ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ತಮ್ಮ ರಾಜೀನಾಮೆ ವಾಪಸ್ ಪಡೆದಿದ್ದಾರೆ. ಈ ಮೂಲಕ ಕಳೆದೆರಡು ದಿನದಿಂದ ಸೃಷ್ಟಿಯಾಗಿದ್ದ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಇದೇ ವೇಳೆ ಮತ್ತೊಂದು ಗೂಗ್ಲಿ ಹಾಕಿದ್ದಾರೆ.
ರಾಮಲಿಂಗಾ ರೆಡ್ಡಿ ರಾಜೀನಾಮೆ ಹೈಡ್ರಾಮ ಅಂತ್ಯಗೊಂಡಿದೆ. ಕಳೆದೆರಡು ಡಿಕೆ ಶಿವಕುಮಾರ್ ಸರ್ಕಾರಕ್ಕೆ, ಹೈಕಮಾಂಡ್‌ಗೆ ತೀವ್ರ ತಲೆನೋವಾಗಿದ್ದ ರಾಜೀನಾಮೆ ಪ್ರಹಸನ ಅಂತ್ಯಗೊಂಡಿದೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡುತ್ತೇನೆ ಎಂದು ಕೊನೆಗೆ ಜಲಸಂಪನ್ಮೂಲ ಖಾತೆ ನೀಡಿದ ಕಾರಣಕ್ಕೆ ಗರಂ ಆಗಿದ್ದ ರಾಮಲಿಂಗಾ ರೆಡ್ಡಿ ರಾಜೀನಾಮೆ ನೀಡಿದ್ದರು. ಇದೀಗ ತಮ್ಮ ರಾಜೀನಾಮೆ ವಾಪಸ್ ಪಡೆದಿದ್ದಾರೆ.
ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೊತೆ ಚರ್ಚಿಸಿದ್ದೇನೆ. ಅವರು ರಾಜೀನಾಮೆ ಸ್ವೀಕರಿಸಲ್ಲ ಎಂದಿದ್ದಾರೆ. ಹೀಗಾಗಿ ಸ್ವೀಕರಿಸಿಲ್ಲ ಎಂದರೆ ವಾಪಸ್ ಎಂದರ್ಥ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
36
ಮುಂದೆ ಅವಕಾಶ ಮಾಡಿಕೊಡುತ್ತಾರೆ
ನಾನಾಗಿ ಯಾವ ಖಾತೆಯನ್ನು ಕೇಳಿಲ್ಲ. ಸದ್ಯಕ್ಕೆ ಯಾವುದೇ ಗೊಂದಲ ಇಲ್ಲ. ನೋಡೋಣ ಯಾವ ಖಾತೆ ಕೊಡುತ್ತಾರೆ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಮುಂದೆ ಅವಕಾಶ ಮಾಡಿಕೊಡುತ್ತೇವೆ ಎಂದಿದ್ದಾರೆ. ಹೀಗಾಗಿ ಸದ್ಯಕ್ಕೆ ಯಾವುದೇ ಗೊಂದಲಕ್ಕೆ ಆಸ್ಪದ ನೀಡುತ್ತಿಲ್ಲ ಎಂದಿದ್ದಾರೆ. ಈ ಮೂಲಕ ಮುಂಬರುವ ದಿನಗಳಲ್ಲಿ ಸಂಪುಟ ವಿಸ್ತರಣೆ ಅಥವಾ ಖಾತೆ ಬದಲಾವಣೆ ಸಾಧ್ಯತೆಯನ್ನು ರಾಮಲಿಂಗಾ ರೆಡ್ಡಿ ಸೂಚಿಸಿದ್ದಾರೆ.
ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ನೀಡುವ ಮೊದಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಸುದ್ದಿಗೋಷ್ಠಿ ಮೂಲಕ ರಾಜೀನಾಮೆ ವಾಪಸ್ ಎಂದಿದ್ದರು. ಹಿರಿಯ ನಾಯಕರಾದ ರಾಮಲಿಂಗಾ ರೆಡ್ಡಿ ಜೊತೆ ಮಾತನಾಡಿದ್ದೇವೆ. ಅವರು ರಾಜೀನಾಮೆ ವಾಪಸ್ ಪಡೆದು ಸಚಿವರಾಗಿ ಮುಂದುವರಿಯುತ್ತಾರೆ ಎಂದಿದ್ದರು.
56
ರಾಮಲಿಂಗಾ ರೆಡ್ಡಿ ರಾಜಿನಾಮೆ ತಿರಸ್ಕೃತ
ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರವನ್ನು ತಿರಸ್ಕರಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಳಿಕ ಕರೆ ಮಾಡಿ ಮಾತನಾಡಿದ್ದಾರೆ. ನಿಮ್ಮ ರಾಜೀನಾಮೆ ಪತ್ರವನ್ನು ತಿರಸ್ಕರಿಸಿದ್ದೇನೆ. ನಿಮ್ಮ ಸೇವೆ ಪಕ್ಷಕ್ಕೆ ಅಗತ್ಯವಿದೆ. ನೀವು ಕ್ಯಾಬಿನೆಟ್‌ನಲ್ಲಿ ಮುಂದುವರಿಯಬೇಕು ಎಂದು ದೂರಾವಣಿ ಮೂಲಕ ರಾಮಲಿಂಗಾ ರೆಡ್ಡಿಗೆ ಹೇಳಿದ್ದರು.
66
ಡಿಕೆ ಶಿವಕುಮಾರ್ ಮೊದಲ ಟಾಸ್ಕ್ ಯಶಸ್ವಿ
ಸಚಿವ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಬೆನ್ನಲ್ಲೇ ಉದ್ಭವಗೊಂಡ ಅಸಮಾಧಾನವನ್ನು ಡಿಕೆ ಶಿವಕುಮಾರ್ ನಿರ್ವಹಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್ ಪಡೆದಿದ್ದಾರೆ. ಇದರಿಂದ ಇತರ ಅಸಮಾಧಾನಿತರು ಸೈಲೆಂಟ್ ಆಗುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ