Published : Jun 11, 2026, 09:31 AM ISTUpdated : Jun 11, 2026, 09:45 AM IST
ತಿಪಟೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ K ಷಡಕ್ಷರಿ ಅವರ ಆರೋಗ್ಯದಲ್ಲಿ ದಿಡೀರ್ ಏರುಪೇರು ಕಾಣಿಸಿಕೊಂಡಿದೆ. ಇಬ್ಬರ ಉಪಸ್ಥಿತಿಯಲ್ಲಿ ಷಡಕ್ಷರಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ.
ತಿಪಟೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ K ಷಡಕ್ಷರಿ ಅವರ ಆರೋಗ್ಯದಲ್ಲಿ ದಿಡೀರ್ ಏರುಪೇರು ಕಾಣಿಸಿಕೊಂಡಿದ್ದು, ದೆಹಲಿಯ ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಷಡಕ್ಷರಿ ದೆಹಲಿಗೆ ತೆರಳಿದ್ದರು.
24
ಆರೋಗ್ಯದಲ್ಲಿ ದಿಢೀರ್ ಸಮಸ್ಯೆ
ಈ ವೇಳೆ ಶಾಸಕರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ರೂಮ್ ಗೆ ಹೋಗಿ ಮಾತನಾಡಿಸಲು ಪ್ರಯತ್ನಿಸಿದಾಗ ಮಾತನಾಡಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ ತಕ್ಷಣ ಶಾಸಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
34
ಶಾಸಕರ ಆರೋಗ್ಯ ಸ್ಥಿತಿ ಗಂಭೀರ
ಶಾಸಕರ ಆರೋಗ್ಯ ಸ್ಥಿತಿ ಗಂಭೀರವಾಗಿದೆ, ಆಸ್ಪತ್ರೆಯಲ್ಲಿ ಡಿಸಿಎಂ ಪರಮೇಶ್ವರ್, ಎಂಎಲ್‌ಸಿ ರಾಜೇಂದ್ರ ರಾಜಣ್ಣ ಇದ್ದಾರೆ. ಇಬ್ಬರ ಉಪಸ್ಥಿತಿಯಲ್ಲಿ ಷಡಕ್ಷರಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ.
ದೆಹಲಿಯ ಕರ್ನಾಟಕ ಭವನದಲ್ಲಿ ಉಳಿದುಕೊಂಡಿದ್ದ ಶಾಸಕ ಷಡಕ್ಷರಿ, ಇಂದು ಬೆಳಗ್ಗೆ ಡಿಸಿಎಂ ಪರಮೇಶ್ವರ್ ಕೋಣೆಗೆ ಬಂದು ಮಾತಾಡಲು ತೊಂದರೆಯಾಗುತ್ತಿದೆ ಎಂದು ಸಂಜ್ಞೆಯಲ್ಲಿ ಹೇಳಿದ್ದಾರೆ. ಕೂಡಲೇ ಪರಮೇಶ್ವರ್ ಅವರು ಕರ್ನಾಟಕ ಭವನದ ಸಿಬ್ಬಂದಿ ಸಹಾಯದೊಂದಿಗೆ ಶಾಸಕರನ್ನು ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶಾಸಕರು ಈ ಹಿಂದೆ ನರರೋಗಕ್ಕೆ ಸಂಬಂಧಿಸಿದ ಚಿಕಿತ್ಸೆ ಪಡೆದುಕೊಂಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ