ಒಡೆದ ತುಂಗಭದ್ರಾ ಎಡದಂಡೆ ಕಾಲುವೆ: ಅಪಾರ ಪ್ರಮಾಣ ನೀರು ಪೋಲು: ರೈತರ ಜಮೀನಿಗೆ ನುಗ್ಗಿದ ನೀರು

Published : Mar 18, 2026, 09:04 AM IST

ಕೊಪ್ಪಳ ತಾಲೂಕಿನ ಬಸಾಪುರ ಬಳಿ ತುಂಗಭದ್ರಾ ಎಡದಂಡೆ ಕಾಲುವೆ ಒಡೆದು ಅಪಾರ ಪ್ರಮಾಣದ ನೀರು ಪೋಲಾಗಿದೆ. ಕುಡಿಯುವ ನೀರಿಗಾಗಿ ಬಿಟ್ಟ ನೀರು ರೈತರ ಜಮೀನುಗಳಿಗೆ ನುಗ್ಗಿ ಬೆಳೆ ಹಾನಿ ಮಾಡಿದ್ದು, ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

PREV
14
ಒಡೆದ ತುಂಗಭದ್ರಾ ಎಡದಂಡೆ ಕಾಲುವೆ

ಕೊಪ್ಪಳ: ಬಿರು ಬೇಸಿಗೆಯಲ್ಲೇ ತುಂಗಭದ್ರಾ ಎಡದಂಡೆ ಕಾಲುವೆ ಒಡೆದು ಅಪಾರ ಪ್ರಮಾಣ ನೀರು ಪೋಲಾಗುತ್ತಿದೆ. ನೀರು ರೈತರ ಜಮೀನಿಗೂ ನುಗ್ಗಿದೆ. ಕೊಪ್ಪಳ ತಾಲೂಕಿನ ಬಸಾಪುರ ಗ್ರಾಮದ ಬಳಿ ತುಂಗಭದ್ರಾ ಎಡದಂಡೆ ಕಾಲುವೆ ಒಡೆದು ಈ ಅವಘಡ ಸಂಭವಿಸಿದೆ.

ಇದನ್ನೂ ಓದಿ: ಕೌಟುಂಬಿಕ ಕಲಹ ಎರಡು ಮಕ್ಕಳಾದ ಬಳಿಕ ಸನ್ಯಾಸಿಯಾದ ಪತಿಗೆ ಬೀದಿಯಲ್ಲೇ ಥಳಿಸಿದ ಮಹಿಳೆ: ವೀಡಿಯೋ

24
ಒಡೆದ ತುಂಗಭದ್ರಾ ಎಡದಂಡೆ ಕಾಲುವೆ

ಕುಡಿಯುವ ನೀರಿನ ಉದ್ದೇಶಕ್ಕೆ ಕಾಲುವೆಗೆ ಜಲಾಶಯದ ಅಧಿಕಾರಿಗಳು ನೀರು ಬಿಟ್ಟಿದ್ದರು. ಒಟ್ಟು ನಾಲ್ಕು ಜಿಲ್ಲೆಗಳಿಗೆ ಕುಡಿಯುವ ನೀರಿಗಾಗಿ ಕಾಲುವೆಯಿಂದ ಅಧಿಕಾರಿಗಳು ನೀರು ಬಿಟ್ಟಿದ್ದರು.

ಇದನ್ನೂ ಓದಿ: ಬೆಳಗಾವಿ: ಮಳೆ ನಿಲ್ಲಲು ಕಾಯುತ್ತಿದ್ದವರಿಗೆ ಕಾದಿದ್ದ ಜವರಾಯ: ಮನೆ ಗೋಡೆ ಕುಸಿದು ಪತ್ನಿ ಸಾವು, ಪತಿ ಜಸ್ಟ್ ಮಿಸ್

34
ಒಡೆದ ತುಂಗಭದ್ರಾ ಎಡದಂಡೆ ಕಾಲುವೆ

ಆದರೆ ಈಗ ಕೊಪ್ಪಳ ತಾಲೂಕಿನ ಬಸಾಪುರ ಗ್ರಾಮದ ಬಳಿ ಕಾಲುವೆ ಒಡೆದು ನೀರು ಪೋಲಾಗುತ್ತಿದೆ. ಕಾಲುವೆ ಪಕ್ಕದ ಜಮೀನು ಹಾಗೂ ರೆಸಾರ್ಟ್ ಗಳಿಗೆ ನೀರು ನುಗ್ಗಿದೆ.

ಇದನ್ನೂ ಓದಿ: ಚಿಕ್ಕಮಗಳೂರು : 50 ಅಡಿ ಆಳದ ಕಂದಕಕ್ಕೆ ಬಿದ್ದ ‌ಕಾರು: ಅನುಮಾನ ಹುಟ್ಟಿಸಿದ ಅಪಘಾತ ಪ್ರಕರಣ

44
ಒಡೆದ ತುಂಗಭದ್ರಾ ಎಡದಂಡೆ ಕಾಲುವೆ

ಅಧಿಕಾರಿಗಳ ನಿರ್ಲಕ್ಷದಿಂದ ಕಾಲುವೆ ಒಡೆದಿದೆ ಎಂದು ಸ್ಥಳೀಯ ರೈತರು ಆರೋಪಿಸಿದ್ದಾರೆ. ಘಟನೆಯಿಂದಾಗಿ ಕಾಲುವೆ ಪಕ್ಕದ ಜಮೀನಿನಲ್ಲಿ ಬೆಳೆದ ಬೆಳೆಗಳಿಗೆ ಹಾನಿಯಾಗಿದೆ.

ಇದನ್ನೂ ಓದಿ: ರೈತರ ಕೈಗೆ ಸಿಕ್ಕ ಪಂಪ್‌ಸೆಟ್ ಕೇಬಲ್ ಕಳ್ಳರು: ಕದ್ದ ಕೇಬಲ್‌ನಿಂದ ಮರಕ್ಕೆ ಕಟ್ಟಿ ಥಳಿಸಿದ ರೈತರು

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories