ಕರ್ನಾಟಕ ಸಿಎಂ ಬಿ. ಎಸ್. ಯಡಿಯೂರಪ್ಪ ಅವರಿಎ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ. ವೈದ್ಯರ ಸಲಹೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಬಿಎಸ್‌ವೈ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ನಡೆಯುತ್ತಿದ್ದರೂ ಅಲ್ಲಿಂದಲೇ ತಮ್ಮ ಕೆಲಸ ಮುಂದುವರೆಸಿದ್ದಾರೆ. ಹೀಗಿರುವಾಗ ಅವರನ್ನು ಭೇಟಿಯಾದವರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದ್ದು, ಕಾವೇರಿ ನಿವಾಸಕ್ಕೂ ಯಾರನ್ನೂ ಭೇಟಿ ನೀಡಲು ಅಧಿಕಾರಿಗಳು ಅವಕಾಶ ನೀಡುತ್ತಿಲ್ಲ.