ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುತ್ತೂರು ಶ್ರೀಗಳು ಸುತ್ತೂರು ಶ್ರೀ ಕ್ಷೇತ್ರದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 191 ರಲ್ಲಿ ಮತ ಚಲಾಯಿಸಿದ್ದಾರೆ.
ಅವಧೂತ ದತ್ತ ಪೀಠಾಧಿಪತಿ, ಶ್ರೀ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರು ಮೈಸೂರಿನ ಊಟಿ ರಸ್ತೆಯ ಜೆಎಸ್ಎಸ್ ಕಾಲೇಜಿನ ಬೂತ್ ನಂಬರ್ 237ರಲ್ಲಿ ತಮ್ಮ ಮತ ಚಲಾಯಿಸಿದ್ದಾರೆ.
ಇನ್ನು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಉಡುಪಿಯಲ್ಲಿ ಪೇಜಾವರ ವಿಶ್ವಪ್ರಸನ್ನತೀರ್ಥ ಶ್ರೀಗಳು ಕೂಡ ಮತದಾನ ಮಾಡಿದ್ದಾರೆ.
ಮಂಡ್ಯ ಕ್ಷೇತ್ರದ ಬಜೆಪಿ-ಜೆಡಿಎಸ್ ಮೈತ್ರಿ(ಎನ್‌ಡಿಎ) ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಪತ್ನಿ ಅನಿತಾ ಕುಮಾರಸ್ವಾಮಿ ಜತೆ ಮತ ಚಲಾವಣೆಗೂ ಮುನ್ನ ಬೆಂಗಳೂರಿನ ರಾಜರಾಜೇಶ್ವರಿ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಾರೆ.
ರಾಜರಾಜೇಶ್ವರಿ ದೇಗುಲದಲ್ಲಿ ಪತ್ನಿ ಜೊತೆ ಪೂಜೆ ಸಲ್ಲಿಸಿದ ಬಳಿಕ ಬೆಂಗಳೂರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ರಾಮನಗರ ಜಿಲ್ಲೆಯ ಬಿಡದಿ ಬಳಿಯ ಕೇತಗಾನಹಳ್ಳಿಗೆ ತೆರಳಿ ಮತ ಚಲಾಯಿಸಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಡಿ.ಕೆ. ಸುರೇಶ್, ಬಿಜೆಪಿಯಿಂದ ಡಾ. ಸಿ.ಎನ್. ಮಂಜುನಾಥ್ ಅವರು ಸ್ಪರ್ಧಿಸಿದ್ದಾರೆ. ಡಾ. ಸಿ.ಎನ್. ಮಂಜುನಾಥ್ ಅವರು ಕುಮಾರಸ್ವಾಮಿ ಅವರ ಮಾವನವರಾಗಿದ್ದಾರೆ.