ಸಿಎಂ ಜೊತೆ ಪ್ರಧಾನಿ ಸಭೆ: ಈ ವೇಳೆ ಮಹತ್ವದ ಆದೇಶ ಹೊರಡಿಸಿದ ಮೋದಿ

First Published | Sep 23, 2020, 8:37 PM IST

ತೀವ್ರ ಗೊಳ್ಳುತ್ತಿರುವ ಕೊರೋನಾ ವೈರಸ್ ಸಾಂಕ್ರಾಮಿಕ ರೋಗ ದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಬುಧವಾರ) ಕರ್ನಾಟಕ ಸೇರಿ 7 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಹತ್ವದ ಸಭೆ ನಡೆಸಿದದರು. ಈ ಸಭೆಯಲ್ಲಿ ಕರ್ನಾಟಕದ ಸಿಎಂ ಬಿಎಸ್‌ ಯಡಿಯೂರಪ್ಪ ಅವರು ಸಹ ಪಾಲ್ಗೊಂಡಿದ್ದರು, ಹಾಗಾದ್ರೆ  ಈ ವೇಳೆ ಮೋದಿ ಏನೆಲ್ಲಾ ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಸಚಿವ ಸುಧಾಕರ್ ಅವರು ವಿವರಿಸಿದರು.

ತೀವ್ರಗೊಳ್ಳುತ್ತಿರುವ ಕೊರೋನಾ ಸೋಂಕು ನಿಯಂತ್ರಣಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪಣತೊಟ್ಟಿದ್ದು, ಈ ಹಿನ್ನೆಲೆಯಲ್ಲಿ ಅವರು ಬುಧವಾರ ಏಳು ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿದರು.
undefined
ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಜತೆ ಸಂವಾದ ನಡೆಸಿದ ಯಡಿಯೂರಪ್ಪ, ರಾಜ್ಯದಲ್ಲಿನ ಪ್ರಸ್ತುತ ಸ್ಥಿತಿಗತಿ ಬಗ್ಗೆ ಮಾಹಿತಿ ನೀಡಿದರು.
undefined

Latest Videos


ಪಿಎಂ ನಡೆಸಿದ ಸಭೆಯಲ್ಲಿ ರಾಜ್ಯದ ಸಾವಿನ‌ ಪ್ರಮಾಣದ ಬಗ್ಗೆ ಚರ್ಚೆ ಆಯ್ತು ಎಂದು ಸಚಿವ ಡಾ. ಕೆ. ಸುಧಾಕರ್ ಮಾಹಿತಿ ನೀಡಿದ್ದು, 9 ಜಿಲ್ಲೆಗಳಲ್ಲಿ ಸಾವಿನ ಪ್ರಮಾಣದ ಬಗ ಕಾಳಜಿ ವಹಿಸಲು ವಿಶೇಷ ಟಾಸ್ಕ್ ಪೋರ್ಸ್ ಮಾಡಲು ಸೂಚನೆ ಕೊಡಲಾಗಿದೆ ಎಂದರು. .ಈ ವೇಳೆ ರಾಜ್ಯ ವಿಪತ್ತು ಪರಿಹಾರ ನಿಧಿಯ ಶೇ.50ರಷ್ಟು ಬಳಕೆಗೆ ಪ್ರಧಾನಿ ಮೋದಿ ಅನುಮೋದನೆ ನೀಡಿದ್ದಾರೆ ಎಂದರು
undefined
ಕರ್ನಾಟಕ, ಮಹಾರಾಷ್ಟ್ರ, ದೆಹಲಿ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
undefined
ಈ ಸಂದರ್ಭದಲ್ಲಿ ಸಿಎಂ ಜತೆ ಆರೋಗ್ಯ ಸಚಿವ ಬಿ.ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ: ಕೆ.ಸುಧಾಕರ್, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ: ಇ. ವಿ.ರಮಣರೆಡ್ಡಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
undefined
click me!