ಮನೆಗೆ ಹೊಸ ಅತಿಥಿಯನ್ನು ಬರಮಾಡಿಕೊಂಡ ತೇಜಸ್ವಿ ಸೂರ್ಯ-ಶಿವಶ್ರೀ

Published : Jul 05, 2025, 12:49 PM IST

ಸಂಸದ ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದಪ್ರಸಾದ್ ದಂಪತಿ ಮುದ್ದಾದ ಕರುವನ್ನು ಮನೆಗೆ ತಂದಿದ್ದಾರೆ. ಆಂಧ್ರಪ್ರದೇಶದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಈ ಕರುವನ್ನು ಉಡುಗೊರೆಯಾಗಿ ನೀಡಲಾಗಿತ್ತು. ಕರುವಿಗೆ ಗೌರಿ, ಲಕ್ಷ್ಮಿ, ರಾಧಾ ಎಂಬ ಹೆಸರುಗಳಿಂದ ಕರೆಯುತ್ತಿದ್ದಾರೆ.

PREV
15

ಆಷಾಢ ಶುಕ್ರವಾರದಂದು ಸಂಸದ ತೇಜಸ್ವಿ ಸೂರ್ಯ ಮನೆಗೆ ಹೊಸ ಅತಿಥಿಯನ್ನು ಬರಮಾಡಿಕೊಂಡಿದ್ದಾರೆ. ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ತೇಜಸ್ವಿ ಸೂರ್ಯ ಹಂಚಿಕೊಂಡಿದ್ದಾರೆ.

25

ತೇಜಸ್ವಿ ಸೂರ್ಯ-ಶಿವಶ್ರೀ ಸ್ಕಂದಪ್ರಸಾದ್ ದಂಪತಿ ಮುದ್ದಾದ ಕರುವನ್ನು ಮನೆಗೆ ತಂದಿದ್ದಾರೆ. ಮನೆಗೆ ಬಂದಿರುವ ಅತಿಥಿಯನ್ನು ಶಿವಶ್ರೀ ಚೆಂದದ ಹಾಡು ಹೇಳಿ ಬರಮಾಡಿಕೊಂಡಿದ್ದಾರೆ.

35

ಶುಭ ಆಷಾಢ ಶುಕ್ರವಾರದಂದು, ನಮ್ಮ ಕುಟುಂಬಕ್ಕೆ ಹೊಸ ಸದಸ್ಯರನ್ನು ಸ್ವಾಗತಿಸಿದ್ದೇವೆ. ನಾವು ಕರುವನ್ನು ಗೌರಿ, ಲಕ್ಷ್ಮಿ, ರಾಧೆ ಸೇರಿದಂತೆ ಎಲ್ಲಾ ಹೆಸರುಗಳಿಂದ ಕರೆಯುತ್ತಿದ್ದೇವೆ. ಮನೆಗೆ ಆಗಮಿಸಿರುವ ಹೊಸ ಅತಿಥಿ ತುಂಬಾ ದೈವಿಕಳು. ಆಕೆ ಹಾಡುಗಳನ್ನು ಇಷ್ಟಪಡುತ್ತಾಳೆ ಎಂದು ತೇಜಸ್ವಿ ಸೂರ್ಯ ಇನ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

45

ಒಂದು ವಾರದ ಹಿಂದೆ ಆಂಧ್ರ ಪ್ರದೇಶದ ಕಾರ್ಯಕ್ರಮವೊಂದರಲ್ಲಿ ಮುದ್ದಾದ ಕರುವನ್ನು ತೇಜಸ್ವಿ ಸೂರ್ಯ ಅವರಿಗೆ ಉಡುಗೊರೆಯಾಗಿ ನೀಡಲಾಗಿತ್ತು. ಆಂಧ್ರ ಪ್ರದೇಶದ ಬಿಜೆಪಿ ನಾಯಕ ಎಂ. ವಂಶಿ ಕೃಷ್ಣ ಅವರನ್ನು ಈ ಉಡುಗೊರೆಯನ್ನು ನೀಡಿದ್ದರು. ಈ ಉಡುಗೊರೆಯನ್ನು ನೀಡಿರುವ ವಂಶಿ ಕೃಷ್ಣ ಅವರಿಗೆ ತೇಜಸ್ವಿ ಸೂರ್ಯ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

55

ತೇಜಸ್ವಿ ಸೂರ್ಯ ಹಂಚಿಕೊಂಡಿರುವ ವಿಡಿಯೋ ವೈರಲ್ ಆಗಿದ್ದು, ಕರು ತುಂಬಾನೇ ಮುದ್ದಾಗಿದೆ. ಗೌರಿ ಎಂದು ಹೆಸರಿಟ್ಟರೆ ಒಳ್ಳೆಯದು. ಕರು ನಿಜವಾಗಿಯೂ ದೈವಿಕ ಕಳೆಯನ್ನು ಹೊಂದಿದೆ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ. ಈವರೆಗೆ ಈ ವಿಡಿಯೋಗೆ 1.5 ಲಕ್ಷಕ್ಕೂ ಅಧಿಕ ವ್ಯೂವ್ ಬಂದಿವೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories