ಮಲೆ ಮಹದೇಶ್ವರ ಬೆಟ್ಟದಲ್ಲಿ ದರ್ಶನಕ್ಕೆ ತೆರಳಿದ್ದ ಬಾಲಕನ ಮೇಲೆ ಚಿರತೆ ದಾಳಿ ನಡೆದ ಘಟನೆ ಭಕ್ತರನ್ನು ಬೆಚ್ಚಿ ಬೀಳಿಸಿದೆ. ಮೃತ ಬಾಲಕನ ಅಂತ್ಯಸಂಸ್ಕಾರ ಇಂದು ನಡದಿದೆ. ಇತ್ತ ಅರಣ್ಯ ಇಲಾಖೆ ಪರಿಹಾರ ಘೋಷಿಸಿದೆ.
ಮಲೆ ಮಹದೇಶ್ವರ ಬೆಟ್ಟದಲ್ಲಿ ತಾಯಿ ಜೊತೆ ದರ್ಶನಕ್ಕೆ ತೆರಳಿದ ಬೆಂಗಳೂರಿನ ಬಾಲಕ ಹರ್ಷಿತ್ ಗೌಡ ಮೇಲೆ ಚಿರತೆ ದಾಳಿ ನಡೆಸಿತ್ತು. ತಾಯಿ ಕಣ್ಣ ಮುಂದೆ ಚಿರತೆ ಬಾಲಕನ ಹೊತ್ತೊಯ್ದು ಕೊಂದು ಹಾಕಿತ್ತು. ಹರ್ಷಿತ್ ಗೌಡ ಮೃತದೇಹ ಚಾಮರಾಜನಗರದಿಂದ ನಿನ್ನ ರಾತ್ರಿ ಬೆಂಗಳೂರಿಗೆ ತರಲಾಗಿದೆ.ಇಂದು ಅಂತ್ಯಕ್ರಿಯೆ ನಡೆದಿದೆ.
25
20 ಲಕ್ಷ ರೂಪಾಯಿ ಪರಿಹಾರ ಘೋಷಣೆ
ಹರ್ಷಿತ್ ಗೌಡ ಸಾವಿಗೆ ಅರಣ್ಯ ಇಲಾಖೆ ನಿರ್ಲಕ್ಷ್ಯ ಕಾರಣ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇತ್ತ ಅರಣ್ಯ ಇಲಾಖೆ ಒಟ್ಟು 20 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ. ಈ ಪೈಕಿ 5 ಲಕ್ಷ ರೂಪಾಯಿ ಮೊತ್ತವನ್ನು ಈಗಾಗಲೇ ಕುಟುಂಬಕ್ಕೆ ನೀಡಲಾಗಿದೆ.
35
ಸುಮ್ಮನಹಳ್ಳಿ ಚಿತಾಗಾರದಲ್ಲಿ ತಾಯಿ ಆಕ್ರಂದನ
ಸುಮ್ಮನಹಳ್ಳಿ ಚಿತಾಗಾರದಲ್ಲಿ ಬಾಲಕ ಹರ್ಷಿತ್ ಗೌಡ ಅಂತ್ಯಸಂಸ್ಕಾರ ನಡೆದಿದೆ. ಮಗನ ಅಂತಿಮ ವಿಧಿವಿಧಾನ ನಡೆಯುತ್ತಿದ್ದಂತೆ ತಾಯಿ ಆಕ್ರಂದನ ಮುಗಿಲು ಮುಟ್ಟಿದೆ. ಪೋಷಕರ ಆಕ್ರಂದನ ನೋಡಿ ಕುಟುಂಬಸ್ಥರು ಕಣ್ಣೀರಾಗಿದ್ದಾರೆ.
ಮಲೆ ಮಹದೇಶ್ವರ ಬೆಟ್ಟದಲ್ಲಿ ಕಾಲ್ನಡಿಯಲ್ಲಿ ಸಾಗುತ್ತಿದ್ದ ವೇಳೆ ಚಿರತೆ ದಾಳಿ ಮಾಡಿದೆ. ತಾಯಿ ಕೈಹಿಡಿದು ಕೊಂಡು ಬಾಲಕ ಹರ್ಷಿತ್ ಗೌಡ ಸಾಗಿದ್ದ. ಈ ವೇಳೆ ಚಿರತೆ ದಾಳಿ ಮಾಡಿ ಬಾಲಕ ಹೊತ್ತೊಯ್ದಿದೆ. ತಾಯಿ ಚೀರಾಡಿದರೂ ಚಿರತೆ ಕೆಲವೇ ಕ್ಷಣದಲ್ಲಿ ದಾಳಿ ಮಾಡಿ ಬಾಲಕನ ಕೊಂದಿದೆ.
55
ಅರಣ್ಯ ಇಲಾಖೆ ವಿರುದ್ಧ ಆಕ್ರೋಶ
ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ, ಹುಲಿಗಳಿವೆ ಎಂಬ ಯಾವುದೇ ಬೋರ್ಡ್ ಇಲ್ಲ. ಇತ್ತ ಭಕ್ತರಿಗೆ ಅರಣ್ಯ ಇಲಾಖೆ ಯಾವುದೇ ಸೂಚನೆಯನ್ನು ನೀಡಿಲ್ಲ. ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ತಮ್ಮ ಮಗನ ಬಲಿ ಪಡೆದಿದೆ ಎಂದು ಮೃತ ಬಾಲಕನ ಪೋಷಕರು ಆರೋಪಿಸಿದ್ದಾರೆ.
ಅರಣ್ಯ ಇಲಾಖೆ ವಿರುದ್ಧ ಆಕ್ರೋಶ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ