ಗ್ರಾಮ ಪಂಚಾಯತ್ ಎರಡನೇ ಫೈಟ್: ಮತದಾನದ ಫೋಟೋಸ್
First Published | Dec 27, 2020, 12:25 PM ISTಬೆಂಗಳೂರು(ಡಿ.27): ರಾಜ್ಯದಲ್ಲಿ ಇಂದು(ಭಾನುವಾರ) ಎರಡನೇ ಹಂತದ ಗ್ರಾಮ ಪಂಚಾಯತ್ ಚುನಾವಣೆಗೆ ಮತದಾನ ನಡೆಯುತ್ತಿದೆ. ರಾಜ್ಯದ 109 ತಾಲೂಕುಗಳ 2709 ಗ್ರಾಮ ಪಂಚಾಯಿತಿಗಳಲ್ಲಿನ 39,378 ಸ್ಥಾನಗಳಿಗೆ ಮತದಾನ ಆರಂಭವಾಗಿದೆ. 2709 ಗ್ರಾಮ ಪಂಚಾಯಿತಿಯ ಒಟ್ಟು 43,291 ಸ್ಥಾನಗಳಿದ್ದು, ಈ ಪೈಕಿ 39,378 ಸ್ಥಾನಗಳಿಗೆ ಮತದಾನ ನಡೆಯಲಿದೆ. 1,05,431 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಜನತೆ ಕೂಡ ಉತ್ಸಾಹದಿಂದಲೇ ಮತಗಟ್ಟೆಗೆ ಬಂದು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ.