ನೇರಳೆ ಮಾರ್ಗದ ಮೆಟ್ರೊ ನಾಳೆ 2 ಗಂಟೆ ಸಂಚರಿಸಲ್ಲ: ಯಾವೆಲ್ಲಾ ಮಾರ್ಗ? ಫುಲ್​ ಡಿಟೇಲ್ಸ್​ ಇಲ್ಲಿದೆ

Published : May 16, 2026, 03:43 PM IST

ಮೇ 17ರ ಭಾನುವಾರದಂದು, ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ತಾಂತ್ರಿಕ ನಿರ್ವಹಣಾ ಕಾಮಗಾರಿಯಿಂದಾಗಿ ಮೆಟ್ರೋ ಸಂಚಾರದಲ್ಲಿ ಭಾಗಶಃ ವ್ಯತ್ಯಯ ಉಂಟಾಗಲಿದೆ. ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ನಿಲ್ದಾಣಗಳ ನಡುವೆ ಬೆಳಗ್ಗೆ 7 ರಿಂದ 9 ಗಂಟೆಯವರೆಗೆ ಸೇವೆ ಸ್ಥಗಿತಗೊಳ್ಳಲಿದೆ.

PREV
15
ಕಾಮಗಾರಿ ಹಿನ್ನೆಲೆ ಭಾಗಶಃ ರದ್ದು

ನಮ್ಮ ಮೆಟ್ರೊದಲ್ಲಿ ದಿನನಿತ್ಯ ಲಕ್ಷಾಂತರ ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಾರೆ. ಇದಕ್ಕಾಗಿ ಮೆಟ್ರೊ ವಿಸ್ತರಣೆ ನಡೆಯುತ್ತಿದೆ. ಇದರ ಕಾಮಗಾರಿಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ, ನಾಳೆ ಅರ್ಥಾತ್​ ಮೇ 17ರ ಭಾನುವಾರ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ತಾಂತ್ರಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಇದರಿಂದಾಗಿ ಹೊಸಹಳ್ಳಿ-ಕಬ್ಬನ್ ಪಾರ್ಕ್ ನಿಲ್ದಾಣಗಳ ನಡುವೆ ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಒಟ್ಟು ಎರಡು ಗಂಟೆಗಳ ಅವಧಿಗೆ ರೈಲು ಸಂಚಾರದಲ್ಲಿ ಭಾಗಶಃ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಪ್ರಕಟಣೆಯಲ್ಲಿ ತಿಳಿಸಿದೆ.

25
ಯಾವೆಲ್ಲಾ ಮಾರ್ಗ?

ತುರ್ತು ನಿರ್ವಹಣಾ ಕಾಮಗಾರಿಗಾಗಿ ನೇರಳೆ ಮಾರ್ಗದಲ್ಲಿನ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ-ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ನಾಲ್ಕು ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ಸೇವೆಯನ್ನು ತಾತ್ಕಾಲಿಕವಾಗಿ 2 ಗಂಟೆಗಳ ಕಾಲ ಸ್ಥಗಿತಗೊಳಿಸಲಾಗುತ್ತದೆ. ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಸಂಚಾರ ಇರುವುದಿಲ್ಲ. ಈ ಮಾರ್ಗದಲ್ಲಿ ಓಡಾಡುವ ಪ್ರಯಾಣಿಕರಿಗೆ ಸಂಚಾರ ಅಡಚರಣೆ ಎದುರಾಗಲಿದೆ. ಬದಲಾವಣೆ ನೋಡಿಕೊಂಡು ಪ್ರಯಾಣಿಕರು ಪ್ರಯಾಣ ಯೋಜಿಸುವಂತೆ ತಿಳಿಸಲಾಗಿದೆ.

35
ಹಸಿರು, ಹಳದಿ ಮಾರ್ಗಕ್ಕೆ ತೊಂದರೆ ಇಲ್ಲ

ಹೊಸಹಳ್ಳಿ ಹಾಗೂ ಕಬ್ಬನ್ ಪಾರ್ಕ್ ನಿಲ್ದಾಣಗಳ ನಡುವೆ ಕಾಮಗಾರಿ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಆದರೆ, ಹಸಿರು, ಹಳದಿ ಮಾರ್ಗಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಬೆಳಗ್ಗೆ 9:00 ಗಂಟೆಯ ನಂತರ ಈ ಮಾರ್ಗದಲ್ಲಿ ಎಂದಿನಂತೆ ರೈಲುಗಳು ಸಂಚರಿಸಲಿವೆ. ಪರ್ಯಾಯ ಮಾರ್ಗಗಳಲ್ಲಿ ಎಂದಿನಂತೆ ಸಂಚಾರ ಲಭ್ಯವಿರುತ್ತದೆ.

45
ಉಳಿದ ರೈಲ್ವೆ ಸೇವೆ ಲಭ್ಯ

ಇನ್ನುಳಿದ ಮಾರ್ಗಗಳಲ್ಲಿ ಬೆಳಗ್ಗೆ 7 ರಿಂದ ರೈಲು ಸೇವೆಗಳು ಲಭ್ಯವಿರಲಿವೆ. ಚಲ್ಲಘಟ್ಟದಿಂದ ವಿಜಯನಗರದವರೆಗೆ ಮತ್ತು ಎಂ.ಜಿ. ರಸ್ತೆಯಿಂದ ವೈಟ್‌ಫೀಲ್ಡ್‌ (ಕಾಡುಗೋಡಿ) ನಿಲ್ದಾಣಗಳ ನಡುವೆ ರೈಲುಗಳು ಎಂದಿನ ವೇಳಾಪಟ್ಟಿಯಂತೆ ಚಲಿಸಲಿವೆ. ಮಾದಾವರ ಮತ್ತು ರೇಷ್ಮೆ ಸಂಸ್ಥೆ ನಿಲ್ದಾಣಗಳ (ಹಸಿರು ಮಾರ್ಗ) ನಡುವಿನ ಸಂಚಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಆರ್.ವಿ. ರಸ್ತೆ ಮತ್ತು ಬೊಮ್ಮಸಂದ್ರ (ಹಳದಿ ಮಾರ್ಗ) ನಡುವಿನ ಮೆಟ್ರೋ ರೈಲುಗಳು ಸಹ ಎಂದಿನಂತೆ ಕಾರ್ಯನಿರ್ವಹಿಸಲಿವೆ.

55
ಚಿಕ್ಕದಾಗಿ ಫುಲ್​ ಡಿಟೇಲ್ಸ್ ಇಲ್ಲಿದೆ

* ಚಲ್ಲಘಟ್ಟ - ವಿಜಯನಗರವರೆಗೆ ಸಂಚಾರ ಎಂದಿನಂತೆ ಇರಲಿದೆ.

* ಎಂ.ಜಿ. ರಸ್ತೆ -ವೈಟ್‌ಫೀಲ್ಡ್ (ಕಾಡುಗೋಡಿ) ವರೆಗೆ ಸೇವೆ ಲಭ್ಯವಿದೆ.

* ಆ‌ರ್.ವಿ. ರಸ್ತೆ - ಬೊಮ್ಮಸಂದ್ರ ಹಳದಿ ಮಾರ್ಗದಲ್ಲಿ ಸೇವೆ ಇರಲಿದೆ.

* ಹಸಿರು ಮಾರ್ಗದಲ್ಲಿ ಸಂಚಾರ ಇರಲಿದೆ.

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories