ಉದ್ಯಮಿ ಸಿ.ಜೆ.ರಾಯ್ ಆತ್ಮ*ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಶೀಘ್ರದಲ್ಲೇ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಲಿದೆ. ಆರ್ಥಿಕ, ಕೌಟುಂಬಿಕ ಸೇರಿದಂತೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿದರೂ, ಆತ್ಮ*ಹತ್ಯೆಗೆ ನಿಖರ ಕಾರಣ ಇನ್ನೂ ನಿಗೂಢವಾಗಿಯೇ ಉಳಿದಿದೆ.
ಉದ್ಯಮಿ ಸಿ.ಜೆ.ರಾಯ್ ಆತ್ಮ*ಹತ್ಯೆ ಪ್ರಕರಣ ಸಂಬಂಧ ರಾಜ್ಯ ಸರ್ಕಾರಕ್ಕೆ ಕೆಲವೇ ದಿನಗಳಲ್ಲಿ ಅಂತಿಮ ವರದಿ ಸಲ್ಲಿಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ಸಿದ್ಧತೆ ನಡೆಸಿದೆ ಎಂದು ತಿಳಿದು ಬಂದಿದೆ.
24
ಇಂಥದ್ದೇ ಕಾರಣ?
ಆತ್ಮ*ಹತ್ಯೆ ಸಂಬಂಧ ರಿಯಲ್ ಎಸ್ಟೇಟ್, ಇತರೆ ಆರ್ಥಿಕ ವ್ಯವಹಾರ, ಕೌಟುಂಬಿಕ ಹಾಗೂ ಆರೋಗ್ಯ ಸೇರಿ ಎಲ್ಲ ಆಯಾಮದಲ್ಲೂ ತನಿಖೆ ನಡೆಸಲಾಗುತ್ತಿದೆ. ಹಲವು ದಾಖಲೆಗಳನ್ನು ಸಹ ಸಂಗ್ರಹಿಸಿ ಅವಲೋಕಿಸಲಾಗಿದೆ. ಆದರೆ ಈವರೆಗೆ ಆತ್ಮ*ಹತ್ಯೆಗೆ ಇಂಥದ್ದೇ ಕಾರಣ ಎಂದು ಹೇಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ತನಿಖೆಯಲ್ಲಿ ಪತ್ತೆಯಾದ ಅಂಶಗಳನ್ನು ಆಧರಿಸಿ ಮತ್ತಷ್ಟು ತನಿಖೆ ಮುಂದುವರೆಸಿದ್ದೇವೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
34
ಎಲ್ಲರಿಂದಲೂ ಹೇಳಿಕೆ ದಾಖಲು
ಆದಷ್ಟು ಬೇಗ ಪ್ರಕರಣ ಇತ್ಯರ್ಥಪಡಿಸಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇವೆ. ಮೃತ ಉದ್ಯಮಿ ಕುಟುಂಬದವರು, ಕಂಪನಿ ಉದ್ಯೋಗಿಗಳು ಹಾಗೂ ಹೂಡಿಕೆದಾರರನ್ನೂ ವಿಚಾರಣೆ ನಡೆಸಿ ಹೇಳಿಕೆ ಪಡೆಯಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಇತ್ತೀಚಿಗೆ ಆದಾಯ ತೆರಿಗೆ ಇಲಾಖೆಯ ದಾಳಿ ವೇಳೆ ಗುಂಡಿಟ್ಟುಕೊಂಡು ಕಾನ್ಫಿಡೆಂಟ್ ಗ್ರೂಪ್‌ನ ಮಾಲಿಕ ಸಿ.ಜೆ.ರಾಯ್ ಆತ್ಮ*ಹತ್ಯೆ ಮಾಡಿಕೊಂಡಿದ್ದರು. ಈ ಆತ್ಮ*ಹತ್ಯೆಗೆ ಕಾರಣಗಳು ಬೆಳಕಿಗೆ ಬಾರದೆ ನಿಗೂಢವಾಗಿದೆ. ನಿರಂತರ ಐಟಿ ದಾಳಿ ಹೊರತು ರಾಯ್ ಅವರಿಗೆ ಯಾವುದೇ ಒತ್ತಡಗಳು ಇರಲಿಲ್ಲ ಎಂದು ಸೋದರ ಹೇಳಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ