ಟ್ರಯಲ್ ಕೋರ್ಟ್‌ನಲ್ಲಿ ವೃತ್ತಿ ಆರಂಭಿಸಿ: ಯುವ ವಕೀಲರಿಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್ ಸಲಹೆ

Published : Oct 26, 2025, 03:26 PM IST

ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಉಪಮುಖ್ಯಮಂತ್ರಿ ಗಳಾದ ಡಿ ಕೆ ಶಿವಕುಮಾರ್ ಅವರೊಂದಿಗೆ ಶನಿವಾರ ನ್ಯಾಯಮಿತ್ರ ಸಹಕಾರಿ ಸಂಘದ ಬೆಳ್ಳಿ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. "ಬೆಳ್ಳಿ‌ ಮಹೋತ್ಸವವು ಸ್ಥಿರತೆ, ಬಾಂಧವ್ಯ, ಬದ್ಧತೆ ಮತ್ತು ಸಾಧನೆಯ ಪ್ರತೀಕ" ಎಂದು ಹೇಳಿದರು

PREV
14
ನ್ಯಾಯಮಿತ್ರ ಸಹಕಾರಿ ಸಂಘದ ಬೆಳ್ಳಿ ಮಹೋತ್ಸವ ಉದ್ಘಾಟಿಸಿದ ಡಿಸಿಎಂ

ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಉಪಮುಖ್ಯಮಂತ್ರಿ ಗಳಾದ ಡಿ ಕೆ ಶಿವಕುಮಾರ್ ಅವರೊಂದಿಗೆ ಶನಿವಾರ ನ್ಯಾಯಮಿತ್ರ ಸಹಕಾರಿ ಸಂಘದ ಬೆಳ್ಳಿ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. "ಬೆಳ್ಳಿ‌ ಮಹೋತ್ಸವವು ಸ್ಥಿರತೆ, ಬಾಂಧವ್ಯ, ಬದ್ಧತೆ ಮತ್ತು ಸಾಧನೆಯ ಪ್ರತೀಕವಾಗಿದೆ" ಎಂದು ಹೇಳಿದರು.

24
ನ್ಯಾಯಮೂರ್ತಿ ಅರವಿಂದ್‌ ಕುಮಾರ್‌ ಸಲಹೆ

ವಕೀಲ ವೃತ್ತಿ ಆರಂಭಿಸುವ ಯುವ ವಕೀಲರು ಟ್ರಯಲ್‌ ಕೋರ್ಟ್‌ನಲ್ಲಿ ವೃತ್ತಿ ಜೀವನ ಆರಂಭಿಸುವುದು ಉತ್ತಮ, ಏಕೆಂದರೆ ಇಲ್ಲಿ ಸಿಗುವ ಉತ್ತಮವಾದ ವೃತ್ತಿ ಅನುಭವ ಎಲ್ಲಿಯೂ ಸಿಗಲಾರದು ಎಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಅರವಿಂದ್‌ ಕುಮಾರ್‌ ಸಲಹೆ ನೀಡಿದರು.

ನನ್ನ ವೃತ್ತಿ ಜೀವನ ಆರಂಭ ಆಗಿದ್ದು ವಕೀಲರ ಸಹಕಾರಿ ಸಂಘದಲ್ಲಿ. ನನ್ನ ಎಲ್ಲಾ ಸಾಧನೆಯೂ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌ನ ಸಹಕಾರಿ ಬ್ಯಾಂಕ್‌ಗೆ ಸಲ್ಲುತ್ತದೆ" ಎಂದರು. "ವಕೀಲ ವೃತ್ತಿ ಆರಂಭಿಸುವವರಿಗೆ ಟ್ರಯಲ್ ಕೋರ್ಟ್‌ನಲ್ಲಿ ನಿಮ್ಮ ವೃತ್ತಿ ಆರಂಭಿಸಿ ಎಂದು ನಾನು ಸಲಹೆ ನೀಡುತ್ತೇನೆ. ಏಕೆಂದರೆ ಇಲ್ಲಿ ಸಿಗುವ ಉತ್ತಮವಾದ ವೃತ್ತಿ ಅನುಭವ ಎಲ್ಲಿಯೂ ಸಿಗಲಾರದು. ವಕೀಲರು ಸಮಾಜ ಬದಲಾಯಿಸುವ ವೈದ್ಯರಿದ್ದಂತೆ. ಸಮಾಜ ಮತ್ತು ದೇಶವನ್ನೇ ಬದಲಾಯಿಸುವ ಶಕ್ತಿ‌ ಮತ್ತು ಸಾಮರ್ಥ್ಯ ವಕೀಲರಿಗೆ ಇದೆ" ಎಂದು ತಾವು ವಕೀರಾಗಲು ಕಾರಣವಾದ ಹಿನ್ನಲೆಯನ್ನು ಹಂಚಿಕೊಂಡರು.

34
ವಕೀಲರಿಗೆ ಸುಸಜ್ಜಿತ ಸಮುದಾಯ ಭವನ

ವಕೀಲರಿಗಾಗಿ ವಸತಿ ನಿವೇಶನಗಳನ್ನು ದೊಡ್ಡ ಪ್ರಮಾಣದಲ್ಲಿ  ಮಂಜೂರು ಮಾಡುವಂತೆ ಮತ್ತು ವಕೀಲರಿಗೆ ಒಂದು ಸಮುದಾಯ ಭವನ ನಿರ್ಮಾಣ ಮಾಡಲು ಅಗತ್ಯ ಇರುವ ಭೂಮಿ ನೀಡುವಂತೆ" ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎಂ.ಆರ್. ಅರವಿಂದ ಕುಮಾರ್ ಅವರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.

44
ಕಾರ್ಯಕ್ರಮದ ಉಪಸ್ಥಿತರು

ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿನ ನ್ಯಾಯ ಮಿತ್ರ ಸಹಕಾರಿ ಬ್ಯಾಂಕ್ ಬೆಳ್ಳಿಮಹೋತ್ಸವ-2025 ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಗಳಾದ ಅರವಿಂದ ಕುಮಾರ್, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ, ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಯತಿರಾಜ್, ಬೆಂಗಳೂರು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಗೌಡ, ಕರ್ನಾಟಕ ಬಾರ್ ಅಸೋಸಿಯೇಷನ್ ಅಧ್ಯಕ್ಷ ಮಿಟ್ಟಲ್ ಕೋಡ್ ಸಿದ್ದಲಿಂಗಪ್ಪ ಶೇಖರಪ್ಪ, ನಂಜಪ್ಪ ಕಾಳೇಗೌಡ, ಮಂಜುನಾಥ್ ಗೌಡ ಮತ್ತಿತರರು ಉಪಸ್ಥಿತರಿದ್ದರು.

Read more Photos on
click me!

Recommended Stories