ದೇವೇಗೌಡರ ಆರೋಗ್ಯ ವಿಚಾರಿಸಿದ ಪೇಜಾವರ ಶ್ರೀ ಮತ್ತು ಸಚಿವ ಸುಧಾಕರ್
First Published | Sep 26, 2022, 10:20 PM ISTಬೆಂಗಳೂರು (ಸೆ.26): ಅನಾರೋಗ್ಯದ ಕಾರಣ ವೈದ್ಯರ ಸಲಹೆಯಂತೆ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರ ಮನೆಗೆ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಗಳು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಇನ್ನು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಕೂಡ ಇಂದು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ನನ್ನ ಆರೋಗ್ಯ ಉತ್ತಮವಾಗಿದೆ. ಶೀಘ್ರದಲ್ಲೇ ನಾನು ಖುದ್ದಾಗಿ ಪಕ್ಷದ ಕಚೇರಿಗೆ ಭೇಟಿ ನೀಡುವುದರ ಜತೆಗೆ ಪಕ್ಷದ ಎಲ್ಲ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತೇನೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಕಳೆದ ವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದರು. ವೈದ್ಯರ ಸಲಹೆಯಂತೆ ಸದ್ಯಕ್ಕೆ ಕೆಲವು ದಿನಗಳ ಕಾಲ ಮನೆಯಿಂದಲೇ ನನ್ನ ಎಲ್ಲ ರಾಜಕೀಯ, ಸಂಸದೀಯ ಹಾಗೂ ಪಕ್ಷದ ಜವಾಬ್ದಾರಿಗಳನ್ನು ನಿರ್ವಹಿಸುತ್ತೇನೆ. ಹೀಗಾಗಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಕೆಲವು ದಿನಗಳ ಮಟ್ಟಿಗೆ ನನ್ನ ಭೇಟಿಗೆ ಬರುವುದು ಬೇಡ ಎಂದಿದ್ದಾರೆ.