ಕುದುರೆಮುಖ ವನ್ಯಜೀವಿ ವಿಭಾಗದ ಪ್ರಮುಖ ಚಾರಣ ತಾಣಗಳಾದ ಕುದುರೆಮುಖ, ಗಂಗಡಿಕಲ್, ನೇತ್ರಾವತಿ ಹಾಗೂ ಕುರಿಂಜಾಲ್ ಬೆಟ್ಟಗಳಿಗೆ ಜೂ. 1ರಿಂದ ಚಾರಣಕ್ಕೆ ಅಧಿಕೃತವಾಗಿ ಅನುಮತಿ ನೀಡಲಾಗಿದೆ. ಚಾರಣಿಗರು 'ಅರಣ್ಯ ವಿಹಾರ' ವೆಬ್‌ಸೈಟ್ ಮೂಲಕ ಮುಂಗಡ ಬುಕ್ಕಿಂಗ್ ಮಾಡುವುದು ಕಡ್ಡಾಯವಾಗಿದೆ.
ಕಾರ್ಕಳ: ಪಶ್ಚಿಮ ಘಟ್ಟಗಳ ಸೊಬಗನ್ನು ಸವಿಯಲು ಕಾತರದಿಂದ ಕಾಯುತ್ತಿದ್ದ ಚಾರಣ ಆಸಕ್ತರಿಗೆ ಸಂತಸದ ಸುದ್ದಿ. ಕುದುರೆಮುಖ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿರುವ ಕುದುರೆಮುಖ, ಗಂಗಡಿಕಲ್, ನೇತ್ರಾವತಿ ಹಾಗೂ ಕುರಿಂಜಾಲ್ ಬೆಟ್ಟಗಳ ಚಾರಣಕ್ಕೆ ಅರಣ್ಯ ಇಲಾಖೆ ಜೂ. 1ರಿಂದ ಅಧಿಕೃತ ಅನುಮತಿ ನೀಡಿದೆ.
25
ನಾಲ್ಕು ಪ್ರಮುಖ ಚಾರಣ ತಾಣ
ಅರಣ್ಯ ಇಲಾಖೆ ಪ್ರಕಟಣೆ ಪ್ರಕಾರ,ಈ ನಾಲ್ಕು ಪ್ರಮುಖ ಚಾರಣ ತಾಣಗಳಿಗೆ ಭೇಟಿ ನೀಡಲು ಬಯಸುವವರು ಕಡ್ಡಾಯವಾಗಿ ‘ಅರಣ್ಯ ವಿಹಾರ’ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಮುಂಗಡ ಬುಕ್ಕಿಂಗ್ ಮಾಡಿಕೊಳ್ಳಬೇಕು. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಹೊಸ ಪ್ರಮಾಣಿತ ಕಾರ್ಯವಿಧಾನ (ಎಸ್‌ಒಪಿ) ಅನುಸಾರ ಚಾರಣ ಚಟುವಟಿಕೆಗಳನ್ನು ನಡೆಸಲಾಗುತ್ತಿದ್ದು, ಪರಿಸರ ಸಂರಕ್ಷಣೆ ಹಾಗೂ ಚಾರಣಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
35
300 ಮಂದಿ ಸ್ಥಳೀಯ ಗೈಡ್‌ಗಳಿಗೆ ವಿಶೇಷ ತರಬೇತಿ
ಕುದುರೆಮುಖ ವನ್ಯಜೀವಿ ವಿಭಾಗದ ಡಿಎಫ್‌ಒ ಶುವರಾಮ್ ಬಾಬು ಅವರು ಮಾಹಿತಿ ನೀಡಿ, ಚಾರಣಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು 300 ಮಂದಿ ಸ್ಥಳೀಯ ಗೈಡ್‌ಗಳಿಗೆ ವಿಶೇಷ ತರಬೇತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಈ ಗೈಡ್‌ಗಳಿಗೆ ವಾಕಿಟಾಕಿ, ಪ್ರಥಮ ಚಿಕಿತ್ಸಾ ಕಿಟ್, ಸುರಕ್ಷತಾ ಜಾಕೆಟ್ ಸೇರಿದಂತೆ ಅಗತ್ಯ ಸುರಕ್ಷತಾ ಪರಿಕರಗಳನ್ನು ಒದಗಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ತಕ್ಷಣ ನೆರವು ಒದಗಿಸುವ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.
ಚಾರಣದ ವೇಳೆ ಹಾದಿ ತಪ್ಪುವ ಸಾಧ್ಯತೆಯನ್ನು ಕಡಿಮೆಗೊಳಿಸಲು ಮಾರ್ಗದುದ್ದಕ್ಕೂ ಸೂಚನಾ ಫಲಕಗಳು, ದಿಕ್ಕು ಸೂಚಿಸುವ ಸೈನ್‌ಬೋರ್ಡ್‌ಗಳು ಹಾಗೂ ಸ್ಥಳದ ಮಾಹಿತಿ ಒಳಗೊಂಡ ಹ್ಯಾಂಡ್‌ಬುಕ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. ಚಾರಣಿಗರು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.
55
ಕುದುರೆಮುಖ ವಲಯದ ಬೆಟ್ಟ
ಇದರೊಂದಿಗೆ ಇನ್ನುಳಿದ ಪ್ರಮುಖ ಚಾರಣ ತಾಣಗಳನ್ನು ಜೂ.15ರ ಬಳಿಕ ಸಾರ್ವಜನಿಕರಿಗೆ ಮುಕ್ತಗೊಳಿಸುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಮಳೆಗಾಲದ ಆರಂಭದಲ್ಲಿ ಹಸಿರು ಹೊದಿಕೆ ತೊಟ್ಟಿರುವ ಕುದುರೆಮುಖ ವಲಯದ ಬೆಟ್ಟಗಳು ಈಗಾಗಲೇ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದು, ಚಾರಣ ಆರಂಭವಾಗಿರುವುದು ಪ್ರಕೃತಿ ಪ್ರಿಯರಲ್ಲಿ ಹೊಸ ಉತ್ಸಾಹ ಮೂಡಿಸಿದೆ.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.