ವಿದೇಶದಲ್ಲಿ ತೊಗಲುಗೊಂಬೆಯಾಟ ಪ್ರದರ್ಶನ
ತೊಗಲುಗೊಂಬೆಯಾಟ ಗ್ರಾಮೀಣ ಪ್ರದೇಶದ ಕಲೆಯಾದರೂ ಸಹ ವಿದೇಶದಲ್ಲಿಯೂ ಸಹ ಈ ಕಲೆ ಪ್ರದರ್ಶನಗೊಂಡಿದೆ. ಅಮೇರಿಕ, ಪ್ಯಾರಿಸ್, ಇಟಲಿ,ಇರಾನ್ ಮತ್ತು ಇರಾಕ್,ಸ್ವಿಟ್ಜರ್ಲೆಂಡ್, ಹಾಲೆಂಡ್ ಮುಂತಾದ ದೇಶಗಳಲ್ಲಿ ರಾಮಾಯಣ ಮಹಾಭಾರತದಂತಹ ಮಹಾಕಾವ್ಯಗಳನ್ನ ,ಹಾಗೂ ಪ್ರಸ್ತುತ ವಿದ್ಯಮಾನಗಳನ್ನ ಭೀಮವ್ವ ಶಿಳ್ಳೇಕ್ಯಾತರ್ ತೊಗಲುಗೊಂಬೆಯಾಟದ ಮೂಲಕ ಪ್ರದರ್ಶನ ನೀಡಿ ನಾಡಿನ ಕಲೆ,ಸಂಸ್ಕೃತಿ,ಪರಂಪರೆಯನ್ನ ಎತ್ತಿಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಭೀಮವ್ವ ಶಿಳ್ಳೇಕ್ಯಾತರ್ ಅವರಿಗೆ ಪ್ರಶಸ್ತಿಗಳ ಸುರಿಮಳೆ
ಭೀಮವ್ವ ಶಿಳ್ಳೇಕ್ಯಾತರ್ ಅವರ ಸಾಧನೆಯನ್ನ ಕಂಡು ಸರ್ಕಾರವು ಅನೇಕ ಪ್ರಶಸ್ತಿ ನೀಡಿ ಗೌರವಿಸಿದೆ .1993ರಲ್ಲಿ ತೆಹರಾನ್ ದೇಶದ ಬೊಂಬೆ ಉತ್ಸವ ಪ್ರಶಸ್ತಿ,63ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಶಸ್ತಿ, ಪ್ರಾದೇಶಿಕ ರಂಗ ಕಲೆಗಳ ಅಧ್ಯಯನ ಪ್ರಶಸ್ತಿ, 2005-06 ನೇ ಸಾಲಿನಲ್ಲಿ ಜಾನಪದ ಮತ್ತು ಬಯಲಾಟ ಅಕಾಡೆಮಿ ಪ್ರಶಸ್ತಿ,2010 ರಲ್ಲಿ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, 2014ರಲ್ಲಿ ರಾಜ್ಯೋತ್ಸವ ಪ್ರಶಸ್ತಿ,2020-21ನೇ ಸಾಲಿನ ಜಾನಪದ ಶ್ರೀ ಪ್ರಶಸ್ತಿ,2022ರಲ್ಲಿ ಹಿರಿಯ ನಾಗರೀಕ ಪ್ರಶಸ್ತಿ ಹೀಗೆ ಸರ್ಕಾರ ಸಂಘ ಸಂಸ್ಥೆಗಳಿಂದ ಅನೇಕ ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ.