ಯೋಗ ವಿಶ್ವದ ಜೀವನ ವಿಧಾನ: ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌

Published : Jun 21, 2022, 11:17 AM IST

ಬಾಗಲಕೋಟೆ(ಜೂ.21):  ಜಿಲ್ಲೆಯ ಬಾದಾಮಿ ತಾಲೂಕಿನ ಪಟ್ಟದಕಲ್‌ನಲ್ಲಿ ಇಂದು(ಮಂಗಳವಾರ) 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಂಭ್ರಮದಿಂದ ನಡೆದಿದೆ. ಯೋಗ ಕಾರ್ಯಕ್ರಮದಲ್ಲಿ ಕೇಂದ್ರ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ, ಸಂವಹನ ಖಾತೆ ರಾಜ್ಯ ಸಚಿವ ರಾಜೀವ್‌ ಚಂದ್ರಶೇಖರ್‌ ಭಾಗವಹಿಸಿದ್ದರು. 

PREV
14
ಯೋಗ ವಿಶ್ವದ ಜೀವನ ವಿಧಾನ: ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌

ಈ ವೇಳೆ ಮಾತನಾಡಿದ ಸಚಿವ ರಾಜೀವ್‌ ಚಂದ್ರಶೇಖರ್‌, ಈ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಆಚರಣೆ ಜೊತೆಗೂಡಿದ್ದು, ಆಯ್ದ 75 ಜಿಲ್ಲೆಗಳಲ್ಲಿ ಯೋಗ ದಿನಾಚರಣೆ ನಡೆಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ವಿಶ್ವವ್ಯಾಪಿ ಸಂಕಲ್ಪವಾದ 'ಮಾನವೀಯತೆಗಾಗಿ ಯೋಗ- ಸರ್ವರ ಆರೋಗ್ಯ ಸ್ವಾಸ್ಥ್ಯಕ್ಕಾಗಿ ನವಭಾರತದ ಬದ್ದತೆ' ಗೆ ಅನುಗುಣವಾಗಿದೆ ಅಂತ ತಿಳಿಸಿದ್ದಾರೆ. 

24

ಕೇಂದ್ರ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ, ಸಂವಹನ ಖಾತೆ ರಾಜ್ಯ ಸಚಿವ ರಾಜೀವ್‌ ಚಂದ್ರಶೇಖರ್‌ ಅವರು ದೀಪ ಬೆಳಗಿಸುವ ಮೂಲಕ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಿದ್ದಾರೆ.

34

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಪಟ್ಟದಕಲ್‌ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಂಭ್ರಮದಿಂದ ನಡೆದಿದೆ. ಕಾರ್ಯಕ್ರಮದಲ್ಲಿ ನೂರಾರು ಜನರು ಸಾಮೂಹಿಕವಾಗಿ ಯೋಗಾಸನ ಮಾಡುವ ಮೂಲಕ ಆರೋಗ್ಯದ ಮಹತ್ವವನ್ನ ಸಾರಿದ್ದಾರೆ.

44

ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಕೇಂದ್ರ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ, ಸಂವಹನ ಖಾತೆ ರಾಜ್ಯ ಸಚಿವ ರಾಜೀವ್‌ ಚಂದ್ರಶೇಖರ್‌, ಬಾಗಲಕೋಟೆ ಸಂಸದ ಗದ್ದಿಗೌಡರ್‌, ಜಿಲ್ಲಾಧಿಕಾರಿ, ಎಸ್‌ಪಿ ಸೇರಿದಂತೆ ವಿವಿಧ ಅಧಿಕಾರಿಗಳು ಭಾಗವಹಿಸಿದ್ದರು. 

Read more Photos on
click me!

Recommended Stories