ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ತ್ಯಾಗ, ಬಲಿದಾನ ಸ್ಮರಣೆ

Kannadaprabha News   | Asianet News
Published : Aug 16, 2020, 09:10 AM IST

ಬೆಂಗಳೂರು(ಆ.16): ನಗರದಲ್ಲಿ ಶನಿವಾರ 74ನೇ ಸ್ವಾತಂತ್ರ್ಯ ದಿನಾಚರಣೆ ಜೊತೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ 223ನೇ ಜಯಂತ್ಯುತ್ಸವವನ್ನು ಸರಳವಾಗಿ ಆಚರಿಸಲಾಯಿತು. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ರಾಯಣ್ಣನ ತ್ಯಾಗ, ಬಲಿದಾನ ಸ್ಮರಿಸಲಾಯಿತು.

PREV
14
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ತ್ಯಾಗ, ಬಲಿದಾನ ಸ್ಮರಣೆ

ರಾಜಕೀಯ ಪಕ್ಷಗಳು, ಸಂಗೊಳ್ಳಿ ರಾಯಣ್ಣನ ಹೆಸರಿನ ಸಂಘಟನೆಗಳು, ಮಹಾಸಭಾಗಳ ವತಿಯಿಂದ ನಗರದ ಹಲವಡೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.

24

ಕೊರೋನಾ ಭೀತಿ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌ ಸಮೀಪದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸರಳವಾಗಿ ಜಯಂತ್ಯುತ್ಸವ ಆಚರಿಸಲಾಯಿತು. ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಐದೈದು ಜನರಾಗಿ ಗಣ್ಯರು ತೆರಳಿ ಪ್ರತಿಮೆಗೆ ನಮಿಸಿದರು.

34

ಬಿಬಿಎಂಪಿ ಮೇಯರ್‌ ಗೌತಮ್‌ಕುಮಾರ್‌, ಉಪಮೇಯರ್‌ ರಾಮ್‌ ಮೋಹನ್‌ ರಾಜ್‌, ಆಯುಕ್ತ ಮಂಜುನಾಥ್‌ ಪ್ರಸಾದ್‌, ಮಾಜಿ ಸಚಿವ ಎಚ್‌.ಎಂ.ರೇವಣ್ಣ, ಶಾಸಕ ದಿನೇಶ್‌ ಗುಂಡೂರಾವ್‌, ವಾಟಾಳ್‌ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್‌, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಗೊಳ್ಳಿ ಕೃಷ್ಣಮೂರ್ತಿ, ಕಾರ್ಯದರ್ಶಿ ವೆಂಕಟೇಶ್‌ ಮತ್ತಿತರರು ರಾಯಣ್ಣನ ಪ್ರತಿಮೆಗೆ ಪುಷ್ಪ ನಮನದ ಮೂಲಕ ಗೌರವ ಅರ್ಪಿಸಿದರು.

44

ರಾಯಣ್ಣನ ಪ್ರತಿಮೆ ಮುಂದೆ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ 223ನೇ ಜಯಂತ್ಯುತ್ಸವದಲ್ಲಿ ಶಾಸಕ ದಿನೇಶ್‌ ಗುಂಡೂರಾವ್‌, ಮಾಜಿ ಸಚಿವ ಎಚ್‌.ಎಂ.ರೇವಣ್ಣ ಮತ್ತಿತರರು ಪಾಲ್ಗೊಂಡಿದ್ದರು.

click me!

Recommended Stories