ನಿನ್ನೆ ಹಾಕಿಸಿಲ್ವಾ? ಇಂದೂ ಪೋಲಿಯೋ ಲಸಿಕೆ ಲಭ್ಯ

First Published Feb 1, 2021, 9:34 AM IST

ಬೆಂಗಳೂರು(ಫೆ.01): ಕೊರೋನಾ ನಡುವೆಯೂ ಎಲ್ಲಾ ಮುಂಜಾಗ್ರತಾ ಕ್ರಮಗಳೊಂದಿಗೆ 64 ಲಕ್ಷ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಲು ಸಿದ್ಧತೆ ನಡೆಸಿದ್ದೇವೆ. ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಷಕರು ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಿ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಕರೆ ನೀಡಿದ್ದಾರೆ.

ಭಾನುವಾರ ಬೆಳಗ್ಗೆ ಗೃಹ ಕಚೇರಿ ಕೃಷ್ಣಾದಲ್ಲಿ ಪುಟ್ಟಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪೋಲಿಯೋ ಲಸಿಕೆ ಸಂಪೂರ್ಣ ಸುರಕ್ಷಿತವಾಗಿದೆ. ಮಕ್ಕಳ ಜೀವ ರಕ್ಷಣೆಗೆ ಎರಡು ಹನಿ ಲಸಿಕೆ ಹಾಕಿಸುವುದನ್ನು ಮರೆಯಬೇಡಿ ಎಂದರು.
undefined
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಹ ಲಸಿಕೆ ಹಾಕುವ ಮೂಲಕ ಕೇಂದ್ರದ ಮಟ್ಟದಲ್ಲಿ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ನಮ್ಮ ರಾಜ್ಯದಲ್ಲಿ ಜ.17ರಂದು ಪೋಲಿಯೋ ಲಸಿಕೆ ಅಭಿಯಾನ ನಡೆಯಬೇಕಿತ್ತು. ಆದರೆ ಕೊರೋನಾ ಲಸಿಕೆ ಹಾಕುವ ಕಾರ್ಯದಲ್ಲಿ ಸಿಬ್ಬಂದಿ ತಲ್ಲೀನರಾಗಿದ್ದರಿಂದ ಪೋಲಿಯೋ ಲಸಿಕೆ ಮುಂದೂಡಲಾಗಿತ್ತು. ಹೀಗಾಗಿ ಇಂದು ಲಸಿಕೆ ಹಾಕಲಾಗುತ್ತಿದೆ ಎಂದರು.
undefined
ಸುರಕ್ಷಿತವಾಗಿ ಲಸಿಕೆ ಹಾಕಲು ಅಗತ್ಯವಾದ ಎಲ್ಲಾ ಎಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಒಟ್ಟು 85,05,060 ಡೋಸ್‌ ಪೋಲಿಯೋ ಲಸಿಕೆ ಲಭ್ಯವಿದ್ದು, 1.10 ಲಕ್ಷ ಲಸಿಕೆ ಕಾರ್ಯಕರ್ತರು, 6,645 ಕಾರ್ಯನಿರ್ವಹಣಾ ತಂಡ, 904 ಸಂಚಾರಿ ತಂಡಗಳನ್ನು ರಚಿಸಲಾಗಿದೆ. ರಾಜ್ಯದಲ್ಲಿ 32,908 ಬೂತ್‌ಗಳನ್ನು ಸ್ಥಾಪಿಸಿದ್ದು, ಭಾನುವಾರ ಲಸಿಕೆ ಹಾಕಿಸಲಾಗದವರು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಂಪರ್ಕಿಸಿ ಸೋಮವಾರವೂ ಲಸಿಕೆ ಪಡೆಯಬಹುದು ಎಂದು ಹೇಳಿದರು.
undefined
ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌, ಪೋಷಕರು ತಮ್ಮ ಮಕ್ಕಳಿಗೆ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಕಡ್ಡಾಯವಾಗಿ ಈಗ ಲಸಿಕೆ ಹಾಕಿಸಬೇಕು. ಇದರಿಂದ ಯಾವುದೇ ಅಡ್ಡ ಪರಿಣಾಮ ಉಂಟಾಗುವುದಿಲ್ಲ. ಕಳೆದ 11 ವರ್ಷಗಳಿಂದ ಪೋಲಿಯೋ ಸೋಂಕು ಕಂಡುಬಂದಿಲ್ಲ. ಭಾರತದಲ್ಲಿ ಈ ರೋಗ ನಿರ್ಮೂಲನೆಯಾಗಿದ್ದರೂ ನೆರೆಯ ದೇಶದಲ್ಲಿ ಇರುವುದರಿಂದ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದರು.
undefined
click me!