ತುಮಕೂರು: ಸಹಕಾರಿ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಅಕ್ರಮ: ಕಾಂಗ್ರೆಸ್ ಅಭ್ಯರ್ಥಿಗೆ ಮತ ಸೇರಿಸಿದ ಆರೋಪ

Published : Mar 16, 2026, 09:39 AM IST

ತುಮಕೂರಿನ ಕುಣಿಗಲ್ ತಾಲೂಕಿನ ಸೊಸೈಟಿ ಚುನಾವಣೆಯಲ್ಲಿ, ಚುನಾವಣಾಧಿಕಾರಿಯೊಬ್ಬರು ಕಾಂಗ್ರೆಸ್ ಅಭ್ಯರ್ಥಿ ಪರ ಮತಪತ್ರಗಳನ್ನು ಅಕ್ರಮವಾಗಿ ಮತಪೆಟ್ಟಿಗೆಗೆ ತುಂಬುವಾಗ ಜೆಡಿಎಸ್ ಕಾರ್ಯಕರ್ತರಿಗೆ ಸಿಕ್ಕಿಬಿದ್ದಿದ್ದಾರೆ. ಈ ಘಟನೆಯಿಂದಾಗಿ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿ, ಚುನಾವಣೆಯನ್ನು ರದ್ದುಗೊಳಿಸಲಾಗಿದೆ. 

PREV
16

ತುಮಕೂರು: ಕಾಂಗ್ರೆಸ್ ಆರಂಭದಿಂದಲೂ ವಿವಿಪ್ಯಾಟ್ ವಿದ್ಯುನ್ಮಾನ ಮತಯಂತ್ರದಿಂದ ಚುನಾವಣಾ ಅಕ್ರಮ ನಡೆಯುತ್ತಿದೆ ಎಂಬ ಆರೋಪವನ್ನು ಮಾಡುತ್ತಲೇ ಬರುತ್ತಿದೆ. ಕಾಂಗ್ರೆಸ್‌ನ ಗ್ರಾಮ ಪಂಚಾಯತ್ ಸದಸ್ಯರಿಂದ ಹಿಡಿದು ರಾಹುಲ್ ಗಾಂಧಿವರೆಗೆ ಎಲ್ಲರೂ ವಿವಿಪ್ಯಾಟ್ ವಿದ್ಯುನ್ಮಾನ ಮತ ಪೆಟ್ಟಿಗೆಯ ಬಗ್ಗೆ ಆರೋಪಗಳನ್ನು ಮಾಡುತ್ತಲೇ ಬಂದಿದ್ದಾರೆ. ಕೇಂದ್ರ ಚುನಾವಣಾ ಆಯೋಗ ಇದಕ್ಕೆ ಸ್ಪಷ್ಟನೆ ನೀಡುತ್ತಾ ಆರೋಪಗಳನ್ನು ನಿರಾಕರಿಸುತ್ತಲೇ ಬಂದಿದೆ.

26

ಇದರ ನಡುವೆ ಇತ್ತೀಚೆಗೆ ಸಿದ್ದರಾಮಯ್ಯ ನೇತತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬದಲು ಮತಪತ್ರ(ಬ್ಯಾಲೆಟ್ ಪೇಪರ್) ಬಳಕೆಗೆ ಅವಕಾಶ ಕಲ್ಪಿಸುವ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಮಸೂದೆಯನ್ನು ಮಂಡಿಸಿತ್ತು. ಮತಯಂತ್ರದ ಪಾರದರ್ಶಕತೆ ಬಗ್ಗೆ ಆರಂಭದಿಂದಲೂ ಅನುಮಾನ ವ್ಯಕ್ತಪಡಿಸುತ್ತಾ ಬಂದಿರುವ ಕಾಂಗ್ರೆಸ್ ಈ ಕಾಯ್ದೆಯ ತಿದ್ದುಪಡಿ ಮಾಡಲು ಮುಂದಾಗಿದೆ.

36

ಹೀಗಿರುವಾಗ ತುಮಕೂರು ಜಿಲ್ಲೆಯ ವಿ.ಎಸ್.ಎಸ್.ಎನ್ ಸೊಸೈಟಿ ಚುನಾವಣೆಯಲ್ಲಿ ಅಕ್ರಮದ ಆರೋಪ ಕೇಳಿ ಬಂದಿದೆ. ಸಹಕಾರಿ ಸಂಘದ ಚುನಾವಣೆಯಲ್ಲಿ ಬ್ಯಾಲೇಟ್ ಪೇಪರ್ ಅಕ್ರಮ ನಡೆದಿದೆ ಎಂದು ಜೆಡಿಎಸ್ ಚುನಾವಣಾ ಏಜೆಂಟ್‌ಗಳು ಆರೋಪಿಸಿದ್ದಾರೆ. ತುಮಕೂರಿನ ಕುಣಿಗಲ್ ತಾಲೂಕಿನ ಸಂತೇಮಾವತ್ತೂರಿನ ನಿನ್ನೆ ನಡೆದ ವಿ.ಎಸ್.ಎಸ್.ಎನ್ ಸೊಸೈಟಿ ಚುನಾವಣೆಯಲ್ಲಿ ಸ್ವತಃ ಚುನಾವಣಾಧಿಕಾರಿಯೇ ಅಕ್ರಮವಾಗಿ ಬ್ಯಾಲೇಟ್ ಪೇಪರನ್ನು ಮತಪೆಟ್ಟಿಗೆಗೆ ತುಂಬಿಸಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ.

46

ಚುನಾವಣಾಧಿಕಾರಿಯ ಅಕ್ರಮದ ಬಗ್ಗೆ ಜೆಡಿಎಸ್ ಆರೋಪ ಮಾಡಿದ್ದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಕಾಂಗ್ರೆಸ್ ಅಭ್ಯರ್ಥಿಗೆ ಮತಹಾಕಿದ ಬ್ಯಾಲೇಟ್ ಪೇಪರನ್ನು ಚುನಾವಣಾಧಿಕಾರಿ ಸುನೀಲ್ ಅವರು ಅಕ್ರಮವಾಗಿ ಮತ ಪೆಟ್ಟಿಗೆಯೊಳಗೆ ಸೇರಿಸಿದ್ದಾರೆ ಎಂದು ಜೆಡಿಎಸ್ ಕಾರ್ಯಕರ್ತರು ಆರೋಪಿಸಿದ್ದಾರೆ.

ಮತಗಟ್ಟೆಯಿಂದ ಹೊರಗೆ ಕಾಂಗ್ರೆಸ್ ಪರ ಹಾಕಿದ್ದ ಮತ ಪತ್ರಗಳನ್ನ ಚುನಾವಣಾಧಿಕಾರಿಗೆನೀಡಿದ ಹಿನ್ನೆಲೆ ಜೆಡಿಎಸ್ ಕಾರ್ಯಕರ್ತರು ಸಾಕ್ಷಿ ಸಮೇತ ಇದನ್ನು ಕಂಡಿದ್ದಾರೆ.

ನಿನ್ನೆ ಸಂತೇಮಾವತ್ತೂರಿನ ಸಾಲಗಾರರ 11 ಕ್ಷೇತ್ರಗಳಿಗೆ, 1 ಸಾಮಾನ್ಯ ಕ್ಷೇತ್ರಕ್ಕೆ ಚುನಾವಣೆ ನಡೆದಿತ್ತು. ಆದರೆ ಮತದಾನದ ನಡುವೆ ಒಂದಷ್ಟು ಮತಪತ್ರಗಳನ್ನು ಚುನಾವಣಾಧಿಕಾರಿ ಸುನೀಲ್ ಮತಪೆಟ್ಟಿಗೆಗೆ ಹಾಕಿದ್ದು, ಇದನ್ನ ಜೆಡಿಎಸ್ ಚುನಾವಣಾ ಏಜೆಂಟ್‌ಗಳು ಗಮನಿಸಿದ್ದಾರೆ.

56

ತಡೆದು ನೋಡಿದಾಗ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳಿಗೆ ಮತಹಾಕಿದ್ದ ಮತಪತ್ರಗಳು ಸಿಕ್ಕಿದ್ದು, ಮತ ಪತ್ರಗಳ ಬಂಡಲ್ ಹಿಡಿದು, ಚುನಾವಣಾಧಿಕಾರಿಗಳು ಸುನೀಲ್‌ನನ್ನು ಕೂಡಿಹಾಕದ್ದಾರೆ. ನಂತರ ವಿಚಾರ ತಿಳಿದು ಎಎಸ್‌ಪಿ ಪುರುಷೋತ್ತಮ್ ಸ್ಥಳಕ್ಕೆ ಆಗಮಿಸಿದ್ದು, ಪೊಲೀಸ್ ಸರ್ಪಗಾವಲಿನಲ್ಲಿ ಸುನೀಲ್‌ನನ್ನು ಪೊಲೀಸರು ಕರೆದೋಯ್ದಿದ್ದಾರೆ.

ಚುನಾವಣೆಗೂ ಮುನ್ನವೇ ಮತಪತ್ರಗಳನ್ನ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ನೀಡಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಯ ಬಳಿಕ ಸಹಕಾರ ಇಲಾಖೆ ಅಧಿಕಾರಿಗಳು ತಕ್ಷಣವೇ ಚುನಾವಣೆ ರದ್ದು ಮಾಡಿದ್ದಾರೆ.

66

ಡಿ.ಕೆ.ಸುರೇಶ್ ಒತ್ತಡಕ್ಕೆ ಮಣಿದು ಅಕ್ರಮ ಎಸಗಲಾಗಿದೆ ಎಂದು ಜೆಡಿಎಸ್ ಕಾರ್ಯಕರ್ತರು ಆರೋಪಿಸಿದ್ದು, ಸದ್ಯ ಚುನಾವಣಾ ಪ್ರಕ್ರಿಯೆ ಸ್ಥಗಿತಗೊಂಡಿದೆ. ಈ ಹಿಂದೆ ರಾಮನಗರದಲ್ಲಿ ಅಕ್ರಮ ಎಸಗಿದ್ದರಿಂದ ಅಧಿಕಾರಿ ಸುನೀಲ್‌ಗೆ ತುಮಕೂರು ಜಿಲ್ಲೆ ಕುಣಿಗಲ್‌ಗೆ ವರ್ಗಾವಣೆಯಾಗಿತ್ತು. ಚುನಾವಣೆಯಲ್ಲಿ ಗೆಲುವಿಗೆ ಅಧಿಕಾರ ದುರ್ಬಳಕೆ ಆರೋಪ ಕೇಳಿ ಬಂದಿದ್ದು, ಡಿಕೆ ಬ್ರದರ್ಸ್, ಶಾಸಕ ಡಾ.ರಂಗನಾಥ್ ವಿರುದ್ದ ಮಾಜಿ ಸಚಿವ ಡಿ.ನಾಗರಾಜಯ್ಯ ಕುಟುಂಬದವರು ಆರೋಪ ಮಾಡಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories