ರಾಮನಗರ: ಅತ್ತೆ ಸೊಸೆ ಜಗಳ: 19 ವರ್ಷದ ಗರ್ಭಿಣಿ ಸೊಸೆ ನಯನಾ ಸಾವಿಗೆ ಶರಣು

Published : Mar 12, 2026, 12:17 PM ISTUpdated : Mar 12, 2026, 12:47 PM IST

Ramanagara pregnant woman died: ರಾಮನಗರ ತಾಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ಕೌಟುಂಬಿಕ ಕಲಹದಿಂದ ಮನನೊಂದು 19 ವರ್ಷದ ಗರ್ಭಿಣಿ ನಯನಾ ಡೀಸೆಲ್ ಸುರಿದು ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾಗಿದ್ದಾರೆ.

PREV
15
ರಾಮನಗರದಲ್ಲಿ 19ರ ಹರೆಯದ ಗರ್ಭಿಣಿ ಸಾವಿಗೆ ಶರಣು

ರಾಮನಗರ: ಕೌಟುಂಬಿಕ ಕಲಹದ ಹಿನ್ನೆಲೆ ಡೀಸೆಲ್ ಸುರಿದು ಬೆಂಕಿ ಹಚ್ಚಿಕೊಂಡು ಗರ್ಭಿಣಿ ಸಾವಿಗೆ ಶರಣಾದಂತಹ ಆಘಾತಕಾರಿ ಘಟನೆ ರಾಮನಗರ ತಾಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ: ಬೀದರ್: ಶಾಲಾ ಕಟ್ಟಡದಿಂದ ಜಿಗಿದು 10ನೇ ಕ್ಲಾಸ್ ಬಾಲಕಿ ಸಾವಿಗೆ ಶರಣು

25
ಒಂದೂವರೆ ವರ್ಷದ ಹಿಂದಷ್ಟೇ ಮದುವೆಯಾಗಿದ್ದ ನಯನಾ

19 ವರ್ಷದ ನಯನ ಸಾವಿಗೆ ಶರಣಾದ ಗರ್ಭಿಣಿ. ಒಂದೂವರೆ ವರ್ಷದ ಹಿಂದೆ ನಾಗರಾಜು ಎಂಬುವವರ ಜೊತೆ ಈಕೆಯ ಮದುವೆ ಮಾಡಿಸಲಾಗಿತ್ತು..

ಇದನ್ನೂ ಓದಿ:  ಮಡಿಕೇರಿಯ ಭಾಗಮಂಡಲದಲ್ಲಿ ಸಹಜೀವನ ನಡೆಸುತ್ತಿದ್ದ ಜೋಡಿಯ ಕೊಲೆ: ಮಹಿಳೆ ಸೋದರನಿಂದ ಕೃತ್ಯ

35
ಅತ್ತೆ ಸೊಸೆ ಮಧ್ಯೆ ಜಗಳ

ಮೃತ ನಯನಾ 5 ತಿಂಗಳ ಗರ್ಭಿಣಿಯಾಗಿದ್ದರು. ಇತ್ತೀಚೆಗೆ ಅತ್ತೆ, ಸೊಸೆ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಪದೇ ಪದೇ ಸಣ್ಣಪುಟ್ಟ ವಿಚಾರಗಳಿಗೆ ಅತ್ತೆ ಸೊಸೆ ಮಧ್ಯೆ ಗಲಾಟೆ ನಡೆಯುತ್ತಿತ್ತು.

ಇದನ್ನೂ ಓದಿ: Prison break:ಜೈಲಿನಿಂದ ತಪ್ಪಿಸಿಕೊಳ್ಳಲು ನಿರಂತರ 5 ವರ್ಷ ಸುರಂಗ ಕೊರೆದ ಕೈದಿ ತಲುಪಿದ್ದು ಎಲ್ಲಿಗೆ?

45
ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾದ ಸೊಸೆ

ಇದೇ ವಿಚಾರವಾಗಿ ಮನನೊಂದು ಗರ್ಭಿಣಿ ನಯನಾ ರಾತ್ರಿ ಡೀಸೆಲ್ ಸುರಿದು ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಇದನ್ನೂ ಓದಿ: ದಯವಿಟ್ಟು ನನ್ನ ಬೆಳೆ ಖರೀದಿಸಿ... ನನ್ನ ಮಗಳ ಮದುವೆ ನಾಳೆ: ಮಾರುಕಟ್ಟೆಯಲ್ಲಿ ಅಳಲು ಶುರು ಮಾಡಿದ ರೈತ

55
ಪತಿ ಹಾಗೂ ಮಾವನ ವಿಚಾರಣೆ

ನಯನ ಸಾವಿನ ಹಿನ್ನೆಲೆ ಆಕೆಯ ಪತಿ ನಾಗರಾಜು ಹಾಗೂ ಮಾವ ಜಯರಾಮ್ ಎಂಬುವವರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಸಂತಾನಹರಣ ಶಸ್ತ್ರಚಿಕಿತ್ಸೆಯ ನಂತರವೂ ಹುಟ್ಟಿದ ಕಂದ: ಇದು ಸರ್ಕಾರದ ಲೋಪ ಮಗು ಸಾಕಲು ಆರ್ಥಿಕ ನೆರವು ಬೇಕು ಎಂದ ದಂಪತಿ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories