ಬೆಂಗಳೂರು-ಮುಂಬೈ‌ ಸೂಪರ್ ಫಾಸ್ಟ್ ರೈಲು ಸಂಚಾರಕ್ಕೆ ಮುಹೂರ್ತ ಫಿಕ್ಸ್! ರೂಟ್ ಹೀಗಿದೆ

Published : May 07, 2026, 10:11 AM IST

ಬೆಂಗಳೂರಿನಿಂದ ಮುಂಬೈಗೆ ಹೊಸ ಸೂಪರ್‌ಫಾಸ್ಟ್ ರೈಲು ಆರಂಭಿಸುವುದಾಗಿ ಭರವಸೆ ನೀಡಿದ್ದಾರೆ. ಈ ರೈಲು ತುಮಕೂರು, ದಾವಣಗೆರೆ, ಹುಬ್ಬಳ್ಳಿ ಮೂಲಕ ಸಂಚರಿಸಲಿದ್ದು, ಭವಿಷ್ಯದಲ್ಲಿ ಇದನ್ನು ವಂದೇ ಭಾರತ್ ಸ್ಲೀಪರ್ ರೈಲಾಗಿ ಮೇಲ್ದರ್ಜೆಗೇರಿಸುವ ಯೋಜನೆಯೂ ಇದೆ.

PREV
13
ಬೆಂಗಳೂರು-ಮುಂಬೈ ಸೂಪರ್ ಫಾಸ್ಟ್ ರೈಲು

ಬೆಂಗಳೂರಿನಿಂದ ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಾರ್ಗದ ಮೂಲಕ ಮುಂಬೈಗೆ ತೆರಳಲು ಬೆಂಗಳೂರು-ಮುಂಬೈ ಸೂಪರ್ ಫಾಸ್ಟ್ ರೈಲು ಜೂನ್ ಅಂತ್ಯದೊಳಗೆ ಆರಂಭಿಸುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಬುಧವಾರ ಭರವಸೆ ನೀಡಿರುವುದಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

23
ವಂದೇ ಭಾರತ್ ಸ್ಲೀಪರ್

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಮುಂದಿನ ದಿನಗಳಲ್ಲಿ ಬೆಂಗಳೂರು-ಮುಂಬೈ ನಡುವಿನ ಈ ಸೂಪರ್ ಫಾಸ್ಟ್ ರೈಲನ್ನು ವಂದೇ ಭಾರತ್ ಸ್ಲೀಪರ್ ರೈಲಾಗಿ ಬದಲಾಯಿಸುವ ನನ್ನ ಮನವಿಯನ್ನೂ ಸಹ ಪುರಸ್ಕರಿಸಿರುವುದಾಗಿ ತಿಳಿಸಿದ್ದಾರೆ.

33
ಶ್ರೀಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ರೈಲ್ವೆ ನಿಲ್ದಾಣ

ಈ ವೇಳೆ ಶ್ರೀಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಹೆಚ್ಚಿನ ಅತ್ಯಾಧುನಿಕ ಸೌಕರ್ಯ ಕಲ್ಪಿಸುವ ಕುರಿತು ಹಾಗೂ ಸಂಸದ ಜಗದೀಶ್ ಶೆಟ್ಟರ್ ಅವರ ಪ್ರಸ್ತಾವನೆಯಾದ ಲೋಕಾಪುರ-ಸವದತ್ತಿ-ಧಾರವಾಡ ರೈಲ್ವೆ ಲೈನ್ ಪುನರ್ ಸರ್ವೇ ಬಗ್ಗೆ ಸುದೀರ್ಘ ಚರ್ಚೆಯಾಗಿದ್ದು, ಈ ಅಂಶಗಳ ಕುರಿತು ಕೇಂದ್ರ ರೈಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ ತಿಳಿಸಿದ್ದಾರೆ.

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories