ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ ಮತ್ತು ಅವರ ತಂಡ ದುಬೈನಿಂದ 113 ಕೆ.ಜಿ. ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿದ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾರೆ. ಕಸ್ಟಮ್ಸ್ ಇಲಾಖೆಯು ನಡೆಸಿದ ತನಿಖೆಯ ನಂತರ ನಟಿ ಮತ್ತು ಸಹಚರರಿಗೆ ಬರೋಬ್ಬರಿ 244 ಕೋಟಿ ರೂ.ಗೂ ಅಧಿಕ ದಂಡ ವಿಧಿಸಲಾಗಿದೆ.
ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ ಇದೀಗ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಭಾರಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಸ್ಟಮ್ಸ್ ಇಲಾಖೆಯು ನಡೆಸಿದ ಸುದೀರ್ಘ ತನಿಖೆಯ ನಂತರ, ನಟಿ ರನ್ಯಾ ರಾವ್ ಮತ್ತು ಅವರ ತಂಡದ ಮೇಲೆ ಬರೋಬ್ಬರಿ 244 ಕೋಟಿ ರೂಪಾಯಿಗೂ ಅಧಿಕ ದಂಡ ವಿಧಿಸಿ ಆದೇಶ ಹೊರಡಿಸಿದೆ.
25
ಏನಿದು ಪ್ರಕರಣ?
ಕಳೆದ ಒಂದು ವರ್ಷದ ಅವಧಿಯಲ್ಲಿ (ಮಾರ್ಚ್ 2024 ರಿಂದ ಫೆಬ್ರವರಿ 2025 ರವರೆಗೆ), ನಟಿ ರನ್ಯಾ ರಾವ್ ಮತ್ತು ಅವರ ಸಹಚರರು ದುಬೈನಿಂದ ಬರೋಬ್ಬರಿ 113 ಕೆ.ಜಿ. ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿರುವುದು ತನಿಖೆಯಲ್ಲಿ ಸಾಬೀತಾಗಿದೆ. ಡಿಆರ್‌ಐ (DRI) ಅಧಿಕಾರಿಗಳ ಕಾರ್ಯಾಚರಣೆಯ ಬಳಿಕ ಈ ಬೃಹತ್ ದಂಧೆಯ ಮಾಹಿತಿ ಹೊರಬಿದ್ದಿತ್ತು.
35
399 ಪುಟಗಳ ಆದೇಶ:
ಕಸ್ಟಮ್ಸ್ ಜಂಟಿ ನಿರ್ದೇಶಕ ಸಂದೀಪ್ ಅವರು ಈ ಕುರಿತು 399 ಪುಟಗಳ ವಿಸ್ತೃತ ಆದೇಶವನ್ನು ಹೊರಡಿಸಿದ್ದಾರೆ. ಅಕ್ರಮವಾಗಿ ಸಾಗಾಟ ಮಾಡಿದ ಚಿನ್ನದ ಮಾರುಕಟ್ಟೆ ಮೌಲ್ಯದ ಮೂರು ಪಟ್ಟು ದಂಡವನ್ನು ಕಸ್ಟಮ್ಸ್ ಇಲಾಖೆ ವಿಧಿಸಿದೆ.
ಈಗಾಗಲೇ ನಟಿ ರನ್ಯಾ ರಾವ್ ಅವರ ಮನೆ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು, 14.2 ಕೆ.ಜಿ. ಚಿನ್ನ, 2.67 ಕೋಟಿ ರೂ. ನಗದು ಮತ್ತು 2.06 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ಜಪ್ತಿ ಮಾಡಿದ್ದರು. ಇದೀಗ ಕಸ್ಟಮ್ಸ್ ಇಲಾಖೆಯ ಈ ಕ್ರಮ ಸ್ಯಾಂಡಲ್‌ವುಡ್‌ನಲ್ಲಿ ಸಂಚಲನ ಮೂಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ