ಉಡುಪಿ ಜಿಲ್ಲಾ ಬೌದ್ಧ ಮಹಾ ಸಭಾ ಇದರ ವತಿಯಿಂದ ಆಯೋಜಿಸಿದ್ದ ಬಾಬಾಸಾಹೇಬ್ ಅಂಬೇಡ್ಕರ್ ಅವರ 64 ನೇ ಧಮ್ಮ ಚಕ್ರ ಪ್ರವರ್ತನಾ ದಿನಾಚರಣೆಯಲ್ಲಿ 50 ಕ್ಕೂ ಅಧಿಕ ದಲಿತರು ಬೌದ್ಧ ಧರ್ಮಕ್ಕೆ ಮತಾಂತರಗೊಂಡರು.
ಮೈಸೂರು ಕೊಳ್ಳೆಗಾಲದ ಜೀವನ ಬುದ್ಧ ವಿಹಾರದಿಂದ ಆಗಮಿಸಿದ್ದ ಸುಗತಪಾಲ ಭಂತೇಜಿ ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಅವರಿಗೆ ಪ್ರಮಾಣವಚನ ಬೋಧಿಸಿದರು
ಮತಾಂತರಗೊಂಡ ಬೌದ್ಧರು ತಮ್ಮ ಬಲಕೈಯನ್ನು ಮುಂದಕ್ಕೆ ಚಾಚಿ ಪ್ರಮಾಣವಚನ ಸ್ವೀಕರಿಸಿದರು.
ಇದೇ ವೇಳೆ ಭಾಸ್ಕರ್ ವಿಟ್ಲ ಅವರು ಬುದ್ಧ ಮತ್ತು ಬೌದ್ಧ ಧರ್ಮದ ವಿಚಾರವಾಗಿ ವಿಶೇಷ ಉಪನ್ಯಾಸ ನೀಡಿದರು.
ಅದೇ ರೀತಿ ಉಡುಪಿ ಜಿಲ್ಲೆಯಲ್ಲಿ ಅತ್ಯಾಧಿಕ ಅಂಕಗಳನ್ನು ಪದವಿಪೂರ್ವ ಮತ್ತು ಹತ್ತನೇ ತರಗತಿಯಲ್ಲಿ ಗಳಿಸಿದ ಸುಮಾರು 30ಕ್ಕೂ ಹೆಚ್ಚು ವಿಧ್ಯಾರ್ಥಿಗಳಿಗೆ ಸಹಾಯಧನವನ್ನು ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲೆಯ ದಲಿತನಾಯಕರಾದ ಸುಂದರ ಮಾಸ್ತರ್, ಶ್ಯಾಮರಾಜ್ ಬಿರ್ತಿ, ನಾರಾಯಣ ಮಣೂರು, ಶೇಖರ್ ಹೆಜಮಾಡಿ, ಶೇಖರ ಹಾವಂಜೆ, ಶಂಭು ಮಾಸ್ಟರ್, ಮಂಜುನಾಥ್ ಗಿಳಿಯಾರು, ಅಣ್ಣಪ್ಪ ನಕ್ರೆ, ಶ್ಯಾಮಸುಂದರ್ ತೆಕ್ಕಟ್ಟೆ, ಮಂಜುನಾಥ್ ವಿ., ಭಾಸ್ಕರ್ ಮಾಸ್ತರ್ ಕುಂಜಿಬೆಟ್ಟು, ಪರಮೇಶ್ವರ್ ಉಪ್ಪೂರು ಉಪಸ್ಥಿತರಿದ್ದರು.