ಚೀನಾದ ಫೋಟೋಗಳನ್ನ ಶೇರ್ ಮಾಡಿದ Dr Bro: ನಕಲಿಗಳ ಮಧ್ಯೆ ನೀವು ಕನ್ನಡದ ಅಸಲಿ ಚಿನ್ನ ಎಂದ ಫ್ಯಾನ್ಸ್!

First Published | Oct 15, 2023, 9:26 PM IST

ಗಗನ್‌ ಶ್ರೀನಿವಾಸ್ ಅಲಿಯಾಸ್ ಡಾ.ಬ್ರೋ. ವಯಸ್ಸು ಈಗಿನ್ನೂ 23. ಇಷ್ಟು ಚಿಕ್ಕ ವಯಸ್ಸಿನಲ್ಲಿಯೇ ಹತ್ತಾರು ದೇಶ ಸುತ್ತಿ, ಕರುನಾಡಿನ ಮಂದಿಗೆ ಕುಳಿತಲ್ಲೇ ಪ್ರಪಂಚ ಪರ್ಯಟನೆ ಮಾಡಿಸುತ್ತಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ದೇಶ ಸುತ್ತಿನೋಡು, ಕೋಶ ಓದಿ ನೋಡಿ ಅನ್ನೋ ಮಾತಿನಂತೆ ದೇಶ ಸುತ್ತುವುದರಲ್ಲಿಯೇ ನಿರತರಾಗಿದ್ದಾರೆ ಡಾ.ಬ್ರೋ. ಫೇಸ್‌ಬುಕ್‌ ಮತ್ತು ಯೂಟ್ಯೂಬ್‌ನಲ್ಲಿ ಸರಣಿ ವಿಡಿಯೋ ಹಂಚಿಕೊಳ್ಳುತ್ತ, ವಿದೇಶದ ಆಚರಣೆ, ಆಹಾರ ಪದ್ಧತಿ, ಅಲ್ಲಿನ ಸಣ್ಣ ಸಣ್ಣ ಕೌತುಕಗಳನ್ನೂ ಪರಿಚಯಿಸುವ ಕೆಲಸ ಮಾಡುತ್ತಿದ್ದಾರೆ. 

ಡಾ.ಬ್ರೋ ಈ ಹಿಂದೆ ಚೀನಾಕ್ಕೆ ಭೇಟಿ ನೀಡಿದ್ದರು. ಹಾಂಗ್‌ಕಾಂಗ್‌, ಅಟೊನಮಸ್‌ ನಗರಗಳಲ್ಲಿ ಸುತ್ತಾಡಿದ್ದರು. ಜೊತೆಗೆ ಚೀನಾ ಜನರ ಬುದ್ಧಿವಂತಿಕೆಗೆ ಸೆಲ್ಯೂಟ್‌ ಹೊಡೆದಿದ್ದಾರೆ. 

Tap to resize

ಚೀನಾದ ಜನರು ಐಫೆಲ್ ಟವರ್, ತಾಜ್‌ಮಹಲ್, ಮಮ್ಮಿ ಪಿರಮಿಡ್, ವೈಟ್‌ ಹೌಸ್‌ ಸೇರಿದಂತೆ ಹಲವಾರು ಸ್ಥಳಗಳನ್ನು ನಕಲಿ ಮಾಡುವ ಮೂಲಕ ಅದನ್ನು ತಮ್ಮ ದೇಶದಲ್ಲಿ ನಿರ್ಮಿಸಿಕೊಂಡಿದ್ದು, ಇದರ ಮುಂದೆ ಡಾ.ಬ್ರೋ ಫೋಟೋ ತೆಗೆಸಿಕೊಂಡಿದ್ದಾರೆ.

ಇದೀಗ ಸಾಮಾಜಿಕ ಜಾಲತಾಣದಲ್ಲಿ ಡಾ.ಬ್ರೋ ಹಂಚಿಕೊಂಡಿರುವ ಈ ಪೋಟೋಗಳನ್ನು ನೋಡಿದ ನೆಟ್ಟಿಗರು ಚೀನಾದಲ್ಲಿ ನಮ್ಮ ಕನ್ನಡದ ಕಂದ, ಎಲ್ಲಾ ನಕಲಿಗಳ ಮಧ್ಯೆ ನಮ್ಮ ಕನ್ನಡದ ಅಸಲಿ ಚಿನ್ನ ಡಾ.ಬ್ರೋ, ಮೂರ್ತಿ ಚಿಕ್ಕದು ಸಾಧನೆ ಅತೀ ದೊಡ್ಡದು ಅಂತೆಲ್ಲಾ ಕಾಮೆಂಟ್ ಮಾಡಿದ್ದಾರೆ.

ಅರ್ಚಕರ ಮಗನಾಗಿ ಕುಟುಂಬದಲ್ಲಿ ಹುಟ್ಟಿ, ಪೌರೋಹಿತ್ಯ ಕಲಿತು, ಪೂಜಾ ಪುನಸ್ಕಾರ ಮಾಡುತ್ತ ಜೀವನ ಸಾಗಿಸುತ್ತಿದ್ದ ಸಾಮಾನ್ಯ ಹುಡುಗ  ಡಾ.ಬ್ರೋಇಂದು ಯೂಟ್ಯೂಬ್​ ಮೂಲಕ ಕೋಟ್ಯಂತರ ಕನ್ನಡಿಗರ ಹೃದಯ ಗೆದ್ದಿದ್ದಾರೆ.

ನಮಸ್ಕಾರ​ ದೇವ್ರು... ಎಂದರೆ ಸಾಕು. ಮೊದಲು ನೆನಪಾಗೋದೇ ಡಾ.ಬ್ರೋ. ಕನ್ನಡದ ಯುವಕನೊಬ್ಬ ಬಹುತೇಕ ಎಲ್ಲಾ ದೇಶಗಳನ್ನೂ ಸುತ್ತಿ ಅಲ್ಲಿನ ಪರಿಚಯ ಮಾಡುವ ಪರಿ ಅಂತೂ ಅತ್ಯದ್ಭುತವಾದದ್ದೆ. 

ಯೂಟ್ಯೂಬ್​ನಲ್ಲಿ ಅಲ್ಪ ಕಾಲದಲ್ಲಿಯೇ ಕೋಟಿ ಕೋಟಿ ಅಭಿಮಾನಿಗಳನ್ನು ಪಡೆದಿರುವ ಡಾ.ಬ್ರೋ ವಿಶೇಷತೆ ಎಂದರೆ ಯಾವ ದೇಶಕ್ಕೆ ಹೋದರೂ ಅಲ್ಲಿ ಕನ್ನಡದಲ್ಲಿಯೇ ಮಾತನಾಡಿ ಕನ್ನಡಿಗರ ಹೃದಯ ಗೆಲ್ಲುತ್ತಿದ್ದಾರೆ. 

Latest Videos

click me!