ಪ್ರಧಾನಿ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ವಿಶ್ವವಿಖ್ಯಾತ ಮೈಸೂರು ಅರಮನೆ ಅಂಗಳ ಸರ್ವ ರೀತಿಯಲ್ಲೂ ಸಜ್ಜಾಗಿತ್ತು.
ಯೋಗಪ್ರದರ್ಶನಕ್ಕೆ ಪ್ರಧಾನಿ ಮೋದಿ ಅವರಿಗೆ ಸುಮಾರು 15,000 ಮಂದಿ ಸಾಥ್ ನೀಡಿದ್ದರು. ಪ್ರಧಾನಿ ಮೋದಿ ಅವರ ಜತಗೆ ಎಲ್ಲರೂ ಯೋಗಾಸನಗಳನ್ನ ಮಾಡಿದ್ದಾರೆ.
ಕೇಂದ್ರ ಆಯುಷ್ ಇಲಾಖೆ ಸಹಯೋಗದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ತಾವರ್‌ಚಂದ್ ಗೆಹಲೋತ್, ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ, ಕೇಂದ್ರ ಆಯುಷ್ ಸಚಿವ ಸರ್ಬಾನಂದ್ ಸೊನೋವಾಲ್, ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪಾಲ್ಗೊಳ್ಳಲಿದ್ದಾರೆ. ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ ಸೇರಿ ಎಲ್ಲಾ ಸ್ಥಳೀಯ ಚುನಾಯಿತ ಪ್ರತಿನಿಧಿಗಳಿಗೂ ಭಾಗವಹಿಸಿದ್ದರು.
ಪ್ರಧಾನಿ ಮೋದಿ ಅವರು ಒಟ್ಟು 19 ಆಸನಗಳನ್ನ ಪ್ರದರ್ಶಿಸಿದ್ದಾರೆ. ಅದರಲ್ಲಿ ಪ್ರಮುಖವಾಗಿ ಮೊದಲನೇಯದಾಗಿ ಒಂದು ನಿಮಿಷ ಪ್ರಾರ್ಥನೆ, 4 ನಿಮಿಷ ಚಲನಕ್ರಿಯೆ, 25 ನಿಮಿಷ ತಾಡಾಸನ, ವೃಕ್ಷಾಸನ, ಪಾದಹಸ್ತಾಸನ-1, ಪಾದಹಸ್ತಾಸನ-2, ಅರ್ಧಚಕ್ರಾಸನ, ತ್ರಿಕೋನಾಸನ, ಸಮದಂಡಾಸನ, ಭದ್ರಾಸನ, ವಜ್ರಾಸನ, ಅರ್ಧಉಷ್ವ್ರಾಸನ, ಉಷ್ಟ್ರಾಸನ, ಶಶಂಕಾಸನ, ಉತ್ಥಾನ ಮಂಡೂಕಾಸನ, ವಕ್ರಾಸನ, ಮಕರಾಸನ, ಸರಳ ಭುಜಂಗಾಸನ, ಭುಜಂಗಾಸನ, ಶಲಭಾಸನ, ಸೇತುಬಂಧಾಸನ, ಉತ್ಥಾನ ಪಾದಾಸನ, ಅರ್ಧಹಲಾಸನ, ಶವಾಸನ ಪ್ರದರ್ಶನ ಮಾಡಿದ್ದಾರೆ.