂಘದ ವತಿಯಿಂದ ಪ್ರಯತ್ನಗಳು ನಡೆದಿವೆ. ಹೀಗಾಗಿ ಕೇಂದ್ರ ಸಂಪುಟದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಎಲ್ಲಾ ಸಚಿವರು, ಸಂಸದರ ಜತೆ ಸೇರಿ ಉತ್ತರ ಪ್ರದೇಶದ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿ ಮನವಿ ಮಾಡಲಾಗುವುದು ಇಂದು ಅವರು ಹೇಳಿದರು.
 

46

ನಾವು ಎಲ್ಲಿಯೇ ಇದ್ದರೂ ಕನ್ನಡಿಗರಿಗೆ ಉಳಿಯಬೇಕು. ನಮ್ಮ ಭಾಷೆ, ಸಂಸ್ಕೃತಿ, ನಾಡು ನುಡಿಯನ್ನು ಬಿಟ್ಟು ಬದುಕಬಾರದು. ಈ ನಿಟ್ಟಿನಲ್ಲಿ ದೆಹಲಿ ಕನ್ನಡಿಗರ ಬದ್ಧತೆ, ಕನ್ನಡತನದ ಬಗ್ಗೆ ನನಗೆ ಸಂತಸವಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು. 

56

ನಾಡು ನುಡಿ, ನೆಲ ಜಲದ ವಿಷಯ ಬಂದಾಗ ರಾಜಿ ಪ್ರಶ್ನೆ ಇಲ್ಲ. ಎಲ್ಲರೂ ಒಟ್ಟಾಗಿ ರಾಜ್ಯದ ಹಿತಕ್ಕಾಗಿ ಕೆಲಸ ಮಾಡುತ್ತೇವೆ ಎಂದು ಕುಮಾರಸ್ವಾಮಿ ಅವರು ಹೇಳಿದರು. ಅಲ್ಲದೆ; ದೆಹಲಿ ಕರ್ನಾಟಕ ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಕೇಂದ್ರ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

66

ಈ ಸಂದರ್ಭದ ಹೆಚ್.ಡಿ.ಕುಮಾರಸ್ವಾಮಿ ಅವರೂ ಸೇರಿದಂತೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ ಹಾಗೂ ಸಂಸದರಾದ ಸಿ.ಎನ್.ಮಂಜುನಾಥ್, ಮಲ್ಲೇಶ್ ಬಾಬು, ಸುಧಾಕರ್, ಮಲ್ಲೇಶ್ ಬಾಬು, ವಿಶ್ವೇಶ್ವರ ಹೆಗಡೆ ಕಾಗೇರಿ, ಪಿ.ಸಿ.ಮೋಹನ್, ಸಾಗರ ಖಂಡ್ರೆ, ಬಸವರಾಜ್ ಬೊಮ್ಮಾಯಿ, ಗೋವಿಂದ ಕಾರಜೋಳ, ರಾಜ್ಯಸಭಾ ಸದಸ್ಯ ನಾರಾಯಣ ಸಾ ಭಾಂಢಗೆ ಅವರನ್ನು ಈ ಸಂದರ್ಭದಲ್ಲಿ ಕರ್ನಾಟಕ ಸಂಘದ ವತಿಯಿಂದ ಆತ್ಮೀಯವಾಗಿ ಅಭಿನಂದಿಸಲಾಯಿತು.

ಸಂಘದ ಅಧ್ಯಕ್ಷ ಸಿ.ಪಿ.ನಾಗರಾಜ್, ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಸೇರಿ ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
 

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories